Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿಯಲ್ಲಿ ಗಮನ ಸೆಳೆದ ವಿವಿಧ ಹಣ್ಣುಗಳ ಪ್ರದರ್ಶನ – ವೈವಿಧ್ಯತಾ ಮೇಳ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿಯಲ್ಲಿ ಗಮನ ಸೆಳೆದ ವಿವಿಧ ಹಣ್ಣುಗಳ ಪ್ರದರ್ಶನ – ವೈವಿಧ್ಯತಾ ಮೇಳ*

ಅಕ್ಟೋಬರ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ಕೃಷಿಕರು ಬೆಳೆದ ಬಗೆಬಗೆಯ ಹಣ್ಣಿನ ಪ್ರದರ್ಶನ ಹಾಗೂ ವೈವಿಧ್ಯತಾ ಮೇಳವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಎಲ್ಲರ ಗಮನ ಸೆಳೆಯಿತು. ರೈತರು ಬೆಳೆದ ಹಣ್ಣುಗಳಾದ ಕೊಡಗಿನ ಕಿತ್ತಳೆ, ರಸಬಾಳೆ, ಪಚ್ಚೆಬಾಳೆ, ಚಂದ್ರಬಾಳೆ, ಸಪೋಟ, ಹಲಸು, ಪ್ಯಾಶನ್ ಫ್ರೂಟ್, ಅಂಬಟೆ, ಸೀಬೆಕಾಯಿ, ಬೆಣ್ಣೆಹಣ್ಣು, ವಿಧದ ನಿಂಬೆ, ಪಪ್ಪಾಯ, ಚಕೋತ, ಚೆರಿ, ಪಾಲೆಹಣ್ಣು, ನೆಲ್ಲಿಕಾಯಿ ಜೊತೆಗೆ ವಿದೇಶಿ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೊಸ್ಟೀನ್, ಫಿಂಗರ್ ಬನಾನ, ಮೆಕಡೋಮಿಯ, ಡ್ರ್ರಾಗನ್ ಫ್ರೂಟ್, ಫ್ಯಾಸನ್ ಫ್ರೂಟ್, ಚೆರಿಗೋವಾ, ಬಂಚ್ ಗೋವಾ, ರೋಲಿನಿಯಾ, ಫಿಗ್, ಎಗ್‍ಫ್ರೂಟ್ ಹಣ್ಣುಗಳು ಪ್ರದರ್ಶನಗೊಂಡವು. ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ವತಿಯಿಂದ `ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆಯ ಜಾಗೃತಿ ಕಾರ್ಯಕ್ರಮ, ಹಣ್ಣುಗಳ ವೈವಿದ್ಯತಾ ಮೇಳ ಹಾಗೂ ಮ್ಯಾಂಗೋಸ್ಟೀನ್ ಮತ್ತು ರಾಂಬುಟಾನ್ ಹಣ್ಣಿನ ಕ್ಷೇತ್ರೋತ್ಸವವು ಅಧಿಕ ಮೌಲ್ಯದ ವಿದೇಶಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಸಂಘದ ಮೂಲಕ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆಯ ಜಾಗೃತಿ ಕಾರ್ಯಕ್ರಮ ನಡೆದವು. ನವದೆಹಲಿಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ರೈತರ ಹಕ್ಕುಗಳ ಕಾಯ್ದೆಯ ಅಧ್ಯಕ್ಷ ಡಾ.ಟ್ರಿಲೋಚನ್ ಮೊಹಪತ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೇಂದ್ರೀಯ ತೋಟಗಾರಿಕಾ ಕೇಂದ್ರವು ಕೃಷಿಯಲ್ಲಿ ವೈವಿಧ್ಯತೆಯನ್ನು ಕಂಡುಕೊಳ್ಳುತ್ತಿದೆ. ಇಂದು ಚೆಟ್ಟಳ್ಳಿಯ ಕೇಂದ್ರದಲ್ಲಿ ವಿವಿಧ ತಳಿಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಕೃಷಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರೈತರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿಯತ್ತ ಸಾಗಬೇಕು ಎಂದರು. ಭಾ.ಕೃ.ಅ.ಪ.-ಭಾ.ತೋ.ಸಂ.ಸ. ನಿರ್ದೇಶಕ ಪ್ರೊ.ಟಿ.ಕೆ.ಬೆಹೆರ ಮಾತನಾಡಿ, ಕೊಡಗಿನ ಕಿತ್ತಳೆಗೆ ಹೆಸರಿವಾಸಿಯಾಗಿದ್ದು, ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಮೂಲಕ ಕೃಷಿ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗುವುದೆಂದರು. ಕಾಫಿ ಮಂಡಳಿಯ ಮಾಜಿ ಉಪಾದ್ಯಕ್ಷ ಹಾಗೂ ಪ್ರಗತಿಪರ ಕೃಷಿಕ ಬೋಸ್ ಮಂದಣ್ಣ ಮಾತನಾಡಿ, ಕೂರ್ಗ್ ಮ್ಯಾಂಡರಿನ್ ಅಭಿವೃದ್ಧಿಗೆ ಚೆಟ್ಟಳ್ಳಿ ಕೇಂದ್ರೀಯ ತೋಟಗಾರಿಕಾ ಕೇಂದ್ರವು ಪ್ರಾರಂಭಗೊಂಡಿದೆಯಾದರೂ ಇತರೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡುವಂತಾಗಿ ಎಂದರು. ಕೇಂದ್ರದಲ್ಲಿ ವಿಜ್ಞಾನಿಗಳ ಹಾಗೂ ಸಿಬ್ಬಂದಿಗಳ ಕೊರತೆಯನ್ನು ನೀಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿಕರು ಸಂಶೋಧಿತ ಅರಿಗೋಲ್ಡ್ ಹಾಗೂ ತಿರುಮಲಾ ಎಂಬ ಹಲಸು ತಳಿ ಹಾಗೂ ಲಕ್ಷ್ಮಣಾ ಎಂಬ ಹುಣಸೆ ತಳಿಗಳನ್ನು ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಕಾನೂನಾತ್ಮಕವಾಗಿ ಪಡೆಯುವ ಮೂಲಕ ಕೃಷಿಕರಿಗೆ ಚೆಕ್ ನೀಡಲಾಯಿತು.
