Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*2 ಕೋಟಿ ವೆಚ್ಚದಲ್ಲಿ ಭವ್ಯ ವೇದಿಕೆ ನಿರ್ಮಾಣ : ನಗರಸಭೆಯ ಸಾಮಾನ್ಯ ಸಭೆ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*2 ಕೋಟಿ ವೆಚ್ಚದಲ್ಲಿ ಭವ್ಯ ವೇದಿಕೆ ನಿರ್ಮಾಣ : ನಗರಸಭೆಯ ಸಾಮಾನ್ಯ ಸಭೆ ನಿರ್ಧಾರ*

ಅಕ್ಟೋಬರ್ 23, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.23 NEWS DESK : ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಭವ್ಯ ವೇದಿಕೆ ನಿರ್ಮಿಸುವುದಕ್ಕೆ ಹೆಚ್ಚಿನ ಹಣ ವ್ಯಯವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 2 ಕೋಟಿ ವೆಚ್ಚದಲ್ಲಿ ಶಾಶ್ವತವಾದ ಸುಸಜ್ಜಿತ ಭವ್ಯ ವೇದಿಕೆ ನಿರ್ಮಿಸಲು ನಗರಸಭಾ ವಿಶೇಷ ಸಾಮಾನ್ಯ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ನಗರಸಭೆಯ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆಯ ಆಡಳಿತಾಧಿಕಾರಿಗಳಾದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗಾಂಧಿ ಮೈದಾನದಲ್ಲಿ ಪ್ರಸ್ತುತ ಇರುವ ರಂಗ ಮಂದಿರವನ್ನು ಕೆಡವಿ ನೂತನ ರಂಗ ಮಂದಿರ ನಿರ್ಮಾಣ, ಕಲಾವಿದರ ಅನುಕೂಲಕ್ಕಾಗಿ ಗ್ರೀನ್ ರೂಂ, ವೇದಿಕೆಯ ಎರಡು ಬದಿಗಳಲ್ಲಿ ಗ್ಯಾಲರಿ, ಹಣ ಪಾವತಿಸಿ ಬಳಸುವ ಶೌಚಾಲಯ ನಿರ್ಮಾಣ, ಹಣ ಪಾವತಿಸಿ ಬಳಸುವ ವಾಹನ ನಿಲುಗಡೆ ಸ್ಥಳ ಮತ್ತು ವೈದ್ಯಕೀಯ ಸಹಾಯ ಕೇಂದ್ರ ನಿರ್ಮಾಣ ಕಾಮಗಾರಿಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಉದ್ದೇಶಿತ ನೂತನ ರಂಗ ಮಂದಿರ, ವಾಹನ ನಿಲುಗಡೆ ಸ್ಥಳಗಳನ್ನು ನಗರಸಭೆ ತನ್ನ ವಿವೇಚನೆಯಂತೆ ವರ್ಷ ಪೂರ್ತಿ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳ ಕಾರ್ಯಕ್ರಮಗಳ ಆಯೋಜನೆಗೆ ಬಾಡಿಗೆಯನ್ನು ನಿಗದಿ ಪಡಿಸಿ ಕೊಡಲು ಅವಕಾಶವಿದೆ. ಇದರಿಂದ ನಗರಸಭೆಗೂ ಆರ್ಥಿಕ ಕ್ರೋಢೀಕರಣವಾಗಲಿದೆಯೆಂದು ಅಭಿಪ್ರಾಯಿಸಿ, ಇಂತಹ ರಂಗ ಮಂದಿಗಳಿಂದ ಜಿಲ್ಲೆಯ ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿಕೊಡಲು ಸಹಕಾರಿಯಾಗುತ್ತದೆ. ನಗರಸಭೆಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ನಿಗದಿಯಾಗಿರುವ ಎಂಟರ್‍ಪ್ರೈಸಿಂಗ್ ನಿಧಿಯಲ್ಲಿ 7.33 ಕೊಟಿ ರೂ.ಗಳಿದ್ದು, ಇದರಲ್ಲಿ 2 ಕೋಟಿ ರೂ.ಗಳನ್ನು ನೂತನ ರಂಗಮಂದಿರಕ್ಕೆ ಬಳಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ನಗರಸಭಾ ಸದಸ್ಯ ಕೆ.ಎಸ್.ರಮೇಶ್ ಮಾತನಾಡಿ, ಪ್ರತಿ ವರ್ಷ ದಸರ ಸಂದರ್ಭ ವೇದಿಕೆ ನಿರ್ಮಾಣಕ್ಕೆ ಸುಮಾರು 35 ಲಕ್ಷ ರೂ.ಗಳ ಹೊರೆ ಬೀಳುತ್ತಿದೆ. ನೂತನ ರಂಗಮಂದಿರವನ್ನು ವ್ಯವಸ್ಥಿತವಾಗಿ ನಿರ್ಮಿಸಿದಲ್ಲಿ ಈ ವೆಚ್ಚಕ್ಕೆ ಕಡಿವಾಣ ಬೀಳಲಿದೆ. ಈ ಹಿನ್ನೆಲೆ ನಗರಸಭೆಯ ನಿಧಿಯಿಂದ ಹೆಚ್ಚಿನ ಹಣವನ್ನು ಬೇಕಿದ್ದಲ್ಲಿ ಬಳಸುವ ಮೂಲಕ ರಂಗ ಮಂದಿರ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟರು. ಗಾಂಧಿ ಮೈದಾನದಲ್ಲಿ ವ್ಯವಸ್ಥಿತ ಮತ್ತು ಶಾಶ್ವತ ರಂಗ ಮಂದಿರ ನಿರ್ಮಾಣದೊದಿಗೆ, ಪ್ರಸ್ತುತ ಇರುವ ಕಾವೇರಿ ಕಲಾಕ್ಷೇತ್ರವನ್ನು ಉತ್ತಮ ರೀತಿಯಲ್ಲಿ ಪುನರ್ ನಿರ್ಮಾಣ ಮಾಡುವ ಮೂಲಕ, ನಗರದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ಒದಗಿಸಿಕೊಡುವ ಮೂಲಕ ಮಡಿಕೇರಿಯನ್ನು ‘ಸಾಂಸ್ಕೃತಿಕ ಕೇಂದ್ರ’ವನ್ನಾಗಿ ಮಾಡಬೇಕೆಂದರು. ಪ್ರಸ್ತುತ ಸುದರ್ಶನ ವೃತ್ತದಿಂದ ಗಾಂಧಿ ಮೈದಾನದ ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಫುಟ್ ಪಾತ್ ಇಲ್ಲ. ಈ ಹಿನ್ನೆಲೆ ವ್ಯವಸ್ಥಿತವಾದ ಮತ್ತು ಆಧುನಿಕ ರೀತಿಯ ಫುಟ್ ಪಾತ್ ನಿರ್ಮಾಣದ ಪ್ರಯತ್ನವೂ ನಡೆಯುತ್ತಿದೆ. ಇದು ಕಾರ್ಯಗತಗೊಂಡಲ್ಲಿ ಮಡಿಕೇರಿಯ ಆಕರ್ಷಣೆಯೂ ಹೆಚ್ಚಲಿದೆ ಎಂದು ತಿಳಿಸಿದರು.
