Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಕಾಲತ್‍ರ ಕಳಿ” ಕೊಡವ ಚಲನಚಿತ್ರ ಅ.28 ರಂದು ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಕಾಲತ್‍ರ ಕಳಿ” ಕೊಡವ ಚಲನಚಿತ್ರ ಅ.28 ರಂದು ಬಿಡುಗಡೆ*

ಅಕ್ಟೋಬರ್ 26, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.26 NEWS DESK : ಪಿ ಆ್ಯಂಡ್ ಜಿ ಕ್ರಿಯೇಷನ್ಸ್ ಹಾಗೂ ಕೊಡಗು ಕ್ರಿಯೇಷನ್ಸ್ ಸಹಯೋಗದಲ್ಲಿ ನಿರ್ಮಿಸಿರುವ “ಕಾಲತ್‍ರ ಕಳಿ” ಕೊಡವ ಚಲನಚಿತ್ರ ಅ.28 ರಂದು ವಿರಾಜಪೇಟೆಯಲ್ಲಿ ಬಿಡುಗಡೆಯಾಗಲಿದೆ ಎಂದು ಚಲನಚಿತ್ರದ ನಿರ್ದೇಶಕ ಬಾಳೆಯಡ ಪ್ರತೀಶ್ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10 ಗಂಟೆಗೆ ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಕಾಫಿ ಬೆಳೆಗಾರರು ಹಾಗೂ ದಾನಿಗಳಾದ ನಡಿಕೇರಿಯಂಡ ವಿಕ್ರಮ್ ಪಾಲ್ಗೊಳ್ಳಲಿದ್ದಾರೆ ಎಂದರು. ಬಾಳೆಯಡ ಪ್ರತೀಶ್ ಪೂವಯ್ಯ ಹಾಗೂ ಆಚೆಯಡ ಗಗನ್ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸೋಮೆಯಂಡ ಬೋಸ್ ಬೆಳ್ಯಪ್ಪ ಹಾಗೂ ಸಾರ್ವಜನಿಕರ ನೆರವಿನಿಂದ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದ ಮುಖ್ಯ ಪಾತ್ರದಲ್ಲಿ ಮಾಚೆಟ್ಟಿರ ವಿಕಾಸ್ ಬೋಪಣ್ಣ, ಕೋಪುಡ ದೇಸ್ನ ದೇಚಮ್ಮ ನಟಿಸಿದ್ದು, ವಿಶೇಷ ಪಾತ್ರದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ 100ಕ್ಕೂ ಹೆಚ್ಚು ಮಂದಿ ಅಭಿನಯಿಸಿದ್ದು, ಕೊಡಗಿನ ವಿವಿಧೆಡೆ ಚಿತ್ರೀಕರಿಸಲಾಗಿದೆ. ಚಿತ್ರೀಕರಣ ಹಾಗೂ ಸಂಕಲನವನ್ನು ಪಾಪು ಚಂದ್ರಶೇಖರ್, ಧ್ವನಿ ಮುದ್ರಣವನ್ನು ಟಿ.ಡಿ.ಮೋಹನ್ ನಿರ್ವಹಿಸಿದ್ದಾರೆ. ಸಂಗೀತ ನಿರ್ದೇಶಕರಾಗಿ ವಿಲ್‍ಸ್ಟನ್ ಕಾರ್ಯನಿರ್ವಹಿಸಿದ್ದಾರೆ. ಮುಕ್ಕಾಟಿರ ಮೌನಿ ನಾಣಯ್ಯ ಹಾಗೂ ಕೋಟೆರ ವಿನು ಹಾಡುಗಳಿಗೆ ಸಾಹಿತ್ಯ ನೀಡಿದ್ದಾರೆ. ಚೆಟ್ಟೀರ ಗ್ರಂಥ, ಕಬ್ಬಚೀರ ರಶ್ಮಿ, ಕೋಟೆರ ವಿನು ಹಾಗೂ ಟಿ.ಡಿ.ಮೋಹನ್ ಹಾಡಿದ್ದಾರೆ. ಪಿ ಆ್ಯಂಡ್ ಜಿ ಕ್ರಿಯೇಷನ್ಸ್ ಈ ಮೊದಲು “ಭಾವ ಬಟ್ಟೆ”, “ಉಷಾರ್” ಹಾಗೂ “ಕಲ್ಲಕೆರೆ ಮಾದೇವಿ” ಎನ್ನುವ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿತ್ತು ಎಂದು ಪ್ರತೀಶ್ ಪೂವಯ್ಯ ಹೇಳಿದರು. ಮತ್ತೋರ್ವ ನಿರ್ದೇಶಕ ಆಚೆಯಡ ಗಗನ್ ಗಣಪತಿ ಮಾತನಾಡಿ, ಇಂದಿನ ಸಮಾಜದಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಚಟುವಟಿಕೆ ಹಾಗೂ “ಹನಿ ಟ್ರ್ಯಾಪ್” ಗಳಂತಹ ಮಾರಕ ಅಂಶಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ “ಕಾಲತ್‍ರ ಕಳಿ”ಯಲ್ಲಿ ಯುವಕÀ, ಯುವತಿಯರಿಗೆ ಉತ್ತಮ ಸಂದೇಶವನ್ನು ನೀಡಿ ಸಾಮಾಜಿಕ ಜಾಗೃತಿ ಮೂಡಿಸಲಾಗಿದೆ. ಕೊಡಗಿನ ಜನ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿತ್ರವನ್ನು ವೀಕ್ಷಿಸಿ ಚಿತ್ರತಂಡವನ್ನು ಪ್ರೋತ್ಸಾಹಿಸುವಂತೆ ಮನವಿ ಮಾಡಿದರು. ಕಲಾವಿದ ಚೇನಂಡ ಗಿರೀಶ್ ಪೂಣಚ್ಚ ಮಾತನಾಡಿ, “ಕಾಲತ್‍ರ ಕಳಿ” ಚಲನಚಿತ್ರ ಅ.28 ಹಾಗೂ 29 ರಂದು ವಿರಾಜಪೇಟೆ ಕೊಡವ ಸಮಾಜದಲ್ಲಿ ಪ್ರತಿದಿನ 3 ಪ್ರದರ್ಶನ ಕಾಣಲಿದೆ. ಬೆಳಿಗ್ಗೆ 10.30, ಮಧ್ಯಾಹ್ನ 2 ಗಂಟೆ ಮತ್ತು ಸಂಜೆ 6 ಗಂಟೆಗೆ ಪ್ರದರ್ಶನವಿರುತ್ತದೆ. ಅ.31 ಹಾಗೂ ನ.1 ರಂದು ವಿರಾಜಪೇಟೆ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಮೂರು ಪ್ರದರ್ಶನ ನೀಡಲಾಗುವುದು. ಅಲ್ಲದೆ ಕೊಡಗಿನ ವಿವಿಧೆಡೆ ಚಿತ್ರ ಪ್ರದರ್ಶನ ಕಾಣಲಿದ್ದು, ಮೈಸೂರು, ಬೆಂಗಳೂರು ಕೊಡವ ಸಮಾಜದಲ್ಲೂ ಪ್ರದರ್ಶನವಿರುತ್ತದೆ. ಕೊಡಗಿನ ಸಮಸ್ತ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿತ್ರವನ್ನು ವೀಕ್ಷಿಸುವಂತೆ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕ ಸೋಮೆಯಂಡ ಬೋಸ್ ಬೆಳ್ಯಪ್ಪ ಮಾತನಾಡಿ, ಚಿತ್ರದ ಪ್ರೀಮಿಯರ್ ಶೋ ಅ.12 ರಂದು ವಿರಾಜಪೇಟೆ ಕೊಡವ ಸಮಾಜದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಮ್ಮುಖದಲ್ಲಿ ಪ್ರದರ್ಶಿಸಲಾಗಿದೆ ಎಂದು ಹೇಳಿದರು. ಕಲಾವಿದೆ ತಾತಂಡ ಪ್ರಭಾ ನಾಣಯ್ಯ ಮಾತನಾಡಿ, ಎಲ್ಲಾ ಕಲಾವಿದರು ಉತ್ತಮವಾಗಿ ನಟಿಸಿದ್ದು, ತಮ್ಮ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಚಿತ್ರದ ಮೂಲಕ ಯುವ ಸಮೂಹಕ್ಕೆ ಉತ್ತಮ ಸಂದೇಶವನ್ನು ನೀಡಲಾಗಿದ್ದು, ಕುಟುಂಬ ಸಮೇತರಾಗಿ ಚಿತ್ರ ವೀಕ್ಷಿಸಬಹುದಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕಲಾವಿದೆ ಕಾಣತಂಡ ಬೀನ ಜಗದೀಶ್ ಉಪಸ್ಥಿತರಿದ್ದರು.
:: ಚಿತ್ರ ತಂಡ :: ಚಲನಚಿತ್ರದ ತಾರಗಣದಲ್ಲಿ ಮಾಚೆಟ್ಟಿರ ವಿಕಾಶ್ ಬೋಪಣ್ಣ, ಕೋಪುಡ ದೇಸ್ನ ದೇಚಮ್ಮ, ತಾತಂಡ ಪ್ರಭಾ ನಾಣಯ್ಯ, ಪಟ್ಟಡ ಧನು, ಸೋಮೆಯಂಡ ಬೋಸು ಬೆಳ್ಯಪ್ಪ, ಬಿದ್ದಂಡ ಉತ್ತಮ್, ಮಲ್ಲಮಾಡ ಶ್ಯಾಮಲ ಸುನಿಲ್, ಮುಂಡಚಾಡಿರ ರಿನಿ ಭರತ್, ತಾತಂಡ ಮಿನ್ನು ನವೀನ್, ಕಾಳೆಂಗಡ ಸಪ್ನ, ಚೇನಂಡ ಗಿರೀಶ್ ಪೂಣಚ್ಚ, ಕಾಣತಂಡ ಬೀನ ಜಗದೀಶ್, ಬಾನಂಗಡ ಭಾಗ್ಯ ಪ್ರದೀಪ್, ಮಾದೆಯಂಡ ಲೆರಾಯಿ, ಮಾದೆಯಂಡ ಸಂಪಿ ಪೂಣಚ್ಚ, ಪಾಲೆಯಂಡ ಸುಚಿತ್ರ, ಕಳ್ಳಿಚಂಡ ಭಾರತಿ ಜೋಕಿರ ವಿಠಲ್, ತಿತೀರ ಸುರಾಜ್ ಕುಟ್ಟಪ್ಪ, ಆಂಡಮಡ ಪವನ್, ಸಾತ್ವಿಕ್, ಜಮ್ಮಡ ಪ್ರೀತು ಅಪ್ಪಯ್ಯ, ಮಲ್ಲಪನೆರ ವಿನು, ಕರ್ತಮಾಡ ರೋಷನ್, ಮಂಡೇಟಿರ ರಜತ್, ಪಳಗಂಡ ರೇಖ, ಸುಳ್ಳಿಮಾಡ ಕರಿಷ್ಮ, ಚೊಟ್ಟೆಕಾಳಪಂಡ ಶಾಲಿನಿ, ಚೇಮಿರ ಸೀತಮ್ಮ, ಕೊಂಡಿರ ಪ್ರಮೀಕ ಸೇರಿದಂತೆ 100ಕ್ಕೂ ಅಧಿಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.