ಸನ್ಮಾನ :: ಕೊಡಗಿನ ಪ್ರಗತಿಪರ ರೈತ ನಾಪಂಡ. ಎನ್.ಪೂಣಚ್ಚ, ಸುದೀರ್ ಕುಮಾರ್ ಮಕ್ಕಿಮನೆ, ತಾಪಂಡ ವಾಸು ಕಾರ್ಯಪ್ಪ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಿಸಿದ ಡಾ.ಟ್ರಿಲೋಚನ್ ಮೊಹಪತ್ರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಐಐಎಚ್‍ಆರ್ ಪ್ರಾರ್ಥನೆಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದ ಪ್ರಾಧಾನ ವಿಜ್ಞಾನಿಗಳಾ ಡಾ. ಎಂ.ಶಂಕರನ ಸ್ವಾಗತಿಸಿದರು. ಕೇಂದ್ರದ ವಿಜ್ಚಾನಿ ಡಾ .ಎ.ಟಿ.ರಾಣಿ ನಿರೂಪಿಸಿದರು. ಕೇಂದ್ರದ ವಿಜ್ಞಾನಿಗಳಾದ ಬಿ.ಎಂ.ಮುರುಳಿದರ್ ವಂದಿಸಿದರು.
ವಿಚಾರ ಮಂಡನೆ :: ಅಧಿಕ ಮೌಲ್ಯದ ವಿದೇಶಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿ ಸಂಘದ ಮೂಲಕ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳಕಾಯ್ದೆಯ ಜಾಗೃತಿ ಕಾರ್ಯಕ್ರಮದ ಬಗ್ಗೆ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ ಬೆಂಗಳೂರಿನ ಪ್ರಧಾನ ವಿಜ್ಞಾನಿಗಳಾದ ಡಾ.ವಾಸುಗಿ ಸಿ ಹಾಗೂ ರಾಂಬುಟಾನ್ ಹಾಗೂ ಮ್ಯಾಂಗೋಸ್ಟೀನ್ ಹಣ್ಣಿನ ವೈಜ್ಞಾನಿಕ ಕೃಷಿಯ ಬಗ್ಗೆ ಹಣ್ಣು ವಿಜ್ಞಾನಿ ಡಾ. ಬಿ.ಎಂ.ಮುರಳೀಧರ ವಿಷಯ ಮಂಡನೆ ಮಾಡಿದರು.
ಬಹುಮಾನ :: ಉತ್ತಮ ಕೃಷಿ ಹಣ್ಣಿನ ಮಾದರಿ ಪ್ರದರ್ಶನಕ್ಕೆ ಬಹುಮಾನ ನೀಡಲಾಯಿತು. ರವಿಶಂಕರ್ ಹಾಗೂ ಸುಧೀರ್‍ಸ ಕುಮಾರ್ ಮಕ್ಕಿಮನೆ ಪ್ರಥಮ ಬಹುಮಾನ ರೂ.5 ಸಾವಿರ, ನಿರ್ಮಲಾ ಜಯಪ್ರಕಾಶ್ ಹಾಗೂ ಎಂ.ಎಂ.ಸೋಮಯ್ಯ ದ್ವಿತೀಯ ಬಹುಮಾನ ರೂ.3 ಸಾವಿರ, ಪುತ್ತರಿರ ಕರುಣ್ ಕಾಳಯ್ಯ ಹಾಗೂ ಪಿ.ಆರ್.ಮಂದಪ್ಪ ತೃತೀಯ ಬಹುಮಾನ ರೂ.2 ಸಾವಿರಗಳನ್ನು ಬಹುಮಾನವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ತಮಿಳುನಾಡು, ಕೇರಳ, ಆಂದ್ರ ಪ್ರದೇಶ ಸೇರಿದಂತೆ ಕರ್ನಾಟಕದ ವಿವಿಧೆಡೆಗಳಿಂದ 250ಕ್ಕೂ ಅಧಿಕ ಕೃಷಿಕರು ಭಾಗವಹಿಸಿದ್ದರು.

ವರದಿ : ಪುತ್ತರಿರ ಕರುಣ್ ಕಾಳಯ್ಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.