Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*
  • *ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*
  • *ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*
  • *ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*
  • *ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಮೃತದೇಹ ಸುಟ್ಟ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಸುಂಟಿಕೊಪ್ಪ : ಮೃತದೇಹ ಸುಟ್ಟ ಪ್ರಕರಣ : ಪತ್ನಿ ಸೇರಿ ಮೂವರ ಬಂಧನ*

ಅಕ್ಟೋಬರ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.26 NEWS DESK : ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ತೋಟವೊಂದರಲ್ಲಿ ಅ.8 ರಂದು ಪತ್ತೆಯಾದ ಅರೆಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪದಡಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಮೂಲತ: ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್ ನಗರದ, ಪ್ರಸ್ತುತ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಿರುವ ನಿಹಾರಿಕ ಪಿ. (29), ಆಂಧ್ರ ಪ್ರದೇಶದ ಕಡಪ ಜಿಲ್ಲೆಯ ವಾಸವಿ ನಗರದ ಪ್ರಸ್ತುತ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ವಾಸವಿರುವ ನಿಖಿಲ್ ಮೈರೆಡ್ಡಿ (28) ಹಾಗೂ ಹರಿಯಾಣ ರಾಜ್ಯದ ಕಾರ್ನಲ್ ಗರುಂದ ನಿವಾಸಿ ಅಂಕೂರ್ ರಾಣ(30) ನನ್ನು ಬಂಧಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಅರೆಸುಟ್ಟ ಮೃತದೇಹ ನಿಹಾರಿಕಳ ಪತಿ ರಮೇಶ್ ಕುಮಾರ್ (54) ಎಂಬುವವರದ್ದಾಗಿದೆ ಎಂದರು.
::: 500 ಸಿಸಿ ಕ್ಯಾಮರಾ :::
ಕಾಫಿ ತೋಟದಲ್ಲಿದ್ದ ಅರೆಸುಟ್ಟ ಮೃತದೇಹದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆಯನ್ನು ಕೈಗೊಂಡು ಆರೋಪಿಗಳ ಪತ್ತೆಗಾಗಿ ಸುಮಾರು 500 ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿದ್ದಾರೆ.
