Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಲಕಾವೇರಿ : ಪವಿತ್ರ ತೀರ್ಥೋದ್ಭವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತಲಕಾವೇರಿ : ಪವಿತ್ರ ತೀರ್ಥೋದ್ಭವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು*

ಅಕ್ಟೋಬರ್ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 NEWS DESK : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಗುರುವಾರ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವವಾಯಿತು. ಭಕ್ತರ ಜಯಘೋಷ, ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕುಂಡಿಕೆಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಂಡಳು. ಸಂಪ್ರದಾಯದಂತೆ ತಾಯಿ ಕಾವೇರಿ ಮಾತೆಗೆ ಪೂಜಾ ವಿಧಿವಿಧಾನಗಳು ನಡೆದವು. ಪವಿತ್ರ ತೀರ್ಥೋದ್ಭವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಸಾಂಪ್ರದಾಯಿಕ ಉಡುಪಿನೊಂದಿಗೆ ಆರತಿ ತಟ್ಟೆಯೊಂದಿಗೆ ತಾಯಿ ಕಾವೇರಿ ಮಾತೆಯನ್ನು ಭಕ್ತರು ನಮಿಸಿದರು. ಪವಿತ್ರ ತೀರ್ಥೋದ್ಭವ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‍ಪಿ ಮಹೇಶ್ ಕುಮಾರ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಇಒ ಎನ್.ಜಿ.ಚಂದ್ರಶೇಖರ್, ಭಾಗಮಂಡಲ ಭಗಂಡೇಶ್ವರ ದೇವಾಲಯದ ತಕ್ಕಮುಖ್ಯಸ್ಥರಾದ ಬಳ್ಳಡ್ಕ ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ,, ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಸರ್ವೋದಯ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ ಇತರರು ಇದ್ದರು. ತಲಕಾವೇರಿಯಲ್ಲಿ ಕೊಡಗು ಏಕೀಕರಣ ರಂಗದಿಂದ ಅನ್ನದಾನವು ವ್ಯವಸ್ಥಿತವಾಗಿ ನಡೆಯಿತು. ಹಾಗೆಯೇ ಚೆಟ್ಟಿನಾಡು ವಾಲ್ನೂರು ಎಸ್ಟೇಟ್‍ನ ಅಣ್ಣಾಮಲೈ ಚೆಟ್ಟಿಯಾನ್ ಅವರಿಂದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮಾತನಾಡಿ ಈ ಬಾರಿ ನಾಡಿನಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲರಲ್ಲಿ ಸಮೃದ್ಧಿ ಹಾಗೂ ಸಂತಸ ತಂದಿದೆ. ತಾಯಿ ಕಾವೇರಿ ಮಾತೆ ಸದಾಕಾಲ ಎಲ್ಲರಿಗೂ ಒಳಿತು ಮಾಡಲಿ ಎಂದು ಪ್ರಾರ್ಥಿಸಲಾಗಿದೆ ಎಂದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ನಾಡಿನ ಸಮಸ್ತ ಜನರಿಗೆ ಶಾಂತಿ, ನೆಮ್ಮದಿ ತರುವಂತಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಡಾ.ಮಂತರ್‍ಗೌಡ ಮಾತನಾಡಿ, ತಾಯಿ ಕಾವೇರಿ ಮಾತೆ ಎಲ್ಲರಿಗೂ ಒಳಿತು ಮಾಡಲಿ. ಕಾವೇರಿ ನದಿ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರನ್ನು ಒಳಗೊಂಡಂತೆ ಭಕ್ತರು ಭಾಗಮಂಡಲದಿಂದ ತಲಕಾವೇರಿ ವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ತಾಯಿ ಕಾವೇರಿ ಮಾತೆಗೆ ನಮಿಸಿದ್ದು ವಿಶೇಷವಾಗಿತ್ತು. ತೀರ್ಥೋದ್ಭವದ ಪೂಜಾ ವಿಧಿವಿಧಾನಗಳನ್ನು ಅರ್ಚಕರಾದ ಪ್ರಶಾಂತ್ ಆಚಾರ್, ಗುರುರಾಜ್, ರವಿರಾಜ್, ವಿಠಲ ಆಚಾರ್, ಸುದೀರ್ ಆಚಾರ್ ನೆರವೇರಿಸಿದರು. ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗ ವತಿಯಿಂದ ಕಸಾಪ ಜಿಲ್ಲಾ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಸಾಗರ್ ಅವರ ನೇತೃತ್ವದಲ್ಲಿ `ಭಕ್ತಿಗೀತೆ ಗಾಯನ’ ಕಾರ್ಯಕ್ರಮವು ನಡೆಯಿತು. ಎಂ.ಬಿ.ದೇವಯ್ಯ ಅವರ ನೇತೃತ್ವದ ತಂಡದವರು ದುಡಿ ನುಡಿಸಿದರು. ಕಿರು ಸಂಕ್ರಮಣ ಹಿನ್ನೆಲೆ ಮುಂದಿನ ಒಂದು ತಿಂಗಳ ಕಾಲ ತಲಕಾವೇರಿಗೆ ಭಕ್ತರು ಭೇಟಿ ನೀಡಿ ತೀರ್ಥ ಪಡೆಯುವುದು ವಿಶೇಷವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.