Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರ ದಸರಾ ಸಮಿತಿಯಿಂದ ಪೌರಕಾರ್ಮಿಕರಿಗೆ ಅಭಿನಂದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರ ದಸರಾ ಸಮಿತಿಯಿಂದ ಪೌರಕಾರ್ಮಿಕರಿಗೆ ಅಭಿನಂದನೆ*

ಅಕ್ಟೋಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 NEWS DESK : ಮಡಿಕೇರಿ ದಸರಾ ಯಶಸ್ಸಿಗೆ ಸಹಕರಿಸಿದ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ ಪೌರ ಕಾರ್ಮಿಕರನ್ನು ಆತ್ಮೀಯವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಪೌರಕಾರ್ಮಿಕರನ್ನು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷರಾದ ವೆಂಕಟ್ ರಾಜಾ ಮಡಿಕೇರಿ ದಸರಾ ಯಶಸ್ಸಿಗೆ ಪೌರ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶ್ಲಾಘಿಸಿದರು. ಮಡಿಕೇರಿ ನಗರಕ್ಕೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆ ಸ್ವಚ್ಚತೆಗೆ ಹೆಚ್ಚು ಒತ್ತು ನೀಡುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಪೌರಕಾರ್ಮಿಕರು ಪರಿಸರ ಶುಚಿತ್ವಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿಗಳ ಕೊರತೆಯ ನಡುವೆಯೂ ಪರಿಸರ ಶುಚಿತ್ವಕ್ಕೆ ಒತ್ತು ನೀಡಿರುವುದು ಮೆಚ್ಚುವಂತದ್ದು, ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು. ಕೊಡಗು ಜಿಲ್ಲೆ ಸ್ವಚ್ಚತೆಯಲ್ಲಿ ಇಡೀ ವಿಶ್ವದಲ್ಲಿಯೇ ಮಾದರಿಯಾಗಬೇಕು ಎಂಬುದು ಪ್ರತಿಯೊಬ್ಬರ ಆಶಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು. ಮಡಿಕೇರಿ ನಗರ ಸ್ವಚ್ಚತೆಯಲ್ಲಿ ಈಗಾಗಲೇ 10 ನೇ ಸ್ಥಾನದಲ್ಲಿದ್ದು, ಮತ್ತಷ್ಟು ಶುಚಿತ್ವಕ್ಕೆ ಒತ್ತು ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಮಡಿಕೇರಿ ನಗರ ದಸರಾ ಸಮಿತಿ ಗೌರವ ಅಧ್ಯಕ್ಷರಾದ ಜಿ.ಚಿದ್ವಿಲಾಸ್ ಅವರು ಮಾತನಾಡಿ ಪೌರಕಾರ್ಮಿಕರು ಸ್ವಚ್ಛತೆ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಮಡಿಕೇರಿ ನಗರದ ಪೌರಕಾರ್ಮಿಕರು ಪ್ರತಿನಿತ್ಯ ನಗುಮುಖದಿಂದ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಶ್ಲಾಘಿಸಿದ ಜಿ.ಚಿದ್ವಿಲಾಸ್ ಅವರು ಬಸವಣ್ಣನವರು ಕಾಯಕವೇ ಕೈಲಾಸ ಎಂಬಂತೆ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಾರೆ. ಪೌರಕಾರ್ಮಿಕರು ವೃತ್ತಿ ಸಂದರ್ಭದಲ್ಲಿ ಅಗತ್ಯ ಪರಿಕರಗಳನ್ನು ಬಳಸುವಂತಾಗಬೇಕು ಎಂದು ಸಲಹೆ ಮಾಡಿದರು. ಪೌರಾಯುಕ್ತರಾದ ಹೆಚ್.ಆರ್.ರಮೇಶ್ ಮಾತನಾಡಿ, ಇದೇ ಮೊದಲ ಬಾರಿಗೆ ದಸರಾ ಸಮಿತಿ ವತಿಯಿಂದ ಪೌರಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿರುವುದು ವಿಶೇಷವಾಗಿದೆ ಎಂದರು. ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ., ಕ್ರೀಡಾ ಸಮಿತಿ ಅಧ್ಯಕ್ಷರಾದ ಪ್ರದೀಪ್ ಕರ್ಕೆರ, ಸ್ವಾಗತ ಸಮಿತಿ ಅಧ್ಯಕ್ಷರಾದ ಕಾನೆಹಿತ್ಲು ಮೊನ್ನಪ್ಪ, ಸಾಂಸ್ಕೃತಿಕ ಸಮಿತಿ ಸದಸ್ಯರಾದ ವೀಣಾಕ್ಷಿ, ಮಿನಾಜ್ ಪ್ರವೀಣ್, ಕವನ್, ಅಭಿಯಂತರರಾದ ಸತೀಶ್, ಹೇಮಂತ್ ಕುಮಾರ್, ಸೌಮ್ಯ, ತಾಹಿರ್, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.