::: ಪ್ಲಾಸ್ಟಿಕ್ ಬಾಟಲಿ :::
ನಗರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಾಟಲಿಗಳ ತ್ಯಾಜ್ಯ ಮಿತಿ ಮೀರಿರುವ ವಿಚಾರ ಪ್ರಸ್ತಾಪವಾಗಿ ಇದಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, 2 ಲೀ. ನೀರಿನ ಬಾಟಲಿಗಿಂತ ಕೆಳಗಿರುವ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸುವ ಮತ್ತು ಪ್ಲಾಸ್ಟಿಕ್ ಬಾಟಲಿ ಬಳಸಿ ಒಗೆಯುವವರ ವಿರುದ್ಧ ದಂಡ ವಿಧಿಸಲು ನಗಸಭೆ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿದರು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಪರಿಶಿಷ್ಟರಿಗೆ ಮೀಸಲಾದ ಶೇ.24ರ ಹಣದಲ್ಲಿ ಚಿಕ್ಕಾಸು ಹಣವು ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ಬಳಕೆಯಾಗಿಲ್ಲವೆಂದು ಸದಸ್ಯ ಮನ್ಸೂರ್ ಅಲಿ ಅಸಮಾಧಾನ ವ್ಯಕ್ತಪಡಿಸಿದರು. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಸದಸ್ಯ ಅರುಣ್ ಶೆಟ್ಟಿ ಮಾತನಾಡಿ, ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳು ಸಮರ್ಪಕವಾಗಿ ನಡೆದಿಲ್ಲವೆಂದರು. ಸದಸ್ಯ ಅಪ್ಪಣ್ಣ ಮಾತನಾಡಿ ದಸರಾ ಸಂದರ್ಭ ದೇವಸ್ಥಾನಗಳಿಗೆ ತೆರಳುವ ರಸ್ತೆಗಳ ಗುಂಡಿ ಮುಚ್ಚಲಾಗಿದೆ. ಉಳಿದ ಬಡಾವಣೆಗಳಲ್ಲಿ ಇಂದಿಗೂ ರಸ್ತೆಗಳು ಹೊಂಡ ಗುಂಡಿಗಳಿಂದ ತುಂಬಿದ್ದು, ದುರಸ್ತಿ ಕಾರ್ಯ ನಡೆಸಿಕೊಡುವಂತೆ ಕೋರಿದರು. ನಗರ ವ್ಯಾಪ್ತಿಯ ಸಾಕಷ್ಟು ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ರಸ್ತೆಯಲ್ಲಿ ನಡೆಯಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಸದಸ್ಯರು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು, ಬೀದಿನಾಯಿಗಳ ಸಂತಾನಹರಣ ಚಿಕಿತ್ಸೆಗೆ ತಗುಲುವ ವೆಚ್ಚ ಹೆಚ್ಚಾಗಿದ್ದು, ಇದನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸದಸ್ಯ ಅಮಿನ್ ಮೊಹಿಸಿನ್, ಬೀದಿ ನಾಯಿಗಳಿಗಾಗಿಯೇ ಪ್ರತ್ಯೇಕ ಜಾಗವನ್ನು ಗುರುತಿಸಿ ಅಲ್ಲಿ ಅವುಗಳನ್ನು ಬಿಡಬೇಕೆಂದು ಸಲಹೆ ನೀಡಿದರು.
ನಗರದ ವಿವಿಧ ಬಡಾವಣೆಗಳಲ್ಲಿ ಮಿತಿ ಮೀರಿರುವ ಮಂಗಗಳ ಕಾಟ, ಕಾಡು ಹಂದಿಗಳ ಉಪಟಳದ ಬಗ್ಗೆಯೂ ಸದಸ್ಯರು ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಸಭೆಯಲ್ಲಿ ಪೌರಾಯುಕ್ತರಾದ ಹೆಚ್.ಆರ್.ರಮೇಶ್, ಸದಸ್ಯರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.