Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪಲು ದಸರಾ : ಅ.11 ರಂದು ಬಹುಭಾಷಾ ಕವಿಗೋಷ್ಠಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪಲು ದಸರಾ : ಅ.11 ರಂದು ಬಹುಭಾಷಾ ಕವಿಗೋಷ್ಠಿ*

ಅಕ್ಟೋಬರ್ 3, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.3 NEWS DESK : ಶ್ರೀ ಕಾವೇರಿ ದಸರಾ ಸಮಿತಿ ಮತ್ತು ಪೊನ್ನಂಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ಅ.11 ರಂದು ಗೋಣಿಕೊಪ್ಪಲು ದಸರಾ ರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಪ್ರತಿವರ್ಷದಂತೆ ಕನ್ನಡ, ಕೊಡವ, ಅರೆಭಾಷೆ, ತುಳು, ಕೊಂಕಣಿ, ಹವ್ಯಕ, ಬ್ಯಾರಿ, ಯರವ, ಕುಂಬಾರ, ಹಿಂದಿ, ತಮಿಳು, ಮಲೆಯಾಳಂ, ಮರಾಠಿ ಸೇರಿದಂತೆ 13 ಭಾಷೆಯ ಕವನಗಳನ್ನು 78 ಕವಿಗಳು ಕವನಗಳನ್ನು ವಾಚಿಸಲಿದ್ದಾರೆ ಎಂದು ತಿಳಿಸಿದರು. ಕನ್ನಡ ಭಾಷೆಯ ಚುಟುಕು ಕವನ 4 ಕವಿಗಳು ವಾಚಿಸಲಿದ್ದಾರೆ.  ಬೆಳೆಯ ಸಿರಿ ಮೊಳಕೆಯಲ್ಲಿ ಎನ್ನುವಂತೆ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಮತ್ತು ಮಕ್ಕಳಲ್ಲಿ ಸಾಹಿತ್ಯ ಆಸಕ್ತಿ ಮೂಡಿಸುವ ಸಲುವಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಕವನಗೋಷ್ಠಿ (6 ರಿಂದ 13 ) ಏರ್ಪಡಿಸಲಾಗಿದೆ. 11 ಬಾಲ ಪ್ರತಿಭೆಗಳು ಕವನ ವಾಚನ ಮಾಡಲಿದ್ದಾರೆ. ಕನ್ನಡದಲ್ಲಿ 6 ಮತ್ತು ಇಂಗ್ಲೀಷಿನಲ್ಲಿ 5 ಬಾಲ ಕವಿಗಳು ಕವನ ವಾಚನ ಮಾಡಲಿದ್ದಾರೆ. ಕವಿಗೋಷ್ಠಿಗೆ ಆಗಮಿಸುವ ಎಲ್ಲಾ ಕವಿಗಳಿಗೂ ಗೌರವದಿಂದ ವೇದಿಕೆಗೆ ಆಹ್ವಾನಿಸಿ ಕವನ ವಾಚನದ ನಂತರ ಅವರಿಗೆ ಗೌರವ ಸಮರ್ಪಣೆ, ಸಂಭಾವನೆ ಮತ್ತು ಕೊಡಗಿನ ಲೇಖಕರ ಒಂದು ಪುಸ್ತಕವನ್ನು ಕೂಡ ನೀಡಲಾಗುವುದು.  ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಸುಳ್ಯ, ಬೆಳಗಾವಿ, ಮೈಸೂರು ಹೀಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕವಿಗಳು ತಮ್ಮ ಕವನವನ್ನು ಕಳುಹಿಸಿದ್ದಾರೆ. ಜೊತೆಗೆ ಇದೇ ಸಂದರ್ಭದಲ್ಲಿ ಒಂದು ಸಾಹಿತಿಕ ಕಾರ್ಯವು ಕೂಡ ನಡೆಯಲಿದೆ ಜಿಲ್ಲೆಯ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರು ಅಂಕಣಕಾರರಾಗಿ ಹಲವಾರು ಪತ್ರಿಕೆಗಳಲ್ಲಿ ಪ್ರಕಟಿಸಿದ 67 ಲೇಖನಗಳನ್ನು ಪುಸ್ತಕ ರೂಪದಲ್ಲಿ ಲೇಖನ ಸೌರಭ ಎನ್ನುವ ಹೆಸರಿನಲ್ಲಿ ಪ್ರಕಟಪಡಿಸಿದ್ದಾರೆ ಅದರ ಬಿಡುಗಡೆ ಕಾರ್ಯಕ್ರಮವು ಕೂಡ ಅಂದು ಜರುಗಲಿದೆ‌ ಎಂದರು. ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ, ಶ್ರೀ ಕಾವೇರಿ ದಸರಾ ಸಮಿತಿ ನಾಡಿನ ಸಾಹಿತ್ಯ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ 10 ದಿನಗಳ ಕಾಲ ಪ್ರತಿದಿನವೂ ದೇವಿಯ ಪ್ರತಿಷ್ಠಾಪನೆಯೊಂದಿಗೆ ಶಾಸ್ತ್ರೋಕ್ತವಾದ ಪೂಜಾ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿಕೊಂಡು ಬರುತ್ತಿದೆ. ಸಾಹಿತ್ಯ ಕಲೆ ಇವುಗಳ ಪ್ರೋತ್ಸಾಹಕ್ಕಾಗಿ ಹಲವಾರು ವರ್ಷಗಳಿಂದ ಬಹು ಭಾಷಾ ಕವಿಗೋಷ್ಠಿ ಯನ್ನು ಕನ್ನಡ ಸಾಹಿತ್ಯ ಪರಿಷತ್ ನೊಂದಿಗೆ ಜೊತೆಗೂಡಿ ನಡೆಸುತ್ತಿದೆ. ಪ್ರತಿ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಕವಿಗಳು ಸೇರಿ ಉತ್ತಮ ರೀತಿಯ ಕವನ ವಾಚನ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು. ಕವಿಗೋಷಿ ಸಮಿತಿಯ ಅಧ್ಯಕ್ಷ ಕೋಳೆರ ದಯ ಚಂಗಪ್ಪ ಮಾತನಾಡಿ, ಗೋಣಿಕೊಪ್ಪಲಿನ ದಸರಾ ವೇದಿಕೆಯಲ್ಲಿ ನಡೆಯುವ ಈ ಬಹುಭಾಷಾ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕೊಡಗು ಜಿಲ್ಲೆಯ ಹಿರಿಯ ಸಾಹಿತಿಗಳು ಮತ್ತು ಕವಿಗಳು ನಾಗೇಶ್ ಕಾಲೂರು ವಹಿಸಲಿದ್ದು, ಉದ್ಘಾಟನೆಯನ್ನು ಜಿಲ್ಲೆಯ ಹಿರಿಯ ಪತ್ರಕರ್ತರು, ದಿ ಹಿಂದು ಪತ್ರಿಕೆಯ ಪ್ರಿನ್ಸಿಪಲ್ ಸಂಪಾದಕ ಜೀವನ್ ಚಿಣ್ಣಪ್ಪ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿಗಳು ನಿವೃತ್ತ ಪ್ರಾಂಶುಪಾಲರು ಆದ ಡಾ. ಜೆ.