Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊಲೀಸ್ ಹುತಾತ್ಮರ ದಿನಾಚರಣೆ : ಪೊಲೀಸರ ಕರ್ತವ್ಯ ನಿಷ್ಠೆ ಸ್ಮರಣೀಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಪೊಲೀಸ್ ಹುತಾತ್ಮರ ದಿನಾಚರಣೆ : ಪೊಲೀಸರ ಕರ್ತವ್ಯ ನಿಷ್ಠೆ ಸ್ಮರಣೀಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ*

ಅಕ್ಟೋಬರ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.21 NEWS DESK : ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಡಿವೈಎಸ್‍ಪಿಗಳ ಪರವಾಗಿ ಮೋಹನ್ ಕುಮಾರ್, ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಪೊಲೀಸ್ ನಿರೀಕ್ಷಕರಾದ ಚೆನ್ನನಾಯಕ, ವೈಯರ್‍ಲೆಸ್ ವಿಭಾಗದ ಪೊಲೀಸ್ ಇನ್ಸ್‍ಪೆಕ್ಟರ್ ಆನಂದ್, ಮಾಜಿ ಸೈನಿಕರ ಪರವಾಗಿ ಏರ್‍ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ನಿವೃತ್ತ ಡಿವೈಎಸ್‍ಪಿಗಳ ಪರವಾಗಿ ಬಿ.ಎಂ.ಕುಶಾಲಪ್ಪ, ಪೊಲೀಸ್ ನಿರೀಕ್ಷಕರ ಪರವಾಗಿ ಐ.ಪಿ.ಮೇದಪ್ಪ, ಬ್ಯಾಂಡ್ ಮಾಸ್ಟರ್ ಸಿದ್ದೇಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ವಕೀಲರ ಸಂಘದ ಪರವಾಗಿ ನಿರಂಜನ, ಕೊಡವ ಸಮಾಜಗಳ ಪರವಾಗಿ ಮುತ್ತಪ್ಪ, ಗೌಡ ಸಮಾಜಗಳ ಪರವಾಗಿ ಸೂರ್ತಲೆ ಸೋಮಣ್ಣ, ರೋಟರಿಗಳ ಪರವಾಗಿ ಸುಬ್ರಮಣಿ, ಲಯನ್ಸ್ ಪರವಾಗಿ ಅಂಬೆಕಲ್ಲು ನವೀನ್, ಸುದಯ್ ನಾಣಯ್ಯ ಇತರರು ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು 2023-24ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಪೊಲೀಸ್ ಅಧಿಕಾರಿಗಳು ಮತ್ತು ಪೇದೆಗಳ ಹೆಸರು ಓದಿದರು. ಕರ್ನಾಟಕ ರಾಜ್ಯ ಐವರು ಸೇರಿದಂತೆ ಒಟ್ಟು ದೇಶದಲ್ಲಿ 216 ಮಂದಿ ಹುತಾತ್ಮರಾಗಿರುವ ಪೊಲೀಸರ ಹೆಸರನ್ನು ಓದಿದರು.
ಪೊಲೀಸ್ ಕವಾಯತು ಸಿಬ್ಬಂದಿಗಳು ಮೂರು ಸುತ್ತು ವಾಲಿ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಗಣ್ಯರು ಸೇರಿದಂತೆ ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು. ಹುತಾತ್ಮರ ಸ್ಮರಣಾರ್ಥ ಎಲ್ಲರೂ ಎದ್ದು ನಿಂತು ಎರಡು ನಿಮಿಷ ಮೌನಾಚರಣೆ ಮಾಡಿದರು. ಬಳಿಕ ರಿವಾಲಿ ಕವಾಯತು ಸಿಬ್ಬಂದಿಗಳು ವಂದಿಸಿದರು. ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು. ಸಿದ್ದೇಶ್ ತಂಡದವರು ವಾದ್ಯದೊಂದಿಗೆ ರಾಷ್ಟ್ರಗೀತೆ ನುಡಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪೊಲೀಸರ ಕರ್ತವ್ಯ ನಿಷ್ಠೆಯನ್ನು ಸದಾ ಸ್ಮರಿಸುವಂತಾಗಬೇಕು. ಸಮಾಜದ ರಕ್ಷಣೆ ಮಾಡುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಪೊಲೀಸರು ಸಮಾಜಕ್ಕೆ ನೀಡಿದ ಸಂದೇಶಗಳನ್ನು ಮರೆಯಬಾರದು ಎಂದು ಹೇಳಿದರು.
