Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.21 ರಿಂದ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ : ಜಾನುವಾರುಗಳಿಗೆ ಲಸಿಕೆ ಕೊಡಿಸಲು ಎಡಿಸಿ ಆರ್.ಐಶ್ವರ್ಯ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.21 ರಿಂದ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನ : ಜಾನುವಾರುಗಳಿಗೆ ಲಸಿಕೆ ಕೊಡಿಸಲು ಎಡಿಸಿ ಆರ್.ಐಶ್ವರ್ಯ ಮನವಿ*

ಅಕ್ಟೋಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 NEWS DESK : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವು ಅ.21 ರಿಂದ ನ.20 ರವರೆಗೆ ಕೊಡಗು ಜಿಲ್ಲೆಯಾದ್ಯಂತ ನಡೆಯಲಿದ್ದು, ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ನಿಯಂತ್ರಣದ 6ನೇ ಸುತ್ತಿನ ಲಸಿಕಾ ಅಭಿಯಾನದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ದನ ಮತ್ತು ಎಮ್ಮೆಗೆ ಕಾಲುಬಾಯಿ ರೋಗ ಕಾಣಿಸಿಕೊಳ್ಳಲಿದೆ. ಆದ್ದರಿಂದ ಸರ್ಕಾರದ ನಿರ್ದೇಶನದಂತೆ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಕೊಡಗು ಜಿಲ್ಲೆ ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಅಲ್ಲಲ್ಲಿ ಮನೆಗಳು ಇರುವುದರಿಂದ ಲಸಿಕೆ ಹಾಕಲು ಯಾವುದೇ ಜಾನುವಾರು ಬಿಟ್ಟು ಹೋಗದಂತೆ ಅಗತ್ಯ ವಾಹನ ನಿಯೋಜಿಸಲು ಹಾಸನದ ಹಾಲು ಒಕ್ಕೂಟದ ಜಂಟಿ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು. ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಲಿಂಗರಾಜು ದೊಡ್ಡಮನಿ ಅವರು ಮಾತನಾಡಿ ಕಾಲುಬಾಯಿ ರೋಗ ನಿಯಂತ್ರಿಸಲು ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ. ಈ ರೋಗದ ವಿರುದ್ಧ ಪ್ರತೀ 6 ತಿಂಗಳಿಗೊಮ್ಮೆ ಜಾನುವಾರುಗಳಿಗೆ ಲಸಿಕೆ ಕೊಡಿಸಿ ರೋಗ ಬರದಂತೆ ತಡೆಯಬೇಕಿದೆ ಎಂದರು. ರಾಷ್ಟ್ರೀಯ ಕಾಲುಬಾಯಿ ಜ್ವರ ನಿಯಂತ್ರಣ ಕಾರ್ಯಕ್ರಮದ ಅಭಿಯಾನದಲ್ಲಿ 6ನೇ ಸುತ್ತಿನಲ್ಲಿ ಲಸಿಕೆ ವಿತರಣೆಗಾಗಿ 57 ಸಾವಿರ ಲಸಿಕೆ ಪೂರೈಕೆಯಾಗಿದೆ. ಈಗಾಗಲೇ 5ನೇ ಸುತ್ತಿನಲ್ಲಿ 2,450 ಲಸಿಕೆ ಉಳಿದಿದ್ದು, ಒಟ್ಟು 59,450 ಲಸಿಕೆ ದಾಸ್ತಾನು ಇದೆ ಎಂದು ಲಿಂಗರಾಜು ದೊಡ್ಡಮನಿ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯಲ್ಲಿ ಪಶು ವೈದ್ಯಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ನೀಡಲಿದ್ದಾರೆ. ರೈತರು, ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ನೀಡಲು ಸಹಕರಿಸುವಂತೆ ಮನವಿ ಮಾಡಿದರು. ಕೊಡಗು ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿಯಂತೆ ದನ ಹಾಗೂ ಎಮ್ಮೆಗಳ ಸಂಖ್ಯೆ 76,920 ಇದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು. ಲಸಿಕೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಲಸಿಕಾದಾರರು ಜಾನುವಾರು ಮಾಲೀಕರ ಮನೆಗೆ ಬಂದಾಗ ಸಹಕಾರ ನೀಡಿ ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ದನ, ಎಮ್ಮೆಗಳಿಗೆ ಲಸಿಕೆ ಹಾಕಿಸುವಂತೆ ಕೋರಿದರು. 6ನೇ ಸುತ್ತಿಗೆ ಈಗಾಗಲೇ 70 ಸಾವಿರ ಸಿರಿಂಜ್ ಪೂರೈಕೆಯಾಗಿದೆ. ಕಾಲುಬಾಯಿ ಲಸಿಕಾ ಕಾರ್ಯಕ್ರಮ ಕೈಗೊಳ್ಳಲು ಜಿಲ್ಲೆಯಲ್ಲಿ 13 ತಾಂತ್ರಿಕ ಅಧಿಕಾರಿಗಳು, 31 ಅರೆ ತಾಂತ್ರಿಕ ಸಿಬ್ಬಂದಿಗಳು, 7 ಡಿ ದರ್ಜೆ ನೌಕರರು, 13 ಹೊರಗುತ್ತಿಗೆ ನೌಕರರು, 4 ಮೈತ್ರಿ ಸಿಬ್ಬಂದಿ, ಒಬ್ಬ ಕೆಎಂಎಫ್ ಒಟ್ಟು 69 ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು. ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದ ಸೀರೋ ಮಾನಿಟರಿಂಗ್ ನಿರ್ವಹಣೆಗಾಗಿ ಸೋಮವಾರಪೇಟೆ ತಾಲ್ಲೂಕಿನ ಕೆಳಕೊಡ್ಲಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಲಿಂಗರಾಜು ದೊಡ್ಡಮನಿ ತಿಳಿಸಿದರು. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಆಸ್ಪತ್ರೆಗೆ ಭೇಟಿ ನೀಡಬಹುದಾಗಿದೆ ಎಂದು ಲಿಂಗರಾಜು ದೊಡ್ಡಮನಿ ತಿಳಿಸಿದರು. ಹಾಸನ ಹಾಲು ಒಕ್ಕೂಟದ ಜಂಟಿ ನಿರ್ದೇಶಕರಾದ ಡಾ.ಪ್ರಸನ್ನ, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಪ್ರಸನ್ನ(ಮಡಿಕೇರಿ), ಡಾ.ನವೀನ್(ವಿರಾಜಪೇಟೆ), ಡಾ.ಗಿರೀಶ್(ಪೊನ್ನಂಪೇಟೆ), ಡಾ.ರಾಜಶೇಖರ್ (ಸೋಮವಾರಪೇಟೆ), ಡಾ.ಸಂಜೀವ್ ಶಿಂಧೆ(ಕುಶಾಲನಗರ),ಹಿರಿಯ ಪಶುವೈದ್ಯಾಧಿಕಾರಿ ಡಾ.ಶಿಲ್ಪ ಇತರರು ಇದ್ದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ ಸಂಬಂಧ ಸರ್ಕಾರದಿಂದ ಹೊರತಂದಿರುವ ಭಿತ್ತಿಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಬಿಡುಗಡೆ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.