Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪತ್ರಕರ್ತರಿಗೆ ಮಡಿಕೇರಿ ದಸರಾ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು

*ಪತ್ರಕರ್ತರಿಗೆ ಮಡಿಕೇರಿ ದಸರಾ ಕ್ರೀಡಾಕೂಟ*

October 6, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.6 : ಮಡಿಕೇರಿ ದಸರಾ ಸಮಿತಿ ಮತ್ತು ಕ್ರೀಡಾ ಸಮಿತಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾಭವನದಲ್ಲಿ ಪತ್ರಕರ್ತರಿಗೆ ಭಾನುವಾರ ಟಿಟಿ, ಕೇರಂ ಹಾಗೂ ಚೆಸ್ ಸ್ಪರ್ಧೆ ನಡೆಯಿತು.
ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ ಕರ್ಕೆರ ಮಾತನಾಡಿ, ಈಗಾಗಲೇ ತಾಲೂಕು ಮಟ್ಟದ ರಸ್ತೆ ಓಟ, ಮುಕ್ತ ಫುಟ್ಬಾಲ್ ಪಂದ್ಯಾಟ ನಡೆದಿದೆ. ಕೆಲವು ಸ್ಪರ್ಧೆಗಳು ಭಾನುವಾರ ನಡೆದಿದೆ. ಅದೇ ರೀತಿ ಪತ್ರಕರ್ತರಿಗಾಗಿ ವಿವಿದ ಕ್ರೀಡಾಕೂಟ ಆಯೋಜಿಸಲಾಗಿದೆ. ಅ.9 ರಂದು ಚೆಸ್ ಮತ್ತು ಕೇರಂ ಪಂದ್ಯಾಟ ನಡೆಯಲಿದೆ. ಅ.10 ರಂದು ಮ್ಯಾಟ್ ಕಬಡ್ಡಿ ನಡೆಯಲಿದೆ. ಕ್ರೀಡಾಕೂಟಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಮಾತನಾಡಿ, ದಸರಾ ನಾಡ ಹಬ್ಬ. ಇಂತಹ ಸಂದರ್ಭ ಎಲ್ಲರನ್ನೂ ಒಗ್ಗೂಡಿಸಲು ದಸರಾ ಕ್ರೀಡಾ ಸಮಿತಿ ವತಿಯಿಂದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಒತ್ತಡದಲ್ಲಿರುವ ಪತ್ರಕರ್ತರಿಗೆ ಇಂದು ಕೊಂಚ ವಿರಾಮ ಸಿಕ್ಕಿದಂತಾಗಿದೆ ಎಂದರು. ಈ ಸಂದರ್ಭ ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ.ಬಿ.ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಆದರ್ಶ್ ಅದ್ಕಲೇಗಾರ್, ದಸರಾ ಕ್ರೀಡಾ ಸಮಿತಿ ಸದಸ್ಯ ಸುರ್ಜಿತ್ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಪತ್ರಕರ್ತರು ಪಾಲ್ಗೊಂಡಿದ್ದರು. ಪ್ರಸ್‌ಕ್ಲಬ್ ಸದಸ್ಯರಾದ ಆನಂದ್ ಕೊಡಗು ನಿರುಪಿಸಿದರೆ, ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜಾ ಸ್ವಾಗತಿಸಿ, ಸದಸ್ಯ ರಾಕೇಶ್ ವಂದಿಸಿದರು. ಕ್ರೀಡಾಕೂಟದ ಫಲಿತಾಂಶ: ಮಹಿಳೆಯರ ವಿಭಾಗದಲ್ಲಿ ನಡೆದ ಕೇರಂ ಸಿಂಗಲ್ಸ್ನಲ್ಲಿ ಸವಿತಾ ರೈ ಪ್ರಥಮ ಸ್ಥಾನ ಪಡೆದರೆ, ಉಕ್ಕೇರಂಡ ವಿಶ್ಮ ಪೆಮ್ಮಯ್ಯ ದ್ವಿತೀಯ ಸ್ಥಾನ ಪಡೆದರು. ಟಿಟಿ ಸಿಂಗಲ್ಸ್ ನಲ್ಲಿ ಉದಿಯಂಡ ಜಯಂತಿ ಪ್ರಥಮ ಸ್ಥಾನ ಪಡೆದರೆ, ಸವಿತಾ ರೈ ದ್ವಿತೀಯ ಸ್ಥಾನ ಪಡೆದರು. ಪುರುಷರ ವಿಭಾಗದಲ್ಲಿ ನಡೆದ ಚೆಸ್ ಪಂದ್ಯದಲ್ಲಿ ಎಸ್.ಎ.ರಿಜ್ವಾನ್ ಹುಸೇನ್(ಪ್ರ) ಸ್ಥಾನ ಪಡೆದರೆ, ಕೆ.ಎಲ್.ವರುಣ್ ದ್ವಿತೀಯ ಸ್ಥಾನ ಪಡೆದರು. ಪುರುಷರ ಕೇರಂ ಸಿಂಗಲ್ಸ್ ವಿಭಾಗದಲ್ಲಿ ನವೀನ್ ಡಿಸೋಜಾ(ಪ್ರ), ವಿಶ್ವ ಕುಂಬೂರು(ದ್ವಿ) ಸ್ಥಾನ ಪಡೆದರೆ, ಕೇರಂ ಡಬಲ್ಸ್ ವಿಭಾಗದಲ್ಲಿ ರಜಿತ್ ಕುಮಾರ್ ಮತ್ತು ವಿಶ್ವ ಕುಂಬೂರು(ಪ್ರ), ಶಿವರಾಜ್ ಮತ್ತು ಮಂಜುನಾಥ್ (ದ್ವಿ) ಸ್ಥಾನ ಪಡೆದರು. ಪುರುಷರ ಟಿಟಿ ಸಿಂಗಲ್ಸ್ ವಿಭಾಗದಲ್ಲಿ ಗೋಪಾಲ್ ಸೋಮಯ್ಯ(ಪ್ರ), ಗಣೇಶ್ ಕಾಫಿಲ್ಯಾಂಡ್(ದ್ವಿ) ಸ್ಥಾನ ಪಡೆದರೆ, ಡಬಲ್ಸ್ ವಿಭಾಗದಲ್ಲಿ ಗಣೇಶ್ ಕಾಫಿ ಲ್ಯಾಂಡ್ ಮತ್ತು ಅಲ್ಲಾರಂಡ ವಿಠಲ(ಪ್ರ), ವಿನೋದ್ ಮೂಡಗದ್ದೆ ಮತ್ತು ದಿವಾಕರ್(ದ್ವಿ) ಸ್ಥಾನ ಪಡೆದರು.

Share. Facebook Twitter Pinterest LinkedIn Tumblr Email WhatsApp
Previous Article*ಕೂಡಿಗೆಯಲ್ಲಿ ಕೊಡವ ಕೂಟದಿಂದ ಕೈಲ್ ಪೊಳ್ದ್ ಆಚರಣೆ : ಕೊಡವ ಆಚಾರ ವಿಚಾರಗಳನ್ನು ಸಂರಕ್ಷಿಸಲು ಕೂಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಕರೆ*
Next Article ವಿರಾಜಪೇಟೆ : ಸುಗಮ ಸಂಗೀತವನ್ನು ಉಳಿಸಿ ಬೆಳಸಬೇಕು : ಗಝಲ್ ಕವಿ ಡಾ.ಶ್ರೀ ಶೈಲ ಮಾದಣ್ಣವರ 

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.