Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಕಾಫಿ ಬೆಳೆ ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಕಾಫಿ ಬೆಳೆ ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ : ಶಾಸಕ ಡಾ.ಮಂತರ್ ಗೌಡ*

ಅಕ್ಟೋಬರ್ 7, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 NEWS DESK : ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸುತ್ತಿದ್ದು, ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ಎರಡು ದಿನಗಳ ಕಾಲ ಏರ್ಪಡಿಸಲಾಗಿದ್ದ ಮೊದಲ ವರ್ಷ ಕಾಫಿ ದಸರಾ ಕಾರ್ಯಕ್ರಮದಲ್ಲಿ ಕಾಫಿ ಹಾಗೂ ವಿವಿಧ ಕೃಷಿ ಸಂಬಂಧಿಸಿದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  ಕೊಡಗು ಜಿಲ್ಲೆಯ ಕಾಫಿ ಬೆಳೆಗಾರರಿಗೆ ಕಾಫಿ ದಸರಾವು ಒಂದು ವೇದಿಕೆಯಾಗಿದ್ದು, ಕಾಫಿ ಕೃಷಿಯಲ್ಲಿ ಕೊಡಗಿನ ಜನರು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಮತ್ತಷ್ಟು ಔನತ್ಯಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಬೇಕಿದೆ ಎಂದು ಡಾ.ಮಂತರ್ ಗೌಡ ಸಲಹೆ ಮಾಡಿದರು. ಕಾಫಿ ದಸರಾ ವಿಚಾರ ಸಂಕಿರಣದಲ್ಲಿ ವಿವಿಧ ತಜ್ಞರು, ವಿಜ್ಞಾನಿಗಳು, ಕೃಷಿಕರು ಪಾಲ್ಗೊಂಡು ಕಾಫಿ ಉತ್ತೇಜನ ಸಂಬಂಧಿಸಿದಂತೆ ಹಲವು ಅಭಿಪ್ರಾಯ, ಸಲಹೆ, ಮಾರ್ಗದರ್ಶನ ನೀಡಿದ್ದಾರೆ. ತಜ್ಞರ ಅಭಿಪ್ರಾಯವನ್ನು ಕ್ರೊಢೀಕರಿಸಿ ಕಾಫಿ ಬೆಳೆಯಲ್ಲಿ ಮತ್ತಷ್ಟು ಉತ್ತಮ ಇಳುವರಿ ಪಡೆಯಲು ಶ್ರಮಿಸಬೇಕಿದೆ ಎಂದರು. ಕೊಡಗು ಜಿಲ್ಲೆಯ ಕಾಫಿಗೆ ದೇಶ ವಿದೇಶಗಳಲ್ಲೂ ಮಾರುಕಟ್ಟೆ ಸೌಲಭ್ಯ ಒದಗುವಂತಾಗಬೇಕು. ಆ ನಿಟ್ಟಿನಲ್ಲಿ ಕಾಫಿ ಬೆಳೆಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಡಾ.ಮಂತರ್‍ಗೌಡ ನುಡಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಪ್ರಥಮ ಬಾರಿಗೆ ಕಾಫಿ ದಸರಾ ಏರ್ಪಡಿಸಿರುವುದು ವಿಶೇಷವಾಗಿದೆ. ಕೊಡಗಿನ ಕಾಫಿ ಬೆಳೆ ಪ್ರಗತಿ ಹಾಗೂ ಸಾಧಕರ ಬಗ್ಗೆ ದಾಖಲೀಕರಣವಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾಫಿ ಟೇಬಲ್ ಹೊರತರಲು ಪ್ರಯತ್ನಿಸಲಿದೆ ಎಂದು ತಿಳಿಸಿದರು. ಕಾಫಿ ಬೆಳೆಯ ಪ್ರಗತಿಪರ ಕೃಷಿಕರಾದ ಧರ್ಮರಾಜ ಅವರು ಮಾತನಾಡಿ ಕಾಫಿ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಹಲವು ಪ್ರಯೋಗಗಳನ್ನು ಮಾಡಬೇಕಿದೆ. ಸರಿಯಾದ ಸಮಯಕ್ಕೆ ಮಳೆಯಾಗಬೇಕು. ಜೊತೆಗೆ ರಸಗೊಬ್ಬರ ಪೂರೈಕೆ ಮತ್ತಿತರವನ್ನು ಸಕಾಲದಲ್ಲಿ ನಿರ್ವಹಿಸಿದ್ದಲ್ಲಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು. ಅತಿಯಾದ ರಸಗೊಬ್ಬರವು ಸಹ ಕಾಫಿ ಬೆಳೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಈ ಬಗ್ಗೆ ಎಚ್ಚರವಹಿಸಬೇಕು. ಮಳೆಗೆ ತಕ್ಕಂತೆ ರಸಗೊಬ್ಬರ ಹಾಕಬೇಕು. ಕಾಫಿ ಗಿಡ ಸಂರಕ್ಷಣೆ ಸಂಬಂಧಿಸಿದಂತೆ ಗಾಳಿ, ನೀರು, ಬೆಳಕು ಬಗ್ಗೆ ಕಾಫಿ ಬೆಳೆಗಾರರಲ್ಲಿ ಕನಿಷ್ಠ ಮಾಹಿತಿ ಇರಬೇಕು ಎಂದು ಧರ್ಮರಾಜ ಹೇಳಿದರು. ಕೊಡಗು ಪ್ಲಾಂಟರ್ಸ್ ಅಸೋಷಿಯೇಷನ್‍ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಕೆ.ಕೆ.ವಿಶ್ವನಾಥ ಅವರು ಮಾತನಾಡಿ ಹವಾಮಾನ ವೈಪರೀತ್ಯದಿಂದ ಕಾಫಿ ಬೆಳೆ ಪ್ರದೇಶದಿಂದ ಪ್ರದೇಶಕ್ಕೆ ಇಳುವರಿಯಲ್ಲಿ ವ್ಯತ್ಯಾಸವಾಗಿರುತ್ತದೆ. ಆದ್ದರಿಂದ ಸುಸ್ಥಿರ ಬೆಳೆ ನಿರೀಕ್ಷೆ ಮಾಡುವುದು ಕಷ್ಟಸಾಧ್ಯವಾಗಿದೆ ಎಂದು ವಿವರಿಸಿದರು. ಕಾಫಿ ಬೆಳೆ ಸಂಬಂಧಿಸಿದಂತೆ ಮಾರುಕಟ್ಟೆ ಬೆಲೆ ಗಮನಿಸಿ ಕಾಫಿ ಮಾರಾಟ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರು ಕಾಫಿ ಬೆಳೆ ಸಂಬಂಧ ಹೆಚ್ಚಿನ ನಿಗಾವಹಿಸಬೇಕು. ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾಫಿ ಬೆಲೆಯ ಬಗ್ಗೆ ಮಾಹಿತಿ ಇರಬೇಕು ಎಂದು ತಿಳಿಸಿದರು. ಕೃಷಿಕರಾದ ಭೋಸ್ ಮಂದಣ್ಣ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಮುಖ್ಯ ಬೆಳೆಯಾಗಿ ಬೆಳೆಯಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಹೆಚ್ಚುವರಿ ಇಳುವರಿ ಪಡೆಯಲಾಗುತ್ತದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಫಿ ದಸರಾ ಏರ್ಪಡಿಸಿರುವುದು ವಿಶೇಷವಾಗಿದೆ ಎಂದು ಅವರು ಶ್ಲಾಘಿಸಿದರು. ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನಾ ಭರತ್ ಅವರು ಮಾತನಾಡಿ ಕಡಿಮೆ ಬಂಡವಾಳದಲ್ಲಿ ಮೀನು ಕೃಷಿಯನ್ನು ಕೈಗೊಂಡು ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಕಾಫಿ ಬೆಳೆಯ ಜೊತೆಗೆ ಮೀನು ಕೃಷಿಯನ್ನು ಉಪ ಕಸುಬಾಗಿ ಮಾಡಿಕೊಂಡಲ್ಲಿ ಆದಾಯಗಳಿಸುವತ್ತ ಮುನ್ನಡೆಯಬಹುದಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಮೀನುಕೃಷಿಗೆ ಸ್ಥಳೀಯ ಮಾರುಕಟ್ಟೆ ಸೌಲಭ್ಯವು ಸಹ ಇದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಮಿಲನ ಭರತ್ ಸಲಹೆ ಮಾಡಿದರು. ವಿಜ್ಞಾನಿ ಡಾ.ಶಿವಪ್ರಸಾದ್ ಅವರು ಮಾತನಾಡಿ ಕಾಫಿ ಬೆಳೆಗಾರರು ಕಾಲ ಕಾಲಕ್ಕೆ ಮಣ್ಣಿನ ಪರೀಕ್ಷೆ ಮಾಡಬೇಕು. ಇದರಿಂದ ಹೆಚ್ಚಿನ ಇಳುವರಿ ಪಡೆಯಲು ಸಹಕಾರಿಯಾಗಲಿದೆ. ಕಾಫಿ ತೋಟಗಳಲ್ಲಿ ಇಂಗುಗುಂಡಿ ಮಾಡಿ ಕೃಷಿ ಪೋಷಕಾಂಶ ಹೆಚ್ಚಿಸಿಕೊಳ್ಳಲು ಮುಂದಾಗಬೇಕಿದೆ ಎಂದು ಅವರು ತಿಳಿಸಿದರು. ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಕೀಟ ಶಾಸ್ತ್ರಜ್ಞರಾದ ಡಾ.ಕೆಂಚಾರೆಡ್ಡಿ ಅವರು ಮಾತನಾಡಿ ಜೇನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ಹೆಚ್ಚಿನ ಲಾಭ ಗಳಿಸಬಹುದಾಗಿದೆ. ಜೇನು ಕೃಷಿಯು ಸಹ ಒಂದು ಉದ್ಯಮವಾಗಿದ್ದು, ಕಾಫಿ ಜೊತೆಗೆ ಜೇನುಕೃಷಿಯಲ್ಲಿ ಕೈಗೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ಕಾಫಿ ಸಾಧಕ ಕೃಷಿಕರಾದ ನಡಿಕೇರಿಯಂಡ ಬೋಸ್ ಮಂದಣ್ಣ, ಕರಡದ ಬಿದಿರು ಕೃಷಿಯಲ್ಲಿ ಪ್ರಗತಿ ಸಾಧಿಸಿರುವ ನಿಖಿಲ್ ರಾಮಮೂರ್ತಿ, ಕೊಡಗು ಕಾಫಿ ಮಹಿಳಾ ಜಾಗೃತಿ ಸಂಘದ ಮಹಿಳಾ ಸಂಘಟನೆಗಾಗಿ ಪ್ರಶಸ್ತಿ, ಯಂತ್ರೋಪಕರಣಗಳ ತಯಾರಿಕೆಗಾಗಿ ವಿ.ಎ.ತಾಹಿರ್, ಜೇನುಕೃಷಿ ಸಾಧಕರಾದ ಶಿರಕಜೆ ಮಾದಪ್ಪ, ಮರಗೋಡು ಗ್ರಾಮದ ಕಟ್ಟೆಮನೆ ಪ್ರೇಮಗಣೇಶ್, ಕರಿಮೆಣಸು ಕೃಷಿಯಲ್ಲಿ ಸಾಧಕರಾದ ಎ.ಪಿ.ಸುಬ್ಬಯ್ಯ, ಭತ್ತ ಕೃಷಿಕರಾದ ದೊಡ್ಡಳ್ಳಿ ಗ್ರಾಮದ ಬಸವಣ್ಣಯ್ಯ ಮತ್ತು ಹುಲುಸೆ ಗ್ರಾಮದ ಎಚ್.ಪಿ.ಪ್ರಸನ್ನ ಅವರನ್ನು ಸನ್ಮಾನಿಸಲಾಯಿತು. ವಿನೋದ್ ಮೂಡಗದ್ದೆ ನಿರೂಪಿಸಿದರು. ಕಾಫಿ ದಸರಾ ಸಂಘಟಕರಾದ ಅನಿಲ್ ಎಚ್.ಟಿ. ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.