Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಫಿ ದಸರಾ : ಕಾಫಿ ಬೆಳೆಗಾರರಿಗೆ ನೆರವು : ಕೃಷಿ ಸಚಿವ ಚೆಲುವರಾಯ ಸ್ವಾಮಿ ಭರವಸೆ*
ಇತ್ತೀಚಿನ ಸುದ್ದಿಗಳು

*ಕಾಫಿ ದಸರಾ : ಕಾಫಿ ಬೆಳೆಗಾರರಿಗೆ ನೆರವು : ಕೃಷಿ ಸಚಿವ ಚೆಲುವರಾಯ ಸ್ವಾಮಿ ಭರವಸೆ*

October 6, 20244 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.6 : ಕೊಡಗು ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ ಜೊತೆಗೆ ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಲಾಗಿರುವ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಕೃಷಿ ಮತ್ತು ತೋಟಗಾರಿಕೆ ಸಮಗ್ರ ಅಭಿವೃದ್ಧಿ ಬಗ್ಗೆ ತೋಟಗಾರಿಕೆ ಸಚಿವರ ಜತೆ ಚರ್ಚಿಸಲಾಗಿವುದು. ಹಾಗೆಯೇ ಕಾಫಿ ಬೆಳೆಗಾರರಿಗೆ ಮತ್ತಷ್ಟು ಸಹಕಾರಿ ಕಾರ್ಯಕ್ರಮಗಳನ್ನು ರೂಪಿಸಲು ಸಂಬಂಧಪಟ್ಟವರ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವರಾದ ಚಲುವರಾಯ ಸ್ವಾಮಿ ಅವರು ಹೇಳಿದರು. ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವರು ನುಡಿದರು. ವರ್ಷದಿಂದ ವರ್ಷಕ್ಕೆ ಭತ್ತ ಬೆಳೆಯುವುದು ಕಡಿಮೆಯಾಗುತ್ತಿದೆ. ಆದ್ದರಿಂದ  ಪ್ರಸಕ್ತ ವರ್ಷ ಭತ್ತ ಬೆಳೆಗೆ ಸಹಾಯಧನ ಕಲ್ಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎನ್.ಚಲುವರಾಯಸ್ವಾಮಿ ಅವರು ವಿವರಿಸಿದರು. ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಕೃಷಿ ಹೊಂಡ ನಿರ್ಮಿಸಲು ಉದ್ದೇಶಿಸಲಾಗಿದೆ. ಆ ದಿಸೆಯಲ್ಲಿ ಈ ವರ್ಷ 250 ಕೃಷಿ ಹೊಂಡ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದರು. ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಂದ ಕೊಡಗು ಜಿಲ್ಲೆಗೆ ಆಗಬೇಕಿರುವ ಕೆಲಸಗಳ ಸಂಬಂಧ ತೋಟಗಾರಿಕೆ ಸಚಿವರ ಜತೆ ಚರ್ಚಿಸಲಾಗುವುದು ಎಂದರು. ವಾರಣಾಸಿ ಮಾದರಿಯಲ್ಲಿ  ಭಾಗಮಂಡಲದಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚಿಂತನೆ ಇದ್ದು, ಜಲ ಸಂಪನ್ಮೂಲ ಸಚಿವರು ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಜತೆ ಮಾತನಾಡಲಾಗುವುದು ಎಂದರು. ಮಂಡ್ಯ ಸೇರಿದಂತೆ ಇಡೀ ದಕ್ಷಿಣ ರಾಜ್ಯಗಳಿಗೆ ಕುಡಿಯುವ ನೀರು ಮತ್ತು ವ್ಯವಸಾಯಕ್ಕೆ ನೀರು ಕೊಡುವ ಕಾವೇರಿ ಮಾತೆ ಉಗಮ ಸ್ಥಾನ ಇರುವುದು ಕೊಡಗು ಜಿಲ್ಲೆಯಲ್ಲಿ, ಹಾಗಾಗಿ ಕೊಡಗು ಜಿಲ್ಲೆ ಬಗ್ಗೆ ವಿಶೇಷ ಅಭಿಮಾನ ಹಾಗೂ ಕೃತಜ್ಞತೆ ಇದೆ ಎಂದು ಕೃಷಿ ಸಚಿವರು ನುಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆ ಹೆಚ್ಚಿನ ಉತ್ಪಾದನೆ ಇದೆ. ಇದರಿಂದ ವ್ಯಾಪಾರ, ವಹಿವಾಟು ಪ್ರೋತದಾಹಿಸುವುದು ಅಗತ್ಯ, ಆ ದಿಸೆಯಲ್ಲಿ ಕಾಫಿಯ ರುಚಿ, ಅದರ ಅನುಭವ ಬಗ್ಗೆ ಎಲ್ಲೆಡೆ ಪರಿಚಯ ಆಗಬೇಕು ಎಂದರು. ಕಾಫಿ ಒಂದು ವಾಣಿಜ್ಯ ಬೆಳೆಯಾಗಿದ್ದು, ಈ ಬೆಳೆಗೆ ಯೋಜನೆ ರೂಪಿಸಬೇಕು. ಕಾಫಿ ಬೆಳೆ ಜತೆಗೆ ಕಿತ್ತಳೆ, ಕರಿಮೆಣಸು ಸೇರಿದಂತೆ ಬೇರೆ ಬೇರೆ ಬೆಳೆ ಬೆಳೆಯಲಾಗುತ್ತಿದೆ. ಆದ್ದರಿಂದ ಮುಂದಿನ ಬಜೆಟ್ ನಲ್ಲಿ ಏನಾದರೂ ಹೊಸ ಯೋಜನೆ ನೀಡಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು. ಕೊಡಗು ವಿಶೇಷ ಸಂಸ್ಕೃತಿ, ಭಾಷೆ ಹೊಂದಿರುವ ವಿಶಿಷ್ಟ  ಜಿಲ್ಲೆಯಾಗಿದ್ದು, ನಾಡಿಗೆ ತಮ್ಮದೇ ಆದ ಕೊಡುಗೆ ನೀಡಿದೆ ಎಂದರು. ದಸರಾ ಆಚರಣೆಯಿಂದ ವ್ಯಾಪಾರ, ವ್ಯವಹಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಸಾಧ್ಯವಾದಷ್ಟು ಅಗತ್ಯ ಸಹಕಾರ ನೀಡುತ್ತಿದೆ ಎಂದು ದಿನೇಶ್ ಗುಂಡುರಾವ್ ಅವರು ಹೇಳಿದರು. ಸಮಾಜ ಅಭಿವೃದ್ಧಿ ಪಥದತ್ತ ಸಾಗುವಲ್ಲಿ ಬದಲಾವಣೆ ಅನಿವಾರ್ಯ, ಬದಲಾವಣೆ ಜತೆಗೆ ಮೂಲ ಸಂಸ್ಕೃತಿ ಉಳಿಸಿಕೊಳ್ಳಬೇಕು. ಸಮಾಜ ನಿಂತ ನೀರಾಗದೆ, ಹರಿಯುವ ನೀರಾಗಬೇಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಪ್ರತಿಪಾದಿಸಿದರು. ಕೊಡಗು ಜಿಲ್ಲೆಯ ವಿಶಿಷ್ಟ ಪರಂಪರೆ ಸಂಸ್ಕೃತಿ ಉಳಿಸಿಕೊಂಡು ಸಾಮರಸ್ಯ ಮತ್ತು ಸಮತೋಲನದ ಬದುಕು ಕಟ್ಟಿಕೊಳ್ಳುವುದು ಅತಿಮುಖ್ಯ ಎಂದು ದಿನೇಶ್ ಗುಂಡುರಾವ್ ಅವರು ಒತ್ತಿ ಹೇಳಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಕಾಫಿ ಸೇವಿಸುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಎಲ್ಲೆಡೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಕಾಫಿ ಬೆಳೆಗಾರರ ಸಂಕಷ್ಟ ಸಂಬಂಧ ಕೇಂದ್ರ ಸರ್ಕಾರದ ಗಮನ ಸೆಳೆಯುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು  ಕೃಷಿ ಸಚಿವರಲ್ಲಿ ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಕಾಫಿ ಬೆಳೆಯ ‘ದರ ಉತ್ತಮವಾಗಿದ್ದರೂ ಸಹ ಕಾಫಿ ಬೆಳೆಗಾರರು ಸಾಲಗಾರರಾಗಿದ್ದಾರೆ. ಆದ್ದರಿಂದ ಕಾಫಿ ಬೆಳೆಗಾರರ ಸಂಕಷ್ಟ ಪರಿಹರಿಸಿ, ಅಗತ್ಯ ಸಹಕಾರ, ಸಹಾಯಧನ ಕಲ್ಪಿಸುವಂತಾಗಬೇಕು ಎಂದು ಮನವಿ ಮಾಡಿದರು.   