ಕೃತ್ಯಕ್ಕೆ ಬಳಸಿರಬಹುದಾದ ಸಂಶಯಾಸ್ಪದ ಕಾರಿನ ಮಾಹಿತಿಯನ್ನು ಕಲೆ ಹಾಕಿದಾಗ ಇದು ರಮೇಶ್ ಕುಮಾರ್ ಹೈದರಾಬಾದ್ ಎಂಬುವವರದ್ದಾಗಿದೆ ಎಂದು ತಿಳಿದುಬಂದಿದೆ. ಇದನ್ನು ಆಧರಿಸಿ ತನಿಖೆಯನ್ನು ತೀವ್ರಗೊಳಿಸಿದಾಗ ನಿಹಾರಿಕ ರಮೇಶ್ ಕುಮಾರ್ ಅವರ ಎರಡನೇ ಪತ್ನಿ ಎನ್ನುವುದು ಖಾತ್ರಿಯಾಗಿದೆ. ಆಸ್ತಿ ಮಾರಾಟದಿಂದ ಬಂದ 8ಕೋಟಿ ರೂ.ಗಳನ್ನು ಪಡೆಯುವ ಉದ್ದೇಶದಿಂದ ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್ ಮಾಡುವ ನೆಪದಲ್ಲಿ ಪತಿ ರಮೇಶ್ ಕುಮಾರ್ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ಇಬ್ಬರು ಸೇರಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿದ್ದಾರೆ. ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬರುವ ನಿಹಾರಿಕಾ ತನ್ನ ಮತ್ತೊಬ್ಬ ಸ್ನೇಹಿತ ನಿಖಿಲ್ ಬಳಿ ಕೊಲೆಯ ವಿಚಾರ ತಿಳಿಸುತ್ತಾಳೆ. ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿಯ ತೋಟಕ್ಕೆ ತಂದು ಬೆಂಕಿ ಹಚ್ಚಿ ಆರೋಪಿಗಳು ಕಾರಿನಲ್ಲಿ ಮರಳಿದ್ದಾರೆ. ಈ ಘಟನೆ ಇದೇ ಅ.3 ರಂದು ನಡೆದಿದೆ ಎಂದು ಎಸ್‌ಪಿ ಕೆ.ರಾಮರಾಜನ್ ವಿವರಿಸಿದರು. ಸತತ 10 ದಿನಗಳ ತನಿಖೆಯ ನಂತರ ಮೊದಲಿಗೆ ನಿಹಾರಿಕ ಹಾಗೂ ನಿಖಿಲ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಯಿತು. ನಂತರ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಅಂಕೂರ್ ರಾಣನನ್ನು ಹರಿದ್ವಾರದಲ್ಲಿ ಬಂಧಿಸಲಾಯಿತು ಎಂದು ತಿಳಿಸಿದರು. ಎಸ್‌ಪಿ ಕೆ.ರಾಮರಾಜನ್, ಹೆಚ್ಚುವರಿ ಎಸ್‌ಪಿ ಸುಂದರ್ ರಾಜ್.ಕೆ.ಎಸ್ ಹಾಗೂ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಗಂಗಾಧರಪ್ಪ ಆರ್.ಎ. ಅವರ ಮಾರ್ಗದರ್ಶನದಲ್ಲಿ 16 ಪೊಲೀಸ್ ಅಧಿಕಾರಿಗಳ ಒಟ್ಟು 4 ವಿಶೇಷ ತನಿಖಾ ತಂಡ ತನಿಖೆ ನಡೆಸಿ ಸವಾಲಿನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಪೊಲೀಸ್ ಅಧಿಕಾರಿಗಳ ಕಾರ್ಯದಕ್ಷತೆಯನ್ನು ಎಸ್‌ಪಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಎಸ್‌ಪಿ ಸುಂದರ್ ರಾಜ್.ಕೆ.ಎಸ್ ಶ್ಲಾಘಿಸಿದ್ದಾರೆ.

