Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಮಹಿಳಾ ದಸರಾ ಸಂಭ್ರಮ : ಮಹಿಳೆಯರ ಸಬಲೀಕರಣಕ್ಕೆ ಸರ್ಕಾರದಿಂದ ಹಲವು ಕಾರ್ಯಕ್ರಮ : ಶಾಂತೆಯಂಡ ವೀಣಾ ಅಚ್ಚಯ್ಯ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಮಹಿಳಾ ದಸರಾ ಸಂಭ್ರಮ : ಮಹಿಳೆಯರ ಸಬಲೀಕರಣಕ್ಕೆ ಸರ್ಕಾರದಿಂದ ಹಲವು ಕಾರ್ಯಕ್ರಮ : ಶಾಂತೆಯಂಡ ವೀಣಾ ಅಚ್ಚಯ್ಯ* 

ಅಕ್ಟೋಬರ್ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ  ತಿಳಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ  ಬಣ್ಣಿಸಿದರು. ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಿಳಾ ದಸರಾವು ಮಹಿಳೆಯರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಆ ನಿಟ್ಟಿನಲ್ಲಿ ಅವಕಾಶಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತಾಗಬೇಕು ಎಂದು ಹೇಳಿದರು. ಮಹಿಳೆಯರು ಸಾಮಾಜಿಕ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡಲ್ಲಿ ಶ್ರೇಯೋಭಿವೃದ್ಧಿ ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದು ವೀಣಾ ಅಚ್ಚಯ್ಯ  ನುಡಿದರು.ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.50ರಷ್ಟು ಮೀಸಲು ಶೀಘ್ರ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಮಹಿಳಾ ಮತ್ತು ಪುರುಷ ಸಮಾನವಾಗಿ ಬದುಕಿದಾಗ ಸಮಾಜ ಅಭಿವೃದ್ಧಿ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಗಂಡು-ಹೆಣ್ಣು ಸಮಾನರು ಎಂಬುದನ್ನು ಅರಿತುಕೊಳ್ಳಬೇಕು ಎಂದರು.
ಈ ಹಿಂದೆ ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿತು ಎಂಬುದನ್ನು ಮರೆಯಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ಮಹಿಳೆಯರು ಸಹಕಾರ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ, ಕುಟುಂಬ, ಸಾಮಾಜಿಕ, ಜೀವನ ನಿರ್ವಹಣೆ ಅರಿತು ಕೊಳ್ಳಬೇಕು. ಹೀಗಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕೆ.ಪಿ.ಚಂದ್ರಕಲಾ ಪ್ರತಿಪಾದಿಸಿದರು. ಇಂದಿಗೂ ಸಹ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಸಂಕುಚಿತ ಮನೋಭಾವ ಹೊಂದಿದ್ದು, ಇದನ್ನು ಬಿಡಬೇಕು. ಎಲ್ಲರಂತೆ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಕೆ.ಪಿ.ಚಂದ್ರಕಲಾ ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ದಸರಾ ಸಂದರ್ಭದಲ್ಲಿಯೂ ದುರ್ಗೆ, ಚಾಮುಂಡಿ, ಹೆಸರಿನಲ್ಲಿ ದಸರಾವನ್ನು ಆಚರಿಸುವುದು ವಿಶೇಷವಾಗಿದೆ ಎಂದು  ಅಭಿಪ್ರಾಯಪಟ್ಟರು. ಮಹಿಳೆಯರು ಎಲ್ಲಾ ರಂಗಗಳಲ್ಲೂ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ತ್ರೀ ಎಂದರೆ ಆತ್ಮಶಕ್ತಿ, ಆದಿಶಕ್ತಿ ಎಂಬುದನ್ನು ಮರೆಯುವಂತಿಲ್ಲ ಎಂದು ಆರ್.ಐಶ್ವರ್ಯ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜು ಅವರು ಮಾತನಾಡಿ ಸರ್ಕಾರ ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯಡಿ ಪ್ರತೀ ತಿಂಗಳು 23 ಕೋಟಿ ರೂ. ಪಾವತಿಯಾಗುತ್ತಿದೆ. ಆರಂಭದಿಂದ ಇದುವರೆಗೆ 241 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಮಾತೃ ವಂದನಾ, ಮಾತೃ ಪೂರ್ಣ, ಕ್ಷೀರಭಾಗ್ಯ ಹೀಗೆ ಹಲವು ಯೋಜನೆಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂಪಿಸಲಾಗಿದೆ ಎಂದು ನಟರಾಜು ವಿವರಿಸಿದರು. ಮಹಿಳಾ ದಸರಾಗೆ ದಿವ್ಯ ಮಂತರ್ ಗೌಡ ಅವರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಚಿತ್ರಾವತಿ, ಕಲಾವತಿ, ಪ್ರಮುಖರಾದ ಜುಲೈಕಾಭಿ, ಲೀಲಾ ಶೇಷಮ್ಮ, ಸೂರಯ್ಯಾ ಅಬ್ರಾರ್, ಉಷಾ, ಎಚ್.ಎನ್.ಶಾರದ, ಸವಿತಾ, ಸೀತಾಲಕ್ಷ್ಮಿ, ರಜನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಇತರರು ಇದ್ದರು. ಅನಿಲ್ ಎಚ್.ಟಿ. ಸ್ವಾಗತಿಸಿದರು. ಅನಿತಾ ನಿರೂಪಿಸಿದರು. ಮಹಿಳಾ ದಸರಾ ಸಂಚಾಲಕರಾದ ಕುಡೆಕಲ್ ಸವಿತಾ ಸಂತೋಷ್ ವಂದಿಸಿದರು.

ವಿವಿಧ ಸ್ಪರ್ಧೆಗಳು :: ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪಧೆ೯, ಒಂಟಿಕಾಲಿನ ಓಟ,, ಕಪ್ಪೆ ಜಿಗಿತ, ಕೇಶವಿನ್ಯಾಸ, ಗಾಭ೯ ನೖತ್ಯ, ಸೀರಿಗೆ ನಿಖರ ಬೆಲೆ ಹೇಳುವುದು, 60 ವಷ೯ ಮೇಲ್ಪಟ್ಟವರಿಗೆ ಅಜ್ಜಿ ಜತೆ ಮೊಮ್ಮಕ್ಕಳ ನಡಿಗೆ, ವಾಲಗತ್ತಾಟ್, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪಧೆ೯, ಬಾಂಬ್ ಇನ್ ದಿ ಸಿಟಿ, ಸೇರಿದಂತೆ ಹಲವು ಸ್ಪಧೆ೯ಗಳು ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪಮೇ 25 NEWS DESK : ಸುಂಟಿಕೊಪ್ಪದಲ್ಲಿ ವರ್ಕ್ ಶಾಪ್ ಮಾಲೀಕರ ಸಂಘದ ವತಿಯಿಂದ ಹಿರಿಯ ಪತ್ರಕರ್ತರು, ಕುಶಾಲನಗರ ತಾಲ್ಲೂಕು…

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.