ಜಿಲ್ಲೆಯಲ್ಲಿ ಕಾಫಿ ಜತೆಗೆ ಕಾಳುಮೆಣಸು, ಅಡಿಕೆ, ಬಾಳೆ ಹೀಗೆ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ. ಆದ್ದರಿಂದ ಈ ಬೆಳೆಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಡಾ.ಮಂತರ್ ಗೌಡ ಅವರು ಕೋರಿದರು. ಕೃಷಿ ಕಾರ್ಯವು ಆತ್ಮ ತೃಪ್ತಿಯ ಕೆಲಸವಾಗಿದೆ. ಹೆಚ್ಚಿನ ಖುಷಿ ಕೊಡುತ್ತದೆ ಎಂದು ಡಾ.ಮಂತರ್ ಗೌಡ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಫಿ ದಸರಾ ಮತ್ತಷ್ಟು ಆಕರ್ಷಣೀಯವಾಗಿ ನಿರಂತರವಾಗಿ ನಡೆಯಬೇಕು ಎಂದು ಶಾಸಕರು ಸಲಹೆ ಮಾಡಿದರು. ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವರಗುಂದ ಅವರು ಮಾತನಾಡಿ ಕಾಫಿ ಬೆಳೆಯನ್ನು ಮಣ್ಣಿನಿಂದ ಮಾರುಕಟ್ಟೆ ವರೆಗೆ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು. ಜಿಲ್ಲೆಯಲ್ಲಿ 1.30 ಲಕ್ಷ ಟನ್ ಕಾಫಿ ಬೆಳೆಯಲಾಗುತ್ತಿದೆ. ಆ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಕಾಫಿ ಉತ್ಪಾದಿಸಲು ಅಗತ್ಯ ತರಬೇತಿ ನೀಡಲಾಗುತ್ತಿದೆ ಎಂದರು. ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷವನ್ನು ನಿಯಂತ್ರಣ ಮಾಡಬೇಕು ಎಂದು ಕಾಫಿ ಮಂಡಳಿ ಅಧ್ಯಕ್ಷರು ಕೋರಿದರು. ಕಾಫಿ ಬೆಳೆಗಾರರು ಎದುರಿಸುತ್ತಿರಯವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲಾಗುತ್ತಿದ್ದು, ಒಂದು ವರ್ಷದಲ್ಲಿ ವರದಿ ಬರಲಿದೆ. ಆ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒತ್ತುವರಿ ಜಾಗವನ್ನು ‘ಭೋಗ್ಯ’ ಮಾದರಿಯಲ್ಲಿ ಮುಂದುವರೆಸಲಾಗಿದೆ. ಅದೇ ರೀತಿ ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿಯೂ ಸಹ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು.  