Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.23 ರಂದು ಭಾಗಮಂಡಲದಲ್ಲಿ ಸಿಎನ್‌ಸಿಯಿಂದ ಜನಜಾಗೃತಿ ಮಾನವ ಸರಪಳಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.23 ರಂದು ಭಾಗಮಂಡಲದಲ್ಲಿ ಸಿಎನ್‌ಸಿಯಿಂದ ಜನಜಾಗೃತಿ ಮಾನವ ಸರಪಳಿ*

ಅಕ್ಟೋಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.20 : ಕೊಡಗು ಜಿಲ್ಲಾ ವ್ಯಾಪಿ ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ 79ಎ, 79ಬಿಯನ್ನು ದುರುಪಯೋಗಪಡಿಸಿಕೊಂಡು ನಡೆಸುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅ.23ರಂದು ಬೆಳಿಗ್ಗೆ 10.30 ಗಂಟೆಗೆ ಭಾಗಮಂಡಲದಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನಲ್ಲಿ ಕರ್ನಾಟಕ ಭೂಸುಧಾರಣಾ ಕಾಯ್ದೆ ವ್ಯಾಪಕವಾಗಿ ದುರುಪಯೋಗವಾಗುತ್ತಿದೆ. ಭಾಗಮಂಡಲ ತಲಕಾವೇರಿ ವ್ಯಾಪ್ತಿಯಲ್ಲಿ ಬರುವ ಪೇರೂರು ಬಲ್ಲಮಾವಟಿ ಪ್ರದೇಶದಲ್ಲಿ ಕಾವೇರಿಯ ಉಪನದಿ “ಕಪ್ಪೊಳೆಯ” ಜಲಮೂಲವನ್ನು ಧ್ವಂಸಗೊಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಕಾವೇರಿಯ ಪುಣ್ಯ ಸ್ಥಳವು ಸುಪ್ರಸಿದ್ಧ ತೀರ್ಥಯಾತ್ರ ಕ್ಷೇತ್ರವಾಗಿದ್ದು, ಇದು ಪ್ರವಾಸಿತಾಣವಾಗುವ ಬದಲು ಆಧ್ಯಾತ್ಮಿಕ, ಪಾರಮಾರ್ಥಿಕ ನೆಲೆಯಾಗಿ ಉಳಿದು ಮುಂದುವರೆಯಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ದುರ್ಬಳಕೆಯಾಗದಂತೆ ಸಾತ್ವಿಕ ಪ್ರತಿರೋಧವನ್ನು ಸಿಎನ್‌ಸಿ ಒಡ್ಡುತ್ತಾ ಬಂದಿದೆ. ಇದರ ಭಾಗವಾಗಿ ಬುಧವಾರ ಭಾಗಮಂಡಲದಲ್ಲಿ ಸಿಎನ್‌ಸಿಯಿಂದ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಮೂಲಕ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ಆರ್ಥಿಕ ಅಪರಾಧಿಗಳು ಹಾಗೂ ಉದ್ಯಮಪತಿಗಳು ಕೊಡವಲ್ಯಾಂಡ್ ನ ಪರಿಸರವನ್ನು ಸಂಪೂರ್ಣ ನಾಶ ಮಾಡುತ್ತಿದ್ದಾರೆ. ಟೌನ್‌ಶಿಪ್, ವಿಲ್ಲಾ ಮತ್ತು ರೆಸಾರ್ಟ್ ಗಳ ಮೂಲಕ ಕೊಡವ ಲ್ಯಾಂಡ್‌ನ ಪಾವಿತ್ರತೆಯನ್ನು ಮಲೀನ ಮಾಡಿ ಜಲಮೂಲ ಬಸಿದು, ಭೂಗರ್ಭ ಸೀಳಿ ರಮಣೀಯ ನಿಸರ್ಗ, ಮನಮೋಹಕ ಪರ್ವತ ಶ್ರೇಣಿಗಳನ್ನು ನಾಶ ಮಾಡಲಾಗುತ್ತಿದೆ. ಕರಾಳ ಭೂಸುಧಾರಣಾ ಕಾಯ್ದೆ ಅಡಿಯಲ್ಲಿ ಹೊರ ರಾಜ್ಯ ಹೊರದೇಶದ ಉದ್ಯಮಪತಿಗಳು ಎಗ್ಗಿಲ್ಲದೆ ಕೊಡವ ಲ್ಯಾಂಡ್‌ನಲ್ಲಿ ಭೂ ಕಬ್ಜದಲ್ಲಿ ತೊಡಗಿದ್ದಾರೆ. ಹೊರ ರಾಜ್ಯದ ಹಾಗೂ ಶತ್ರು ರಾಷ್ಟ್ರದ ಕಾರ್ಮಿಕರು ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ ಪಡೆದು ಭೂರಹಿತ ಶೋಷಿತರೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅಕ್ರಮ-ಸಕ್ರಮ ಮತ್ತು ಆಶ್ರಯ ಯೋಜನೆಯ ಫಲಾನುಭವಿಗಳಾಗಿ ಇಲ್ಲಿನ ಜನಸಂಖ್ಯಾ ಶಾಸ್ತ್ರದ ಪಲ್ಲಟಕ್ಕೆ ಕಾರಣವಾಗಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಮೂಲಕ ಸಾಮಾಜಿಕ ಸ್ವಾಸ್ಥö್ಯವನ್ನು ಹಾಳುಗೆಡುವುತ್ತಿದ್ದಾರೆ. ಇವರಿಗೆ ಭ್ರಷ್ಟ ಅಧಿಕಾರಶಾಯಿ ಹಾಗೂ ರಾಜಕೀಯ ಸಂಕುಲಗಳ ಬೆಂಬಲವಿದೆ. ಕೊಡವರ ಸ್ವಾಧೀನದಲ್ಲಿರುವ ಯುಗ ಯುಗಗಳ ಭೂಮಿಯನ್ನು ಕೊಡವರಿಗೆ 30 ವರ್ಷಗಳ ಗುತ್ತಿಗೆಗೆ ನೀಡುವ ಸರ್ಕಾರದ ಯೋಜನೆಯನ್ನು ವಿಫಲಗೊಳಿಸಲು ಯತ್ನಿಸುವ ಮೂಲಕ ದುಷ್ಟಕೂಟ ಕೊಡವರನ್ನು ಸಂಕಷ್ಟ ಮತ್ತು ಆತಂಕಕ್ಕೆ ತಳ್ಳುತ್ತಿದೆ ಎಂದು ಎನ್.ಯು.ನಾಚಪ್ಪ ಆರೋಪಿಸಿದ್ದಾರೆ. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್‌ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಭಾಗಮಂಡಲದಲ್ಲಿ ನಡೆಯುವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡು ಪ್ರತಿಜ್ಞಾವಿಧಿ ಸ್ವೀಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.19 : ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಪ್ರಕರಣಕ್ಕೆ ಸಂಬoಧಿಸಿದoತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ…

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.