Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಅಕ್ಟೋಬರ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.7 : ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಉನ್ನತೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿ.ಪಂ ಕಚೇರಿ ಎದುರು ಒಕ್ಕೂಟದ ಪ್ರಮುಖರು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಅಧಿಕಾರಿಗಳು ಹಾಗೂ ಪಿಡಿಒಗಳ ಮೇಲೆ ಆಗುತ್ತಿರುವ ಒತ್ತಡ ನಿಲ್ಲಬೇಕು, ಪಂಚಾಯತ್ ಕಾರ್ಯನಿರ್ವಹಣೆ ಕುರಿತು ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚನೆ ಮಾಡಬೇಕು, ತಾ.ಪಂ ಸಹಾಯಕ ನಿದೇಶಕರ ಹುದ್ದೆಯನ್ನು ತಾಲ್ಲೂಕು ಮಟ್ಟದ ಅಧಿಕಾರಿಗಳ ಹುದ್ದೆ ಎಂದು ಪರಿಗಣಿಸಬೇಕು, ವೇತನ ಶ್ರೇಣಿಯಲ್ಲಿ ಆಗಿರುವ ತಾರತಮ್ಯವನ್ನು ತಕ್ಷಣ ಸರಿಪಡಿಸಬೇಕು, 15 ರಿಂದ 20 ವರ್ಷಗಳಿಂದ ಉಪಕಾರ್ಯದರ್ಶಿ ವೃಂದದಲ್ಲಿ ಸೇವೆ ಸಲ್ಲಿಸಿದವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗೆ ಬಡ್ತಿ ನೀಡಬೇಕು, ಪಂಚಾಯತ್ ಆಡಳಿತ ಸೇವೆ ಜಾರಿಗೊಳಿಸಬೇಕು, ಎಲ್ಲಾ ಸಿಬ್ಬಂದಿಗಳಿಗೆ ವೇತನ ಶ್ರೇಣಿ ನಿಗದಿಪಡಿಸಬೇಕು, ಡಿ.ಇ.ಒ ಆಗಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ಅನುಮೋದನೆ ನೀಡಬೇಕು, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಶಿಷ್ಟಾಚಾರದ ವ್ಯಾಪ್ತಿಗೆ ತರಬೇಕು, ಪಿಡಿಒಗಳ ಹುದ್ದೆಯನ್ನು ಗ್ರೂಪ್ ಬಿ ಗೆ ಉನ್ನತೀಕರಿಸಬೇಕು, ಎಲ್ಲಾ ದ್ವಿತೀಯ ದರ್ಜೆ ಸಹಾಯಕರಿಗೆ ಬಡ್ತಿ ನೀಡಬೇಕು, ಗ್ರಾ.ಪಂ ಗಳಲ್ಲಿ ಬಳಸುತ್ತಿರುವ ಎಲ್ಲಾ ತಂತ್ರಾಂಶಗಳನ್ನು ಸರಳಿಕರಣಗೊಳಿಸಿ, ಸಂಬಂಧಿಸಿದ ಸಮಸ್ಯೆಗಳಿಗೆ ಏಕೀಕೃತ ಸಹಾಯವಾಣಿ ಜಾರಿ ಮಾಡಬೇಕು, ಪಂಚಾಯಿತಿಗೆ ಸಂಬಂಧಿಸಿದ ಸಮಸ್ಯೆಯನ್ನು ಕುಂದು ಕೊರತೆ ಪ್ರಾಧಿಕಾರದ ಮೂಲಕವೇ ಬಗೆಹರಿಸಬೇಕೆಂದು ಒತ್ತಾಯಿಸಿದರು. ಒಂದೇ ತಾಲ್ಲೂಕಿನಲ್ಲಿ 7 ವರ್ಷ ಸೇವೆ ಸಲ್ಲಿಸಿದ ಗ್ರಾ.ಪಂ ಅಧಿಕಾರಿ, ನೌಕರರ ವರ್ಗಾವಣೆ ಹಿಂಪಡೆಯಬೇಕು, ಗ್ರಾ.ಪಂ ಕಚೇರಿ ನಿರ್ವಹಣಾ ಕೈಪಿಡಿಯನ್ನು ರಚಿಸಬೇಕು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ಬಡ್ತಿ ನೀಡಬೇಕು, ವರ್ಗಾವಣೆ ನೀತಿಯನ್ನು ಕೈಬಿಡಬೇಕು, ಜನಸಂಖ್ಯೆಗೆ ಅಗತ್ಯವಿರುವಷ್ಟು ನೌಕರರನ್ನು ನೇಮಿಸಿಕೊಳ್ಳಲು ಅವಕಾಶ ನೀಡಬೇಕು, ಅವೈಜ್ಞಾನಿಕ ಆದೇಶವನ್ನು ನಿಲ್ಲಿಸಬೇಕು, ಗ್ರಾ.ಪಂ ನೌಕರರಿಗೆ ನ್ಯಾಯಯುತ ಸಂಬಳ ನೀಡಬೇಕು, ಎಲ್ಲಾ ನೌಕರರನ್ನು ಖಾಯಂಗೊಳಿಸಬೇಕು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಬೇಕು, ರಜಾ ದಿನಗಳಲ್ಲಿ ನೌಕರರಿಗೆ ಕೆಲಸ ನೀಡುವುದನ್ನು ತಪ್ಪಿಸಬೇಕು, ಇಂಧನ ಭತ್ಯೆ ನೀಡಬೇಕು, ಮರಣ ಹೊಂದಿದ್ದ ನೌಕರರಿಗೆ ರೂ.1 ಲಕ್ಷ ನೀಡಬೇಕು, 6 ವರ್ಷ ಸೇವೆ ಸಲ್ಲಿಸಿದವರಿಗೆ ಗ್ರೇಡ್-2 ಕಾರ್ಯದರ್ಶಿಗಳಿಗೆ ಎಸ್‌ಡಿಎಎ ಹುದ್ದೆ ನೀಡಬೇಕು ಎಂದು ಆಗ್ರಹಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜಿಲ್ಲಾ ಸಂಘದ ಅಧ್ಯಕ್ಷ ಹೆಚ್.ಪಿ.ರವೀಶ್, ಪ್ರಮುಖರಾದ ಮಹೇಶ್ ತಿಮ್ಮಯ್ಯ, ನವೀನ್ ಅಜ್ಜಳ್ಳಿ, ವಿಶ್ವನಾಥ್, ವಿನೋದ, ಪ್ರಕಾಶ್, ದೇವರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ನೌಕರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಎಸ್‌ಡಿಎ, ಕರವಸೂಲಿಗಾರರು, ಕ್ಲರ್ಕ್ ಕಂ ಡಾಡಾ ಎಂಟ್ರಿ ಅಪರೇಟರ್, ಆಟೆಂಡರ್, ನೀರುಘಂಟಿಗಳು, ಸ್ವಚ್ಛತಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಮನವಿ ಪತ್ರವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸರಕಾರಕ್ಕೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು…

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.