Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಕಾವೇರಿ ತುಲಾ ಸಂಕ್ರಮಣ : ತಲಕಾವೇರಿಯಲ್ಲಿ ಭರದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಕಾವೇರಿ ತುಲಾ ಸಂಕ್ರಮಣ : ತಲಕಾವೇರಿಯಲ್ಲಿ ಭರದ ಸಿದ್ಧತೆ*

ಅಕ್ಟೋಬರ್ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.15 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇದೇ ಅ.17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಈ ಸಂಬಂಧ ತಲಕಾವೇರಿಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ಸಾಗಿವೆ. ತುಲಾ ಸಂಕ್ರಮಣ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದೆ. ತುಲಾ ಸಂಕ್ರಮಣ ಜಾತ್ರೆ ಸಂಬಂಧ ಮಡಿಕೇರಿ, ಭಾಗಮಂಡಲ, ತಲಕಾವೇರಿಗೆ ಹೋಗುವ ರಸ್ತೆ ಬದಿಯಲ್ಲಿ ಕಾಡನ್ನು ಕಡಿಸಿ ಸುಗಮ ಸಾರಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆ ಮಾರ್ಗದ ರಸ್ತೆ ಗುಂಡಿಯನ್ನು ಮುಚ್ಚುವ ಕಾರ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಹಾಗೆಯೇ ಬ್ಯಾರಿಕೇಡ್‍ಗಳನ್ನು ಅಳವಡಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ವಿದ್ಯುತ್ ಪೂರೈಕೆಗೆ ಕ್ರಮವಹಿಸಲಾಗಿದೆ. ‘ತಲಕಾವೇರಿ ಜಾತ್ರೆ ಹಿನ್ನೆಲೆ ಭಾಗಮಂಡಲ ದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‍ಗಳು ಓಡಾಡಲಿದ್ದು, ಭಕ್ತಾಧಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ ಎಂದು ಮಡಿಕೇರಿ ಕೆಎಸ್‍ಆರ್‍ಟಿಸಿ ಘಟಕದ ವ್ಯವಸ್ಥಾಪಕರಾದ ಮೆಹಬೂಬ್ ಅಲಿ ಅವರು ಮಾಹಿತಿ ನೀಡಿದ್ದಾರೆ.’ ತಲಕಾವೇರಿ ತುಲಾ ಸಂಕ್ರಮಣ ತೀರ್ಥೋದ್ಭವ ಹಿನ್ನೆಲೆ ತಾಯಿ ಕಾವೇರಿ ಮಾತೆಯ ಭಕ್ತಿಗೀತೆಗಳ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದ್ದು, ಈ ಸಂಬಂಧ ಪೆಂಡಾಲ್ ನಿರ್ಮಾಣ ಮಾಡಲಾಗಿದೆ. ಭಕ್ತಾಧಿಗಳ ಪ್ರಸಾದ ವಿನಿಯೋಗಕ್ಕೆ ಅಗತ್ಯ ಸಿದ್ಧತೆಗಳು ನಡೆದಿವೆ. ಪರಿಸರ ಶುಚಿತ್ವ ಹಾಗೂ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಸೆಸ್ಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ವಿವಿಧ ಇಲಾಖೆಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸಗಳನ್ನು ಕೈಗೊಂಡಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಪೂರ್ವ ಸಿದ್ಧತೆ ಸಂಬಂಧ ಪರಿಶೀಲನೆ ನಡೆಸಿದ್ದಾರೆ.
ಮದ್ಯ ಮಾರಾಟ ನಿಷೇಧ:ತಲಕಾವೇರಿ ತೀರ್ಥೋಧ್ಬವ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ನನಗೆ ದತ್ತವಾಗಿರುವ ಅಧಿಕಾರದಂತೆ ಅಕ್ಟೋಬರ್, 16 ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್, 17 ರ ಮಧ್ಯರಾತ್ರಿ 12 ಗಂಟೆಯವರೆಗೆ ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.
ಪ್ಲಾಸ್ಟಿಕ್ ಬಿಂದಿಗೆ, ಬಾಟಲ್, ಕ್ಯಾನ್‍ಗಳ ಬಳಕೆ ನಿಷೇಧ: ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಅ.17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆ ನಡೆಯಲಿದ್ದು, ಈ ಸಮಯದಲ್ಲಿ ದೇವಾಲಯಕ್ಕೆ ಬರುವ ಭಕ್ತಾಧಿಗಳು,ಯಾಥ್ರಾರ್ಥಿಗಳು ಶ್ರೀ ಕಾವೇರಿಯ ಪವಿತ್ರ ತೀರ್ಥವನ್ನು ಶೇಖರಿಸಿಕೊಂಡು ಹೋಗಲು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‍ಗಳನ್ನು ಬಳಕೆ ಮಾಡುತ್ತಿರುತ್ತಾರೆ. ಅಧಿಸೂಚಿತ ಸಂಸ್ಥೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‍ಗಳನ್ನು ನಿರ್ಭಂದಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಇವರ ಆದೇಶದದಲ್ಲಿ ಸೂಚಿಸಿದ್ದಾರೆ. ಆದ್ದರಿಂದ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳು ಪವಿತ್ರ ತೀರ್ಥವನ್ನು ಶೇಖರಿಸಲು ಪ್ಲಾಸ್ಟಿಕ್ ಉತ್ಪನ್ನಗಳನ್ನು ಕಲ್ಯಾಣಿ ಮತ್ತು ಪವಿತ್ರ ಕುಂಡಿಕೆಯ ಬಳಿ ಬಳಸದಂತೆ ನಿರ್ಭಂದಿಸಲಾಗಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯ ಬೆಸೂರು ಗ್ರಾಮದ ಶಿಕ್ಷಕಿ ಶ್ರೀಮತಿ…

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.