Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಲಿಹೊಳೆ ಕಟ್ಟೆಹಾಡಿಯಲ್ಲಿ ಜೇನು ಕುರುಬ ಜನಾಂಗದ ಸಭೆ : ಗ್ರಾಮ ಅರಣ್ಯ ಸಮಿತಿ ರಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಲಿಹೊಳೆ ಕಟ್ಟೆಹಾಡಿಯಲ್ಲಿ ಜೇನು ಕುರುಬ ಜನಾಂಗದ ಸಭೆ : ಗ್ರಾಮ ಅರಣ್ಯ ಸಮಿತಿ ರಚನೆ*

ಅಕ್ಟೋಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಣಿವೆ ಅ.9 NEWS DESK : ಐಟಿಡಿಪಿ ಇಲಾಖೆ ಅಧಿಕಾರಿಗಳು ಜೇನು ಕುರುಬರ ಹಾಡಿಗಳಿಗೆ ಬರುತ್ತಿಲ್ಲ. ಅವರ ಕಾರುಗಳು ಹೋಗುವಂತಹ ರಸ್ತೆಗಳು ಇರುವ ಕಡೆಗಳಲ್ಲಿ ಮಾತ್ರ ಹೋಗ್ತಾ ಇದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹಾಡಿಗಳೇ ಗೊತ್ತಿಲ್ಲ. ಇಂತಹ ಬೇಜವಬ್ದಾರಿ ಇಲಾಖಾಧಿಕಾರಿಗಳಿಂದ ಜೇನು ಕುರುಬ ಜನಾಂಗಕ್ಕೆ ಸರ್ಕಾರದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೇನು ಕುರುಬರ ಮುಖಂಡ, ಜಿ.ಪಂ ಮಾಜಿ ಸದಸ್ಯ ಹಾಗೂ ನಂಜರಾಯಪಟ್ಟಣ ಗ್ರಾ.ಪಂ ಸದಸ್ಯ ಆರ್.ಕೆ.ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಕುಶಾಲನಗರ ತಾಲ್ಲೂಕು ಚಿಕ್ಲಿಹೊಳೆ ಜಲಾಶಯದ ಬಳಿ ಇರುವ ಕಟ್ಟೆಹಾಡಿಯಲ್ಲಿ ನಡೆದ ಗ್ರಾಮ ಅರಣ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜೇನು ಕುರುಬರ ಹೆಸರಿನಲ್ಲಿ ಉಳ್ಳವರು ಹಾಗೂ ಜೇನು ಕುರುಬರಲ್ಲದವರು ಜಾತಿ ಪ್ರಮಾಣ ಪತ್ರಗಳನ್ನು ಮಾಡಿಸಿಕೊಂಡು ನಿಜವಾದ ಅರ್ಹ ಫಲಾನುಭವಿಗಳಿಗೆ ವಂಚಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮೀಸಲಿಡುವ ಪರಿಶಿಷ್ಟರ ಅನುದಾನದ ಶೇ.25 ರಷ್ಟು ಹಣ ನಮ್ಮ ಜೇನು ಕುರುಬರಿಗೆ ಸಲ್ಲಬೇಕು. ವಾಲ್ಮೀಕಿ ಅಭಿವೃದ್ಧಿ ನಿಗಮ ನಮ್ಮ ಸಮುದಾಯಕ್ಕೆ ಮಾರಕವಾಗಿದೆ. ನಮಗೆ ಯಾವೊಂದು ಅಭಿವೃದ್ಧಿ ಯೋಜನೆಗಳೂ ಆಗಲಿಲ್ಲ. ಹಾಗಾಗಿ ನಮಗೆ ವಾಲ್ಮೀಕಿ ನಿಗಮ ಬೇಕಿಲ್ಲ ಎಂದು ಚಂದ್ರು ಅಸಮಾಧಾನ ವ್ಯಕ್ತಪಡಿಸಿದರು. ಜೇನು ಕುರುಬರಿಗಾಗಿ ಸರ್ಕಾರ ನೀಡುವ 5 ಲಕ್ಷ ರೂಗಳ ಮನೆ ನಿರ್ಮಾಣದ ಹಣ ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಪಂಚಾಯಿತಿ ಪಿಡಿಒಗಳು ಮುಂದಾಗಬೇಕು. ಹಾಗೆಯೇ ಜೇನು ಕುರುಬರ ಸೌಲಭ್ಯಗಳಿಗಾಗಿ ಹಗಲಿರುಳೆನ್ನದೇ ಹೋರಾಟ ನಡೆಸಿ ಅನೇಕ ಸೌಲಭ್ಯಗಳನ್ನು ತರುವಲ್ಲಿ ಶ್ರಮಿಸಿದ ರಂಗಸಮುದ್ರದ ಜೆ.