Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾವೇರಿ ನದಿ ಜಾಗೃತಿ ಯಾತ್ರೆ : ಕೊಡಗಿಗೆ ಸಾಧು ಸಂತರ ಆಗಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾವೇರಿ ನದಿ ಜಾಗೃತಿ ಯಾತ್ರೆ : ಕೊಡಗಿಗೆ ಸಾಧು ಸಂತರ ಆಗಮನ*

ಅಕ್ಟೋಬರ್ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.19 NEWS DESK : ನದಿ ಸಂರಕ್ಷಣೆ ಬಗ್ಗೆ ಜನರಿಗೆ ಅರಿವು ಜಾಗೃತಿ ಮೂಡಿಸುವ ಸಂಬಂಧ ಒಂದು ತಿಂಗಳ ಕಾಲ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವ ಅಖಿಲ ಭಾರತ ಸಾಧು ಸಂತರ ತಂಡ ಇಂದು (ಅ.19) ಜಿಲ್ಲೆಗೆ ಆಗಮಿಸಿದೆ. ಮೈಸೂರು ಮೂಲಕ ಕುಶಾಲನಗರ ಮಾರ್ಗವಾಗಿ ತಲಕಾವೇರಿಗೆ ತೆರಳಿದ ತಂಡವನ್ನು ಕುಶಾಲನಗರ ಗಡಿಭಾಗದ ಕೊಪ್ಪದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಪ್ರಮುಖರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ತಲಕಾವೇರಿಯಿಂದ ಪೂಂಪ್ ಹಾರ್ ತನಕ ಸಾಗಲಿರುವ ಯಾತ್ರೆಗೆ ಅ.20ರಂದು ತಲಕಾವೇರಿ ಕ್ಷೇತ್ರದಲ್ಲಿ ಚಾಲನೆ ದೊರೆಯಲಿದೆ. ಬೆಳಗ್ಗೆ 9 ಗಂಟೆಗೆ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ಪವಿತ್ರ ತೀರ್ಥವನ್ನು ಕಳಸಗಳಲ್ಲಿ ಸಂಗ್ರಹಿಸಿ ಒಯ್ಯಲಾಗುವುದು. ನಂತರ ಯಾತ್ರೆಗೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಅವರು 14ನೇ ವರ್ಷದ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಅಖಿಲ ಭಾರತ ಸನ್ಯಾಸಿಗಳ ಸಂಘದ ಸಂಸ್ಥಾಪಕರಾದ ಶ್ರೀ ರಮಾನಂದ ಸ್ವಾಮೀಜಿ ನೇತೃತ್ವದಲ್ಲಿ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಸಾಧು-ಸಂತರು ಯಾತ್ರೆಯಲ್ಲಿ ಪಾಲ್ಗೊಂಡಿದ್ದು ಕಾವೇರಿ ಮಾತೆಯ ರಥದೊಂದಿಗೆ ನವೆಂಬರ್ 13ರ ತನಕ ಕಾವೇರಿ ನದಿ ತಟದ ಪ್ರದೇಶಗಳಲ್ಲಿ ತಂಡ ಸಂಚರಿಸಲಿದೆ. ತಮಿಳುನಾಡಿನ ಕಾವೇರಿ ಹಾಗೂ ಬಂಗಾಳ ಕೊಲ್ಲಿ ಸಮುದ್ರಸಂಗಮದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಪವಿತ್ರ ತೀರ್ಥವನ್ನು ವಿಸರ್ಜನೆ ಮಾಡುವುದರೊಂದಿಗೆ ಯಾತ್ರೆ ಅಂತ್ಯಗೊಳ್ಳಲಿದೆ. ಯಾತ್ರಾ ಅವಧಿಯಲ್ಲಿ ನದಿಯ ತಟಗಳಲ್ಲಿ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳು ನಡೆಯುವುದರೊಂದಿಗೆ ನದಿ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಲಿದೆ ಎಂದು ರಮಾನಂದ ಸ್ವಾಮೀಜಿ ತಿಳಿಸಿದ್ದಾರೆ. ಯಾತ್ರಾ ತಂಡ ಜಿಲ್ಲೆಯಲ್ಲಿ ಭಾಗಮಂಡಲ ಕುಶಾಲನಗರ ಮೂಲಕ ಕಣಿವೆ ಮಾರ್ಗವಾಗಿ ಸಂಚರಿಸಲಿದ್ದು ಇಂದು ಭಾಗಮಂಡಲದ ಸಂಗಮದಲ್ಲಿ ವಿಶೇಷ ಆರತಿ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಕಾವೇರಿ ಆರತಿ ಕ್ಷೇತ್ರದಲ್ಲಿ ಯಾತ್ರಾ ತಂಡ 165ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಕೊಡ್ಲಿಪೇಟೆ ಕಿರಿಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯುವುದು. ಮರುದಿನ ಕಣಿವೆಯಲ್ಲಿ ಶ್ರೀ ರಾಮಲಿಂಗೇಶ್ವರ ದೇವಾಲಯ ಬಳಿ ಮಹಾ ಆರತಿ ಕಾರ್ಯಕ್ರಮ ಜರುಗಲಿದೆ. ತದನಂತರ ಕೊಣನೂರು ಮಾರ್ಗವಾಗಿ ರಾಮನಾಥಪುರದತ್ತ ಕಾವೇರಿ ನದಿ ಜಾಗೃತಿ ಯಾತ್ರೆ ತಂಡ ಸಾಗಲಿದೆ. ಕುಶಾಲನಗರಕ್ಕೆ ಯಾತ್ರಾ ತಂಡ ಆಗಮಿಸಿದ ವೇಳೆ ಸ್ಥಳೀಯ ಕಾವೇರಿ ಮಹಾ ಆರತಿ ಬಳಗದ ಪ್ರಮುಖರಾದ ವನಿತಾ ಚಂದ್ರಮೋಹನ್ ಮತ್ತಿತರರು ಸಾಧು ಸಂತರಿಗೆ ಪವಿತ್ರ ಕಾವೇರಿ ತೀರ್ಥ ನೀಡುವುದರೊಂದಿಗೆ ಬರಮಾಡಿಕೊಂಡರು. ಈ ಸಂದರ್ಭ ಸಾಧು ಸಂತರ ತಂಡದ ಸದಸ್ಯರು ಗಡಿಭಾಗದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.