Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಶಾಂತಿಯ ತೋಟವಾಗಬೇಕು : ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ : ಡಿಸಿಎಂ ಡಿಕೆಶಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಶಾಂತಿಯ ತೋಟವಾಗಬೇಕು : ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ : ಡಿಸಿಎಂ ಡಿಕೆಶಿ*

ಅಕ್ಟೋಬರ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.11 : “ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು  ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು.  “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು. ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ” ಎಂದರು. ಜಾತಿ ಗಣತಿ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆಯೇ ಎಂದು ಕೇಳಿದಾಗ, “ಜಾತಿ ಗಣತಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಬಿಜೆಪಿ ತಿಳಿಸಲಿ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು. ಕಾಂಗ್ರೆಸ್ ನವರು ಸರ್ಕಾರವನ್ನು ಮೋಸದಿಂದ ಸ್ಥಿರಗೊಳಿಸಲು ಹೊರಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ, ದುರ್ಗಾ ಮಾತೇ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು. *ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ:* “ನಮ್ಮ ಕೊಡಗಿನ ಸಂಸ್ಕೃತಿಯ ಸಂಕೇತ ಮಡಿಕೇರಿ ದಸರಾಕ್ಕೆ ಚಾಲನೆ ನೀಡಲು ಇಂದು ಮಡಿಕೇರಿಗೆ ಭೇಟಿ ನೀಡಿದ್ದೇನೆ. ಈ ವಿಶೇಷ ಸಂದರ್ಭ ಹಾಗೂ ನಮ್ಮ ಸಂಸ್ಕೃತಿಯ ಸಂಕೇತದ ಆಚರಣೆಗೆ ಪ್ರೋತ್ಸಾಹ ನೀಡಬೇಕು ಎಂದು ಬಂದಿದ್ದೇನೆ. ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸ್ವಾಗತ ಕೋರಿದ್ದು, ಮೈಸೂರು ದಸರಾ ಮಾದರಿಯಲ್ಲೇ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಬೇಕು. ಇದಕ್ಕಾಗಿ ಈ ಭಾಗದ ಜನರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮೈಸೂರು ದಸರಾ ಹಾಗೂ ಮಡಿಕೇರಿಗೆ ಮೂರುವರೆ ಲಕ್ಷ ವಾಹನಗಳು ಬಂದಿವೆ ಎಂಬ ಅಂಕಿಅಂಶಗಳು ನಮಗೆ ಲಭ್ಯವಾಗಿವೆ. ಬರಗಾಲ ಹೋಗಿ ಉತ್ತಮ ಮಳೆಯಾಗುತ್ತಿದೆ. ಈ ಬಾರಿ ಕಾಫಿಗೆ ಉತ್ತಮ ಬೆಲೆ ಬಂದಿದೆ. ಕಾವೇರಿ ತುಂಬಿ ಹರಿಯುತ್ತಿದ್ದು, ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ಆ ತಾಯಿಗೆ ಬಾಗಿನ ಅರ್ಪಿಸಿದ್ದೇವೆ’ ಎಂದು ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.