ಪಿ.ರಾಜು ನಮ್ಮ ಪಾಲಿಗೆ ಗಾಂಧೀಜಿ ಇದ್ದಂತೆ ಎಂದು ಚಂದ್ರು ಇದೇ ಸಂದರ್ಭ ಹೇಳಿದರು. ಜೇನು ಕುರುಬರ ಅಭಿವೃದ್ಧಿ ಸಂಘದ ಅಧ್ಯಕ್ಷ ಮಾವಿನಹಳ್ಳ ಹಾಡಿಯ ಜೆ.ಟಿ.ಕಾಳಿಂಗ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಕೂಡ ನಮ್ಮ ಕಾಡು ಜನರಿಗೆ ಸರ್ಕಾರದ ಸೌಲಭ್ಯಗಳು ದೊರಕುತ್ತಿಲ್ಲ. ಇದೂವರೆಗೂ ನಮ್ಮ ಹಾಡಿಗಳಲ್ಲಿ ಜೇನು ಕುರುಬ ಮಂದಿ ವಾಸಿಸುತ್ತಿರುವ ಗುಡಿಸಲುಗಳಲ್ಲಿ ಸರಿಯಾಗಿ ವಿದ್ಯುತ್ ಇಲ್ಲ. ಗುಡಿಸಲುಗಳಿಗೆ ಸರಿಯಾದ ಹೊದಿಕೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಾಡಿಗಳ ನಿವಾಸಿಗಳ ಬಾಲ್ಯ ವಿವಾಹ ಪದ್ದತಿ ತಡೆಗಟ್ಟಬೇಕು. ಜಾಗೃತರಾಗುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳುವ ಉದ್ದೇಶದಿಂದಲೇ ಗ್ರಾಮ ಅರಣ್ಯ ಸಮಿತಿ ರಚನೆಯಾಗಿವೆ. ಅದರಡಿ ಅಧಿಕಾರಿಗಳು ಕಾರ್ಯನಿರ್ವಹಿಸುವ ಕಾರಣ ಜೇನು ಕುರುಬರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಗಮನ ಕೊಡಬೇಕು. ಸರ್ಕಾರ ಜೇನು ಕುರುಬರು ಹಾಗೂ ಹಿಂದುಳಿದವರಿಗೆಂದೇ ವಿವಿಧ ಶಾಲೆಗಳು ಹಾಗೂ ವಸತಿ ನಿಲಯಗಳನ್ನು ತೆರೆದಿದ್ದು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕಾಳಿಂಗ ಕರೆ ನೀಡಿದರು. ಸಭೆಯಲ್ಲಿ ಯಡವನಾಡು ಹಾಡಿಯ ಮುಖಂಡ ನಂಜಣ್ಣ, ಮಾವಿನಹಳ್ಳ ಜೇನು ಕುರುಬರ ಹಾಡಿಯ ಯಜಮಾನ ಪುಟ್ಟ, ಗೋಪಾಲ, ಸಜ್ಜಳ್ಳಿ ಹಾಡಿಯ ಮುಖಂಡ ವಿಶ್ವ ಇದ್ದರು.
ಅರಣ್ಯ ಹಕ್ಕು ಸಮಿತಿ ರಚನೆ :: ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿಯನ್ನು ರಚಿಸಲಾಯಿತು. ಮಾವಿನಹಳ್ಳ ಹಾಡಿ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷರಾಗಿ ಜೆ.ಆರ್.ಗೋಪಾಲ, ಉಪಾಧ್ಯಕ್ಷರಾಗಿ ಜೆ.ಎಂ.ಸರ್ವಮಂಗಳ, ಕಾರ್ಯದರ್ಶಿಯಾಗಿ ಜೆ.ಎಸ್.ಪಾಪಣ್ಣ, ಕಟ್ಟೆಹಾಡಿ ಸಮಿತಿಯ ಅಧ್ಯಕ್ಷರಾಗಿ ಅಪ್ಪು, ಉಪಾಧ್ಯಕ್ಷರಾಗಿ ಗೌರಿ, ಕಾರ್ಯದರ್ಶಿಯಾಗಿ ಚಂದ್ರಿಕಾ ಅವರನ್ನು ನೇಮಕ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.