Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಜಿ ಸೈನಿಕರಿಗಾಗಿ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಜಿ ಸೈನಿಕರಿಗಾಗಿ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರ*

ಅಕ್ಟೋಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 NEWS DESK : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ ನ.24 ರಂದು ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಕೊಟ್ಟು ಕತ್ತೀರ ಪಿ. ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಸಾಲಿನ ಕ್ರೀಡಾಕೂಟದಲ್ಲಿ ಮಾಜಿ ಸೈನಿಕರುಗಳಿಗೆ, ವೀರ ನಾರಿಯರಿಗೆ, ವಿಧವೆಯರಿಗೆ, ಅವಲಂಬಿತರಿಗೆ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಬಾರಿ ಕ್ರೀಡಾ ಕೂಟದಲ್ಲಿ ಅರೆ ಸೇನಾ ಪಡೆಗಳ ಮಾಜಿ ಯೋಧರು ಮತ್ತು ಅವರ ಕುಟುಂಬಸ್ಥರಿಗೂ ಅವಕಾಶವನ್ನು ಕಲ್ಪಿಸಲಾಗಿದೆಯೆಂದು ಮಾಹಿತಿಯನ್ನಿತ್ತರು. ಕ್ರೀಡಾಕೂಟಕ್ಕೆ ಬೆಳಗ್ಗೆ 9 ಗಂಟೆಗೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ಕ್ರೀಡಾಜ್ಯೋತಿಯನ್ನು ಬೆಳಗಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನದವರೆಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನದ ಬಳಿಕ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ.ಕ್ರೀಡಾಕೂಟ ನಡೆಯುವ ಸಂದರ್ಭದಲ್ಲೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿದೆ. ಇಸಿಜಿ ಪರೀಕ್ಷಾ ಸೌಲಭ್ಯವೂ ಇದರಲ್ಲಿ ಸೇರಿದೆ. ಎಲ್ಲಾ ಮಾಜಿ ಸೈನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಮಾಜಿ ಸೈನಿಕರ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಶಾಸಕರು, ಉಸ್ತುವಾರಿ ಸಚಿವರುಗಳನ್ನು ಆಹ್ವಾನಿಸಲಾಗುತ್ತಿದೆ. ಸಮಾರೋಪ ಸಮಾರಂಭಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಆಹ್ವಾನಿಸಿ, ಅವರಿಂದ ಬಹುಮಾನ ವಿತರಣೆ ಮಾಡಬೇಕೆಂದು ಉದ್ದೇಶಿಸಲಾಗಿದೆಯೆಂದು ಕೊಟ್ಟುಕತ್ತೀರ ಸೋಮಣ್ಣ ತಿಳಿಸಿದರು.
ನಾವೆಲ್ಲರು ಒಂದೇ :: ಭಾರತೀಯ ಸೈನ್ಯದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿರುವ ಎಲ್ಲರೂ ಒಂದೇ. ಈ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಮಾಜಿ ಯೋಧರ ಸಂಘಟನೆಗಳಿಗೆ ಆಹ್ವಾನವನ್ನು ನೀಡಲಾಗಿದೆ. ಎಲ್ಲಾ ಮಾಜಿ ಯೋಧರು, ಅರೆ ಸೇನಾ ಪಡೆಯ ಯೋಧರು ಮತ್ತು ಅವರ ಕುಟುಂಬಸ್ಥರು ಪಾಲ್ಗೊಳ್ಳುವಂತೆ ಕೋರಿದರು. ಎಸ್‍ಬಿಐ ಸೇರಿದಂತೆ ವಿವಿಧ ಸಂಸ್ಥೆಗಳು ಕ್ರೀಡಾಕೂಟದ ಸಂದರ್ಭ, ಮಾಜಿ ಸೈನಿಕರಿಗೆ ಸಂಬಂಧಿಸಿದಂತೆ, ಅವುಗಳ ವ್ಯಾಪ್ತಿಯಲ್ಲಿ ಬರುವ ಯಾವುದೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಪ್ರಯತ್ನ ನಡೆಸಲಿವೆ. ಜಿಲ್ಲೆಯ ಬಹುತೇಕ ಮಾಜಿ ಯೋಧರ ಪಿಂಚಣಿ ಎಸ್‍ಬಿಐ ಮೂಲಕ ಬರುತ್ತದೆ.ಈ ಹಿನ್ನೆಲೆ ಪಿಂಚಣಿ ಕುರಿತ ಸಮಸ್ಯೆಗಳಿದ್ದಲ್ಲಿ ಎಸ್‍ಬಿಐ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಲು ಅವಕಾಶವಿದೆಯೆಂದು ತಿಳಿಸಿದರು.