ಸೋಮಣ್ಣ ಭಾಗವಹಿಸಲಿದ್ದಾರೆ. ಅಲ್ಲದೆ ವೇದಿಕೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷರು ಮತ್ತು ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಕವಿಗೋಷ್ಠಿ ಸಮಿತಿ ಸಂಚಾಲಕಿ ಎಸ್.ಎಂ ರಜಿನಿ, ಗೌರವ ಕಾರ್ಯದರ್ಶಿ ಶೀಲಾ ಬೋಪಣ್ಣ, ಕಾವೇರಿ ದಸರಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಂದಾದೇವಯ್ಯ ಉಪಸ್ಥಿತರಿರುತ್ತಾರೆ ಎಂದರು. ಬಹುಭಾಷಾ ಕವಿಗೋಷ್ಠಿಯ ಸಂಚಾಲಕಿ ಎಸ್.ಎಂ.ರಜನಿ ಮಾತನಾಡಿ, ಗೋಣಿಕೊಪ್ಪಲು ದಸರಾ ಕವಿ ಗೋಷ್ಠಿಗೆ ಆಹ್ವಾನಿಸಿದಾಗ ಇಷ್ಟು ಬಾರಿಗಿಂತಲೂ ಹೆಚ್ಚು ಕವನಗಳನ್ನು ಕವಿಗಳು ಕಳುಹಿಸಿ ಕೊಟ್ಟಿರುತ್ತಾರೆ. ಈ ಬಾರಿ 130 ಕವನಗಳು ಅಂಚೆ, ವಾಟ್ಸಾಪ್ ಮತ್ತು ಇ-ಮೇಲ್ ಮೂಲಕ ಬಂದಿದ್ದು, ಆಯ್ಕೆ ಸಮಿತಿಯು 80 ಕವಿಗಳ ಕವಿತೆಗಳನ್ನು, ನಾಲ್ಕು ಚುಟುಕು ಕವನಗಳನ್ನು ಆರಿಸಲಾಗಿದೆ. ಮಕ್ಕಳ ಕವಿಗೋಷ್ಠಿಯನ್ನು ಆಯೋಜಿಸಿದ್ದು ಕನ್ನಡದಲ್ಲಿ 6 ಮತ್ತು ಇಂಗ್ಲಿಷ್ ನಲ್ಲಿ 5 ಕವನಗಳು ಬಂದಿರುತ್ತವೆ. ಕನ್ನಡ ಭಾಷೆಯ 40 ಕವನಗಳು ಬಂದಿದ್ದು ಕನ್ನಡ ಉಪಭಾಷೆಗಳಾದ ಕೊಡವ ಭಾಷೆಯ 10 ಕವನಗಳು,ಅರೆ ಭಾಷೆಯ 5 ಕವನಗಳು, ಎರವ ಭಾಷೆಯ 5 ಕವನಗಳು, ತುಳು ಭಾಷೆಯ 4 ಕವನಗಳು, ಕುಂಬಾರ ಭಾಷೆಯ 2 ಕವನಗಳು, ಕೊಂಕಣಿ ಭಾಷೆಯ 1 ಕವನ, ಬ್ಯಾರಿ ಭಾಷೆಯ 1ಕವನ ಅಲ್ಲದೆ ಹಿಂದಿ ಭಾಷೆಯ 3 ಕವನಗಳು, ಮರಾಠಿ ಭಾಷೆಯ 2 ಕವನಗಳು ತಮಿಳು ಭಾಷೆಯ 2 ಕವನಗಳು ಮತ್ತು ಮಲಯಾಳಂ ಭಾಷೆಯ 2 ಕವನಗಳು ಹಾಗೂ ಇಂಗ್ಲಿಷ್ ಭಾಷೆಯ 1 ಕವನಗಳ ವಾಚನವನ್ನು ಕವಿಗಳು ಮಾಡಲಿದ್ದಾರೆ‌ ಎಂದರು. ಸುದ್ದಿಗೋಷ್ಠಿಯಲ್ಲಿ  ಸಮಿತಿಯ ಪ್ರಧಾನ ಕಾರ್ಯದರ್ಶಿ ಶೀಲಾ ಬೋಪಣ್ಣ, ಸಹಕಾರ್ಯದರ್ಶಿ ಟಿ.ಆರ್.ವಿನೋದ್, ನಿರ್ದೇಶಕರುಗಳಾದ ಚಂದನಾ ಮಂಜುನಾಥ್, ಚಂದನ್ ಕಾಮತ್, ಮಹೇಶ್,  ಓಮನ, ಮಹಿಳಾ ದಸರಾ ಸಮಿತಿಯ ಅಧ್ಯಕ್ಷೆ ಮಂಜುಳಾ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.