ಕೇಂದ್ರ ಸರ್ಕಾರ ಕಾಫಿ ಮಂಡಳಿಗೆ 307 ಕೋಟಿ ರೂ ಬಿಡುಗಡೆ ಮಾಡಿದ್ದು, ಕಾಫಿ ಉತ್ತೇಜನಕ್ಕೆ ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಮತ್ತಷ್ಟು ಶ್ರಮಿಸಲಾಗುವುದು ಎಂದು ದಿನೇಶ್ ದೇವರಗುಂದ ಅವರು ಹೇಳಿದರು. ಕಾಫಿ ಬೆಳೆಗೆ ಅಗತ್ಯ ಪ್ರೋತ್ಸಾಹ ನೀಡುವುದರ ಜೊತೆಗೆ ಅಗತ್ಯ ಸಹಾಯಧನ ಕಲ್ಪಿಸಲಾಗುತ್ತಿದೆ. ಮುಂದಿನ ವರ್ಷ ಕಾಫಿ ಬೆಳೆಯನ್ನು ಭವಿಷ್ಯಕ್ಕಾಗಿ ಬ್ರಾಂಡ್ ಮಾಡಲಾಗುವುದು ಎಂದು ಕಾಫಿ ಮಂಡಳಿ ಅಧ್ಯಕ್ಷರು ನುಡಿದರು. ವಿಶ್ವದಲ್ಲಿ ಅರೆಬಿಕಾ ಕಾಫಿ ಬೆಳೆಯುವುದು ಕಡಿಮೆಯಾಗುತ್ತಿದೆ. ಆದ್ದರಿಂದ ರೋಬಾಸ್ಟ ಕಾಫಿ ಬೆಳೆಗೆ ಬೇಡಿಕೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಗುಣಮಟ್ಟದ ಕಾಫಿ ಬೆಳೆಯಬೇಕು. ಯಾವುದೇ ಕಾರಣಕ್ಕೂ ರಾಜಿಯಾಗಬಾರದು ಎಂದು ಸಲಹೆ ಮಾಡಿದರು. ಫಿಲ್ಟರ್ ಕಾಫಿಗೆ ಹೆಚ್ಚಿನ ಬೇಡಿಕೆ ಇದ್ದು, ಈ ಸಂಬಂಧ ಮೈಸೂರಿನ ಸಿಎಫ್ ಟಿ ಆರ್ ಐ ನಿರ್ದೇಶಕರ ಜತೆ  ಮಾತನಾಡಲಾಗಿದೆ ಎಂದರು. ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ಸಮಿತಿ ಅಧ್ಯಕ್ಷರಾದ  ವೆಂಕಟ್ ರಾಜಾ ಅವರು ಮಾತನಾಡಿ ಮಡಿಕೇರಿ ದಸರಾವನ್ನು ಎಲ್ಲರ ಸಹಭಾಗಿತ್ವದಿಂದ ಜನೋತ್ಸವ ದಸರಾವಾಗಿ ಆಚರಿಸಲಾಗುತ್ತಿದ್ದು, ವಿವಿಧ ರೀತಿಯ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಪ್ರಮುಖರಾದ ನಂದಾ ಬೆಳ್ಯಪ್ಪ, ಅನಿತಾ ನಂದ, ಕೆ.ರಾಜೀವ್, ವಿನೋದ್ ಶಿವಪ್ಪ, ಬಸವರಾಜು, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ದಸರಾ ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ತೆನ್ನೀರ ಮೈನಾ ಇತರರು ಇದ್ದರು. ಕಾಫಿ ದಸರಾ ಸಂಚಾಲಕರಾದ ಅನಿಲ್ ಎಚ್.ಟಿ. ಸ್ವಾಗತಿಸಿದರು, ವಿನೋದ್ ಮೂಡಗದ್ದೆ ನಿರೂಪಿಸಿದರು, ಲಹರಿ ಶಿಕ್ಷಕಿಯರ ಬಳಗದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು, ಬಿ.ವೈ.ರಾಜೇಶ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಕೇರಳ ಸಮಾಜದಿಂದ ಓಣಂ ಆಚರಣೆ : ಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಕರೆ*
Next Article *ಕೂಡಿಗೆಯಲ್ಲಿ ಕೊಡವ ಕೂಟದಿಂದ ಕೈಲ್ ಪೊಳ್ದ್ ಆಚರಣೆ : ಕೊಡವ ಆಚಾರ ವಿಚಾರಗಳನ್ನು ಸಂರಕ್ಷಿಸಲು ಕೂಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಕರೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.