Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಮಕ್ಕಡ ಕೂಟದ 99ನೇ ಪುಸ್ತಕ ಬಿಡುಗಡೆ : ಓದುಗರ ಮನಸ್ಸನ್ನು ಗ್ರಹಿಸುವ ಶಕ್ತಿ ಲೇಖಕರಿಗೆ ಇರಬೇಕು : ಮೇಜರ್ ಡಾ.ಬಿ.ರಾಘವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಮಕ್ಕಡ ಕೂಟದ 99ನೇ ಪುಸ್ತಕ ಬಿಡುಗಡೆ : ಓದುಗರ ಮನಸ್ಸನ್ನು ಗ್ರಹಿಸುವ ಶಕ್ತಿ ಲೇಖಕರಿಗೆ ಇರಬೇಕು : ಮೇಜರ್ ಡಾ.ಬಿ.ರಾಘವ*

ಅಕ್ಟೋಬರ್ 26, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.26 : ಲೇಖಕರಿಗೆ ತಾಳ್ಮೆ ಮುಖ್ಯ, ಓದುಗರ ಮನಸ್ಸನ್ನು ಗ್ರಹಿಸುವ ಶಕ್ತಿ ಇರಬೇಕು ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಡಾ.ಬಿ.ರಾಘವ ತಿಳಿಸಿದ್ದಾರೆ.
ನಗರದ ಪತ್ರಿಕಾಭವನದ ಸಭಾಂಗಣದಲ್ಲಿ ಕೊಡವ ಮಕ್ಕಡ ಕೂಟದ 99ನೇ ಪುಸ್ತಕ, ಲೇಖಕಿ ತೆನ್ನೀರ ಟೀನಾ ಚಂಗಪ್ಪ ರಚಿಸಿರುವ “ಮಣ್ಣ್ರ ಋಣ” ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಾಡು, ನುಡಿ, ಸಂಸ್ಕೃತಿಯನ್ನು ಯಾರೂ ಮರೆಯಬಾರದು. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ನಾವು ಅನುಸರಿಸುವ ಸಂಸ್ಕೃತಿ, ಆಚಾರ, ವಿಚಾರ, ಭಾಷೆ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಲೇಖಕರಿಗೆ ಸಾಮಾಜಿಕ ಬದ್ಧತೆ ಇರಬೇಕು. ಬರಹಗಳು ಸಮಾಜಕ್ಕೆ ಮಾರ್ಗದರ್ಶನ ನೀಡುವಂತಿರಬೇಕು ಎಂದರು. “ಮಣ್ಣ್ರ ಋಣ” ಕೃತಿಯು ಸಮಾಜಕ್ಕೆ ಬೇಕಾದ ಉತ್ತಮ ಸಂದೇಶವನ್ನು ಒಳಗೊಂಡಿದೆ. ತಾಯಿ ಮತ್ತು ತಾಯಿ ನಾಡು ಸ್ವರ್ಗಕ್ಕಿಂತ ಹೆಚ್ಚು, ನಾಡು ಬಿಟ್ಟು ಹೋದರೆ ಹೇಗೆಲ್ಲ ಕಷ್ಟಪಡಬೇಕು ಮತ್ತು ಅವಿಭಕ್ತ ಕುಟುಂಬ ಹೇಗೆ ವಿಭಕ್ತ ಕುಟುಂಬವಾಗುತ್ತದೆ ಎಂಬುದರ ಬಗ್ಗೆ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಉತ್ತಮವಾಗಿ ವಿವರಿಸಿದ್ದಾರೆ. ಭಾಷೆ ಮತ್ತು ಸಾಹಿತ್ಯ ಉಳಿಯಬೇಕಾದರೆ ಭಾಷೆಗೆ ಸಂಬAಧಿಸಿದ ಕೃತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕಟವಾಗಬೇಕು ಎಂದು ಡಾ.ಬಿ.ರಾಘವ ಹೇಳಿದರು. “ಮಣ್ಣ್ರ ಋಣ” ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲೆ ಡಾ.ಬೊಜ್ಜಂಗಡ ಅವನಿಜ ಸೋಮಯ್ಯ, ಪ್ರಸ್ತುತ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದಾಗಿ ಯುವ ಜನತೆಯಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ. ಸಾಹಿತ್ಯಾಸಕ್ತಿ ಬೆಳೆಸುವುದು ಅವಶ್ಯವಾಗಿದ್ದು, ಶಿಕ್ಷಕರು ಉತ್ತಮ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಬೇಕಿದೆ ಎಂದರು. ಮಕ್ಕಳ ಶೈಕ್ಷಣಿಕ ಜೀವನದಲ್ಲಿ ಹೆಚ್ಚು ಹೆಚ್ಚು ಪುಸ್ತಕ ಓದುವ ಅವಕಾಶವನ್ನು ನೀಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಹೊರ ಬರುತ್ತಾರೆ. ಪುಸ್ತಕವನ್ನು ಓದುವುದರಿಂದ ಭಾಷೆಯ ಮೇಲಿನ ಹಿಡಿತ ಸಾಧಿಸಬಹುದು ಮತ್ತು ಬರವಣಿಗೆಯ ಜ್ಞಾನವನ್ನು ಪಡೆದುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.