ಸಮಾಜದ ಸಮಗ್ರ ಸುರಕ್ಷತೆ ಹಾಗೂ ಭದ್ರತೆಗಾಗಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಕರ್ತವ್ಯ ನಿಷ್ಠೆ ಹಾಗೂ ನಿಸ್ವಾರ್ಥ ಸೇವೆ ಸ್ಮರಿಸುವಂತಾಗಬೇಕು ಎಂದು ಹೇಳಿದರು. ಪೊಲೀಸ್ ಮುಖ್ಯ ಕಾಬೀಲರಾದ ಎಂ.ಇ. ಫಾರೂಕ್ ಮತ್ತು ಎಂ.ಎಸ್.ಲೋಕೇಶ್ ಅವರು ನಿರೂಪಿಸಿ, ವಂದಿಸಿದರು.
ಮತ್ತಷ್ಟು ಮಾಹಿತಿ: 1959 ರ ಅಕ್ಟೋಬರ್, 21 ರಂದು ಭಾರತದ ಗಡಿ ಪ್ರದೇಶದಲ್ಲಿರುವ ಲಡಾಕ್ ಹಾಟ್ ಸ್ಪ್ರಿಂಗ್ಸ್ ಅಕ್ಷಯ್ ಚಿನ್ ಎಂಬ ಸ್ಥಳದಲ್ಲಿ ಸಿಆರ್‍ಪಿಎಫ್ ಪಡೆಯ ಕರಣ್ ಸಿಂಗ್, ಎಸ್.ಐ ಮತ್ತು ಸಿಬ್ಬಂದಿಗಳು ಗಡಿ ಭದ್ರತಾ ಕರ್ತವ್ಯದಲ್ಲಿರುವಾಗ ಚೀನಾ ಪಡೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಭಾರತೀಯ ವೀರ ಪೊಲೀಸರು ಎದೆಗುಂದದೆ ಜೀವದ ಹಂಗು ತೊರೆದು ಧೈರ್ಯ ಮತ್ತು ಸಾಹಸದಿಂದ ಹೋರಾಟ ನಡೆಸಿದ್ದು, ಈ ಸಂದರ್ಭದಲ್ಲಿ 10 ಜನ ಪೊಲೀಸರು ವೀರ ಮರಣ ಹೊಂದಿರುತ್ತಾರೆ ಹಾಗೂ 09 ಜನ ಪೊಲೀಸರು ಗಾಯಗೊಂಡು ಸೆರೆಯಾಗಿರುತ್ತಾರೆ. ಧೈರ್ಯ ಮತ್ತು ಸಾಹಸದಿಂದ ಹೋರಾಟ ನಡೆಸಿ ವೀರ ಮರಣ ಹೊಂದಿದ ಪೊಲೀಸರ ಸಾವಿಗೆ ಇಡೀ ಭಾರತ ದೇಶದ ಜನತೆಯೇ ಶೋಕಿಸಿತು ಮತ್ತು ಹುತಾತ್ಮರಾದ ಪೊಲೀಸರ ನೆನಪಿಗಾಗಿ ಘಟನೆ ನಡೆದ ಸ್ಥಳದಲ್ಲಿ ಸಮುದ್ರ ಮಟ್ಟದಿಂದ ಸುಮಾರು 16 ಸಾವಿರ ಅಡಿ ಎತ್ತರದ ಒಂದು ಸ್ಮಾರಕವನ್ನು ಭಾರತ ಸರ್ಕಾರ ನಿರ್ಮಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.