Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ ಫಲಕ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ ಫಲಕ ಉದ್ಘಾಟನೆ*

ಅಕ್ಟೋಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.16 NEWS DESK : ನೂತನ ತಂತ್ರಜ್ಞಾನದ ಅರಿವಿನೊಂದಿಗೆ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಸೇವೆ ನೀಡುವ ಕಾಯಕವನ್ನು ಸೌಂದರ್ಯ ತಜ್ಞರು ಅಳವಡಿಸಿಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದರು. ಕುಶಾಲನಗರದಲ್ಲಿ ತಾಲ್ಲೂಕು ಸೌಂದರ್ಯ ವರ್ಧಕರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸಂಘದ ಫಲಕ ಅನಾವರಣಗೊಳಿಸಿ ಮಾತನಾಡಿದರು.  ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸದಸ್ಯರುಗಳು ಸಂಘದ ಮೂಲಕ ಸಂಘಟಿತರಾಗಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು. ರಾಜ್ಯಮಟ್ಟದಲ್ಲಿ ಸಂಘಟನೆಯ ಮೂಲಕ ಬೇಡಿಕೆಗಳ ಬಗ್ಗೆ ಸರಕಾರದ ಗಮನ ಸೆಳೆದು ವಿಶೇಷ ಅನುದಾನಗಳನ್ನು ಕಲ್ಪಿಸಿಕೊಳ್ಳುವಂತಾಗಬೇಕು. ಈ ಸಂಬಂಧ ತಾನು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಮಂತರ್ ಗೌಡ ಭರವಸೆ ನೀಡಿದರು. ಜಿಲ್ಲಾ ಮಟ್ಟದಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧಿಕಾರಿಗಳಿಂದ ಬ್ಯೂಟಿ ಪಾರ್ಲರ್ ಕೇಂದ್ರಗಳ ಮಾಲೀಕರುಗಳಿಗೆ ಉಂಟಾಗುತ್ತಿರುವ ಕಿರಿಕಿರಿಯನ್ನು ತಪ್ಪಿಸುವ ಸಲುವಾಗಿ ತಾನು ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಹೇಳಿದರು. ಬ್ಯೂಟಿ ಪಾರ್ಲರ್ ಕೇಂದ್ರಗಳಿಗೆ ಸಂಬಂಧಿಸಿದಂತೆ ಸರಕಾರದ ಯೋಜನೆ ಮೂಲಕ ಸಹಾಯಧನ, ಅನುದಾನ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು, ವೃತ್ತಿ ಕೌಶಲ್ಯತೆಯನ್ನು ಬಲವರ್ಧನೆ ಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದರು.  ಮುಖ್ಯ ಭಾಷಣಗಾರರಾಗಿ ಪಾಲ್ಗೊಂಡು ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಪ್ರತಿಯೊಬ್ಬರೂ ಬಾಹ್ಯ ಸೌಂದರ್ಯದೊಂದಿಗೆ ಆಂತರಿಕ ಸೌಂದರ್ಯಕ್ಕೆ ಕೂಡ ಒತ್ತು ನೀಡಬೇಕು. ಇತ್ತೀಚೆಗೆ ನಡೆಯುತ್ತಿರುವ ಶೋಷಣೆ ದೌರ್ಜನ್ಯಗಳಲ್ಲಿ ಮಹಿಳೆಯರ ಪಾತ್ರ ಕೂಡ ಕಂಡು ಬರುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಸಂಘಟನೆಯ ಮೂಲಕ ಸಮಾಜಮುಖಿ ಕಾರ್ಯಕ್ರಮಗಳು ಹಾಗೂ ಸಮಾಜದ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ಕರೆ ನೀಡಿದರು. ತಂತ್ರಜ್ಞಾನಗಳ ನಡುವೆ ಮಾನವೀಯ ಸಂಬಂಧದ ಕೊರತೆ ಉಂಟಾಗುತ್ತಿದೆ. ಗ್ರಾಹಕರ ಪ್ರೀತಿ ವಿಶ್ವಾಸ ಗಳಿಸುವ ಮೂಲಕ ಪ್ರತಿಯೊಬ್ಬರು ಬೆಳವಣಿಗೆ ಆಗುವದರೊಂದಿಗೆ ಸಂಘಟನೆಯನ್ನು ಬಲಿಷ್ಠ ಗೊಳಿಸಬೇಕು ಎಂದರು. ಕುಶಾಲನಗರ ತಾಲೂಕು ಸೌಂದರ್ಯವರ್ಧಕರ ಸಂಘದ ಅಧ್ಯಕ್ಷರಾದ ಎನ್.ನಾಗಮಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರ ಸಂಘಟನೆಗೆ ಶುಭ ಕೋರಿದರು. ಇದೇ ಸಂದರ್ಭ ಕುಶಾಲನಗರ ಸರಕಾರಿ ಆಸ್ಪತ್ರೆಯ ವೈದ್ಯರಾದ ಡಾ.ಪ್ರತಿಭಾ, ಸ್ಥಳೀಯ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹೆಚ್ ಟಿ ಗೀತಾ, ಗ್ರಾಮ ಅಭಿವೃದ್ಧಿ ಯೋಜನೆಯ ನಿರ್ದೇಶಕಿ ಲೀಲಾವತಿ, ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಾದ ನಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಬ್ಯೂಟಿಷಿಯನ್ ಅಸೋಸಿಯೇಷನ್ ಅಧ್ಯಕ್ಷರಾದ ರತ್ನ ಯತೀಶ್ ಮಾತನಾಡಿ, ನೂತನ ಸಂಘಕ್ಕೆ ಶುಭ ಕೋರಿದರು. ಸಂಘದ ಗೌರವಾಧ್ಯಕ್ಷರಾದ ವನಿತಾ ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಆಟೋ ಸ್ಪರ್ಧೆಗಳಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪವಿತ್ರ ರಾಜೇಶ್, ಉಪಾಧ್ಯಕ್ಷರಾದ ಡೆಸಿಲಾ ಪ್ರಧಾನ ಕಾರ್ಯದರ್ಶಿ ನವ್ಯ, ಕಾರ್ಯದರ್ಶಿ ಮಧು, ಸಹಕಾರ್ಯದರ್ಶಿ ಕುಶಾಲಿ, ಸಂಘಟನಾ ಕಾರ್ಯದರ್ಶಿ ತಾಜ್ ಖಜಾಂಚಿ ಲತಾ ಮತ್ತು ನಿರ್ದೇಶಕರುಗಳು ಇದ್ದರು.
ನವ್ಯ ಕಾರ್ಯಕ್ರಮ ನಿರೂಪಿಸಿದರು. ಕುಶಾಲಿ ಸ್ವಾಗತಿಸಿದರು, ಮಧು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡ್ಲಿಪೇಟೆಯ ಬೆಸೂರು ಗ್ರಾಮದ ಶಿಕ್ಷಕಿ ಶ್ರೀಮತಿ…

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.