Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ಸಂಭ್ರಮದ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ಸಂಭ್ರಮದ ಕ್ರೀಡಾಕೂಟ*

ಅಕ್ಟೋಬರ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಮಾಯಮುಡಿಯ ಕೋಲುಬಾಣೆ ಕಾವೇರಿ ಅಸೋಸಿಯೇಷನ್ ವತಿಯಿಂದ ವಿವಿಧ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಕೋಲುಬಾಣೆ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕಾಳಪಂಡ ಟಿ.ಟಿಪ್ಪು ಬಿದ್ದಪ್ಪ ಅವರು, ಯುವ ಸಮೂಹ ಕ್ರೀಡೆಗೆ ಹೆಚ್ಚು ಮಹತ್ವ ನೀಡಬೇಕು. ಮೊಬೈಲ್ ಹವ್ಯಾಸದಿಂದಾಗಿ ಕ್ರೀಡೆ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಮಾರು ಹೋಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಯುವಕರು ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಒಳ್ಳೆಯ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಹಿರಿಯ ಸದಸ್ಯ ಚೆಪ್ಪುಡಿರ ಕಿಟ್ಟು ಅಯ್ಯಪ್ಪ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಪರಸ್ಪರ ಸ್ನೇಹ, ಸೌಹಾರ್ಧತೆ ಬೆಳೆಯುತ್ತದೆ ಎಂದರು. ಕ್ರೀಡಾ ಕಾರ್ಯದರ್ಶಿ ಆಪಟ್ಟೀರ ಎಸ್.ಟಾಟು ಮೊಣಪ್ಪ, ಉಪಾಧ್ಯಕ್ಷ ನಾಮೇರ ರವಿ ದೇವಯ್ಯ, ಕಾರ್ಯದರ್ಶಿ ಎಸ್.ಎಸ್.ಸುರೇಶ್, ಕಾಳಪಂಡ ಸಿ.ನರೇಂದ್ರ, ಆಪಟ್ಟೀರ ಎ.ಬೋಪಣ್ಣ, ಎಸ್.ವಿ.ಮಂಜುನಾಥ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ವಿಜೇತರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಕಾಳಪಂಡ ಸಿ.ಸುದೀರ್ ಬಹುಮಾನ ವಿತರಿಸಿದರು.
::: ಸ್ಪರ್ಧಾ ವಿಜೇತರು ::: ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಆಪಟ್ಟೀರ ಸಿ.ಪ್ರದೀಪ್ ಪ್ರಥಮ, ಆಪಟ್ಟೀರ ಎ.ಬೋಪಣ್ಣ ದ್ವಿತೀಯ, ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ತೃತೀಯ ಬಹುಮಾನ ಪಡೆದುಕೊಂಡರು. ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಬನ್ ಸುಬ್ಬಯ್ಯ ಚೆಪ್ಪುಡಿರ ಪ್ರಥಮ, ದರ್ಶನ್ ಬೆಳ್ಯಪ್ಪ ಚೆಪ್ಪುಡಿರ ದ್ವಿತೀಯ, ಕೇರಮ್ ಸ್ಪರ್ಧೆಯಲ್ಲಿ ಚೆಪ್ಪುಡಿರ ಎನ್.ಅಪ್ಪಣ್ಣ ಪ್ರಥಮ, ಆಪಟ್ಟೀರ ಎ.ಬೋಪಣ್ಣ ದ್ವೀತಿಯ ಬಹುಮಾನ ಗೆದ್ದುಕೊಂಡರು. ಸೀಕ್ರೆಟ್-7 ಸ್ಪರ್ಧೆಯಲ್ಲಿ ಬಲ್ಯಂಡ ಎಸ್.ಪ್ರತಾಪ್ ಪ್ರಥಮ, ಕಾಳಪಂಡ ಟಿ.ಬಿದ್ದಪ್ಪ ದ್ವಿತೀಯ, ಎಸ್.ಜಿ.ಮರಿಸ್ವಾಮಿ ತೃತೀಯ, ಕ್ಲಬ್ ಕ್ರೀಡಾಕೂಟದಲ್ಲಿ ಪುಳ್ಳಂಗಡ ಜೆ.ಸತೀಶ್ ಪ್ರಥಮ, ಕಾಳಪಂಡ ಕೆ.ಮೊಣ್ಣಪ್ಪ ದ್ವಿತೀಯ, ಕಾಳಪಂಡ ಟಿ.ಬಿದ್ದಪ್ಪ ತೃತೀಯ ಬಹುಮಾನ ಗಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ NEWS DESK ಸೆ.10 :  ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು…

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.