Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಅಕ್ಟೋಬರ್ 3, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಅ.3 NEWS DESK : ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ರೂ. 2ಸಾವಿರ ಮೊತ್ತ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು. ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ 99 ಶೇ ಯಾಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ.

ಜನರ ಹಬ್ಬವಾಗಲಿ ::  ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು. ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ಹಂ.ಪ. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಎಂದರು. ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ.

ಜನರ ಆಶೀರ್ವಾದ ಇರುವರೆಗೆ ಆಡಳಿತ ::  ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ. ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ. ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ.  ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ ಎಂದು ಹೇಳಿದರು. ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.