*ಆರೋಪಿಗಳನ್ನು ಪತ್ತೆ ಮಾಡಿದ ವಿಶೇಷ ತನಿಖಾ ತಂಡದ ವಿವರ* ಗಂಗಾಧರಪ್ಪ. ಆರ್.ವಿ, ಡಿಎಸ್‌ಪಿ, ಸೋಮವಾರಪೇಟೆ ಉಪ ವಿಭಾಗ, ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ, ಮುದ್ದು ಮಾದೇವ.ಎಂ, ಸೋಮವಾರಪೇಟೆ ಪೊಲೀಸ್ ಠಾಣೆ, ಚಂದ್ರಶೇಖರ್ ಹೆಚ್.ವಿ, ಪಿಎಸ್‌ಐ, ಸುಂಟಿಕೊಪ್ಪ ಠಾಣೆ, ಮೋಹನ್‌ರಾಜ್ ಪಿ, ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಠಾಣೆ, ಭಾರತಿ.ಕೆ.ಹೆಚ್, ಪಿಎಸ್‌ಐ, ಕುಶಾಲನಗರ ಗ್ರಾಮಾಂತರ ಠಾಣೆ, ತೀರ್ಥಕುಮಾರ್.ಎ.ಬಿ, ಎಎಸ್‌ಐ, ಸುಂಟಿಕೊಪ್ಪ ಠಾಣೆ, ಸುರೇಶ್.ಹೆಚ್.ಪಿ, ಎಎಸ್‌ಐ, ಸುಂಟಿಕೊಪ್ಪ ಠಾಣೆ, ವೆಂಕಟೇಶ್.ವಿ.ಜಿ. ಎಎಸ್‌ಐ, ಕುಶಾಲನಗರ ಗ್ರಾಮಾಂತರ ಠಾಣೆ, ಉದಯಕುಮಾರ್.ಜಿ.ಆರ್, ಹೆಚ್‌ಸಿ, ಶನಿವಾರಸಂತೆ ಠಾಣೆ, ಆಶಾ.ಎಸ್.ಡಿ, ಹೆಚ್‌ಸಿ, ಸುಂಟಿಕೊಪ್ಪ ಠಾಣೆ, ಸುದೀಶ್‌ ಕುಮಾರ್.ಕೆ.ಎಸ್, ಹೆಚ್‌ಸಿ, ಸೋಮವಾರಪೇಟೆ ಠಾಣೆ, ರಮೇಶ್.ಎನ್.ಆರ್, ಹೆಚ್‌ಸಿ, ಕುಶಾಲನಗರ ಸಂಚಾರಿ ಠಾಣೆ, ರಂಜಿತ್.ಜಿ.ಆರ್. ಪಿಸಿ, ಕುಶಾಲನಗರ ಪಟ್ಟಣ ಠಾಣೆ, ಬಾಬು.ಎಲ್, ಪಿಸಿ, ಕುಶಾಲನಗರ ಪಟ್ಟಣ ಠಾಣೆ, ಮಹೇಂದ್ರ.ಕೆ.ಎಸ್, ಹೆಚ್‌ಸಿ, ಸಿಪಿಐ, ವೃತ್ತ ಕಛೇರಿ ಕುಶಾಲನಗರ, ಸಂದೇಶ.ಎಸ್.ಎನ್, ಪಿಸಿ, ಸಿಪಿಐ, ವೃತ್ತ ಕಛೇರಿ ಕುಶಾಲನಗರ, ಜಗದೀಶ್.ಕೆ.ಆರ್, ಪಿಸಿ, ಸುಂಟಿಕೊಪ್ಪ ಠಾಣೆ, ಪ್ರವೀಣ.ಎಸ್, ಪಿಸಿ, ಸುಂಟಿಕೊಪ್ಪ ಠಾಣೆ, ನಿಶಾಂತ್.ಎಸ್.ಪಿ, ಪಿಸಿ, ಸುಂಟಿಕೊಪ್ಪ ಠಾಣೆ, ರಾಜೇಶ್.ಸಿ.ಕೆ, ಹೆಚ್‌ಸಿ, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ, ಪ್ರವೀಣ್.ಬಿ.ಕೆ, ಹೆಚ್‌ಸಿ, ಸಿಡಿಆರ್ ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌ಗೆ 18.97 ಲಕ್ಷ ರೂ. ನಿವ್ವಳ ಲಾಭ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದೊಡ್ಡಮಳ್ತೆ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಸೆ.15: ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನಕೆರೆ ಕ್ಷೇತ್ರದಲ್ಲಿ ಸ್ವರ್ಣಗೌರಿ ಉತ್ಸವದ ಅಂಗವಾಗಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವು…

*ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ: ಶಾಸಕ ಡಾ.ಮಂತರ್‌ಗೌಡ*

ಸೆಪ್ಟೆಂಬರ್ 16, 2026

*ದಕ್ಷಿಣ ವಲಯ ಹಾಕಿ ವಿಜೇತ ತಂಡಗಳಿಗೆ ಕೊಡಗು ವಿದ್ಯಾಲಯದಲ್ಲಿ ಅದ್ದೂರಿ ಸ್ವಾಗತ*

ಸೆಪ್ಟೆಂಬರ್ 16, 2026

*ಮೋದಿ ಅಭಿವೃದ್ಧಿ ಕಾರ್ಯಗಳ ಮೇಲೆ ಅಭಿಮಾನ: ಕೊಡಗಿನಲ್ಲಿ ಸೆ.17ರಿಂದ ಅ.17ರವರೆಗೆ ಬಿಜೆಪಿ ಸೇವಾ ಸಂಕಲ್ಪ ಅಭಿಯಾನ*

ಸೆಪ್ಟೆಂಬರ್ 16, 2026

*ಅ.17ರಂದು ತಲಕಾವೇರಿಯಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ*

ಸೆಪ್ಟೆಂಬರ್ 16, 2026

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.