30 ವಿವಿಧ ಸ್ಪರ್ಧೆಗಳು :: ಮಾಜಿ ಸೈನಿಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ಕ್ರೀಡಾಕೂಟದ ಸಂಚಾಲಕ ಕುಟ್ಟಂಡ ಲವ ಪೊನ್ನಪ್ಪ ಮಾತನಾಡಿ, ಕ್ರೀಡಾಕೂಟದಲ್ಲಿ 30 ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹಗ್ಗಜಗ್ಗಾಟ, ರಿಲೇ ಮೊದಲಾದ ಗುಂಪು ಸ್ಪರ್ಧೆಗಳು ತಾಲ್ಲೂಕು ತಂಡಗಳ ನಡುವೆ ನಡೆಯಲಿದೆ. ಉಳಿದಂತೆ ಇತರೆ ಸ್ಪರ್ಧೆಗಳಲ್ಲಿ ಎಲ್ಲರೂ ಪಾಲ್ಗೊಳ್ಳಬಹುದೆಂದು ತಿಳಿಸಿದರು. ಸೈನ್ಯ ಸೇರ್ಪಡೆಗೆ ಅನುಕೂಲವಾಗುವಂತೆ 800 ಮೀ.ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳ್ಳುವ ಮೂಲಕ ಸೈನ್ಯ ಸೇರ್ಪಡೆಯ ತಮ್ಮ ಸಾಮಥ್ರ್ಯವನ್ನು ಕಂಡುಕೊಳ್ಳಬಹುದೆಂದು ಅಭಿಪ್ರಾಯಿಸಿದರು. ಮಾಜಿ ಯೋಧರ ಸಂಘ ಅರೆ ಸೇನಾಪಡೆಯ ಸಂಚಾಲಕರಾದ ನೂರೇರ ಭೀಮಯ್ಯ ಮಾತನಾಡಿ, ಇಲ್ಲಿಯವರೆಗೆ ಇಂತಹ ಯಾವುದೇ ಕ್ರೀಡಾಕೂಟಗಳಿಗೆ ಅರೆಸೇನಾಪಡೆಯ ನಿವೃತ್ತ ಯೋಧರನ್ನು ಯಾವುದೇ ಸಂಘಟನೆಗಳು ಆಹ್ವಾನಿಸಿರಲಿಲ್ಲ. ಇದೇ ಮೊದಲ ಬಾರಿಗೆ ಅಖಿಲ ಕರ್ನಾಟಕ ಮಾಜಿ ಯೋಧರ ಸಂಘದ ಕೊಡಗು ಘಟಕ ತಮ್ಮನ್ನು ಆಹ್ವಾನಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕ್ರೀಡಾಕೂಟದ ಯಶಸ್ಸಿಗೆ ಪೂರ್ಣ ಸಹಕಾರ ನಿಡುವುದಾಗಿ ಸ್ಪಷ್ಟಪಡಿಸಿದರು. ಅಂತರಾಷ್ಟ್ರೀಯ ಮಟ್ಟದ ಅಥ್ಲಿಟ್, ಮಾಜಿ ಯೋಧರು ಹಾಗೂ ಕ್ರೀಡಾ ಸಂಚಾಲಕರಾದ ಹೊಸೊಕ್ಲು ಚಿಣ್ಣಪ್ಪ ಮಾತನಾಡಿ, ಸಂಘದ ಮೂಲಕ ಸೈನ್ಯ ಸೇರ್ಪಡೆ ಬಯಸುವ ಮಕ್ಕಳಿಗೆ ತರಬೇತಿ, ಮಾಜಿ ಯೋಧರ ಸಂಕಷ್ಟಗಳ ಪರಿಹಾರಕ್ಕೆ ಸಂಘದ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಾ ಬರಲಾಗುತ್ತಿದೆ ಎಂದರು. ಅಂತರಾಷ್ಟ್ರೀಯ ಕ್ರೀಡಾಪಟು ಮುಲ್ಲೇರ ಪೊನ್ನಮ್ಮ ಮಾತನಾಡಿ, ಸಂಘದಿಂದ ಮಾಜಿ ಸೈನಿಕರಿಗೆ ಸಾಕಷ್ಟು ಅನುಕೂಲವಾಗಿದೆಯೆಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಚೋವಂಡ ತಿಮ್ಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.