ಮೊಬೈಲ್‌ನಲ್ಲಿ ಕ್ಷಣಮಾತ್ರದಲ್ಲಿ ಲಭ್ಯವಾಗುವ ಮಾಹಿತಿಯಿಂದಾಗಿ ವಿದ್ಯಾರ್ಥಿಗಳಲ್ಲಿ ಚಿಂತನಾಶಕ್ತಿ, ಕ್ರೀಯಾಶಿಲತೆ ಕಡಿಮೆಯಾಗುತ್ತಿದೆ. ಮಕ್ಕಳು ಕುಟುಂಬದ ಸದಸ್ಯರೊಂದಿಗೆ ಬೆರೆಯಬೇಕು ಮತ್ತು ಸಮಾಜಸೇವೆಯಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಹೆಚ್ಚು ಜ್ಞಾನ ಲಭ್ಯವಾಗಲಿದೆ ಎಂದು ಸಲಹೆ ನೀಡಿದರು. ನಿವೃತ್ತ ಮುಖ್ಯೋಪಾಧ್ಯಾಯಿನಿ ತೆನ್ನೀರ ಡಾಟಿ ಗಣೇಶ್ ಮಾತನಾಡಿ, ಮನೆಯೇ ಮೊದಲ ಪಾಠ ಶಾಲೆ ಎಂಬಂತೆ ಪೋಷಕರು ಮಕ್ಕಳಿಗೆ ಪುಸ್ತಕ ಓದಲು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ಯಶಸ್ಸಿನ ಜೊತೆಗೆ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ತಮ್ಮ ಕೊಡುಗೆಯನ್ನು ನೀಡಬೇಕು. ಇದರಿಂದ ಸಮುದಾಯದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. “ಮಣ್ಣ್ರ ಋಣ” ಪುಸ್ತಕದ ಲೇಖಕಿ ತೆನ್ನೀರ ಟೀನಾ ಚಂಗಪ್ಪ ಮಾತನಾಡಿ, ಪುಸ್ತಕಗಳು ಪ್ರಕಟಗೊಳ್ಳಬೇಕಾದರೆ ದಾನಿಗಳ ಸಹಕಾರದ ಅಗತ್ಯವಿದೆ. ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರನ್ನು ಪ್ರೋತ್ಸಾಹಿಸುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಮತ್ತಷ್ಟು ಕೊಡಗೆ ನೀಡುವಂತಾಗಬೇಕು ಎಂದು ಕರೆ ನೀಡಿದರು. ಕೊಡವ ಸಾಹಿತ್ಯ ಭಂಡಾರಕ್ಕೆ ಇದು ನನ್ನ ಎರಡನೇ ಪುಸ್ತಕವಾಗಿದ್ದು, ನಾನು ಕೇಳಿದ ಮತ್ತು ನೋಡಿದ ಅಭಿಪ್ರಾಯ, ಅನುಭವ, ಕಷ್ಟ-ಸುಖಗಳನ್ನು ಆಧಾರವಾಗಿಟ್ಟುಕೊಂಡು ಕಥೆಯ ರೂಪವನ್ನು ನೀಡಿರುವುದಾಗಿ ತಿಳಿಸಿದರು. ಕೊಡವ ಮಕ್ಕಡ ಕೂಟ ನನ್ನ ಎರಡು ಪುಸ್ತಕಗಳನ್ನು ಬಿಡುಗಡೆಗೊಳಿಸಲು ಸಹಕರಿಸಿದ್ದು, ಹೊಸ ಬರಹಗಾರರನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಪುಸ್ತಕಗಳು ಹೊರಬರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಕೂಟದ ಮೂಲಕ ಕೊಡವ ಸಂಸ್ಕೃತಿಯ ಬಗ್ಗೆ ಯುವಜನತೆಯಲ್ಲಿ ನಿರಂತರವಾಗಿ ಜಾಗೃತಿ ಹಾಗೂ ಆಸಕ್ತಿಯನ್ನು ಮೂಡಿಸುತ್ತಾ ಬರಲಾಗುತ್ತಿದೆ. ಮಕ್ಕಳು ಸಂಸ್ಕೃತಿಯಿಂದ ದೂರವಾಗುತ್ತಿದ್ದಾರೆ ಎನ್ನುವ ಹಿರಿಯರ ಟೀಕೆಯನ್ನು ದೂರ ಮಾಡಿ ಹಿರಿಯರೇ ಅಚ್ಚರಿ ಪಡುವಂತಹ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು. ಕೊಡವ ಮಕ್ಕಡ ಕೂಟ ಹೊಸ ಬರಹಗಾರರಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ, ಪುಸ್ತಕಗಳನ್ನು ಪ್ರಕಟಿಸಿ ಉತ್ತೇಜನ ನೀಡಿದೆ. ಹಿರಿಯರ ಸ್ಮರಣೆ, ಜನ್ಮ ದಿನ ಆಚರಣೆ, ಪ್ರತಿಮೆಗಳ ಅನಾವರಣ ಸೇರಿದಂತೆ ಹಿರಿದಾದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಶಂಸೆಗೆ ಪಾತ್ರವಾಗಿದೆ. ಮಡಿಕೇರಿಯ ಹಲವು ರಸ್ತೆಗಳಿಗೆ ಕೊಂಗಂಡ ಗಣಪತಿ, ಹರಿದಾಸ ಅಪ್ಪನೆರವಂಡ ಅಪ್ಪಚ್ಚಕವಿ, ಕೊರವಂಡ ನಂಜಪ್ಪ, ಪಂದ್ಯಂಡ ಬೆಳ್ಯಪ್ಪ ಅವರ ಹೆಸರುಗಳನ್ನು ಮರು ನಾಮಕರಣ ಮಾಡಲಾಗಿದೆ. ಕೊಡವ ಸಾಧಕ ಯುವಕ-ಯುವತಿಯರನ್ನು ಸೇರಿದಂತೆ ಹಲವರನ್ನು ಸನ್ಮಾನಿಸಿ, ಗೌರವಿಸಿದೆ ಎಂದು ಹೇಳಿದರು. ಕೊಡವ ಮಕ್ಕಡ ಕೂಟದ ನಿರಂತರ ಪ್ರಯತ್ನದಿಂದ ಮಡಿಕೇರಿಯ “ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ” ವೃತ್ತದಲ್ಲಿ ಅಜ್ಜಮಾಡ ಕುಟುಂಬಸ್ಥರ ಸಹಕಾರದಿಂದ “ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ” ಅವರ ಕಂಚಿನ ಪ್ರತಿಮೆಯನ್ನು ನಿರ್ಮಿಸಲಾಗಿದೆ. ವೀರ ಯೋಧನ ನೆನಪನ್ನು ಚಿರಾಯುವಾಗಿಸಿರುವ ಹೆಗ್ಗಳಿಕೆ ಕೊಡವ ಮಕ್ಕಡ ಕೂಟಕ್ಕಿದೆ. ಹಲವು ದಾಖಲೀಕರಣ ಪುಸ್ತಕ, ಸಾಧಕರ ವಿವರದ ಪುಸ್ತಕ, ಕೊಡಗಿನ ಹಾಗೂ ಕೊಡವ ಆಚಾರ, ವಿಚಾರ ಸಂಬಂಧಪಟ್ಟಂತ ಪುಸ್ತಕ, ಕೊಡಗಿನ ಎರಡು ಮಹಾವೀರ ಚಕ್ರ ಪುರಸ್ಕೃತ ವೀರ ಯೋಧರ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೊಡವ ಮಕ್ಕಡ ಕೂಟ ಇಲ್ಲಿಯವರೆಗೆ 99 ಪುಸ್ತಕವನ್ನು ಲೋಕಾರ್ಪಣೆಗೊಳಿಸಿದೆ. ನವೆಂಬರ್ 24 ರಂದು ದಾಖಲೆಯ 100ನೇ ಪುಸ್ತಕ ಪುತ್ತರಿರ ಕರುಣ್ ಕಾಳಯ್ಯ ಅವರ ಸಂಪಾದಕತ್ವದ “ನೂರನೆ ಮೊಟ್ಟ್” ಸೇರಿದಂತೆ ಲೇಖಕರಾದ ಐಚಂಡ ರಶ್ನಿ ಮೇದಪ್ಪ, ಕರವಂಡ ಸೀಮಾ ಗಣಪತಿ, ತೆನ್ನೀರ ಟೀನಾ ಚಂಗಪ್ಪ, ಯಶೋಧ ಪೇರಿಯಂಡ ಅವರು ರಚಿಸಿರುವ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹೇಳಿದರು. ಬೊಟ್ಟೊಳಂಡ ನಿವ್ಯ ದೇವಯ್ಯ ಪ್ರಾರ್ಥಿಸಿ, ಐಚಂಡ ರಶ್ಮಿ ಮೇದಪ್ಪ ನಿರೂಪಿಸಿ, ಉಡುವೆರ ರೇಖಾ ರಘು ಸ್ವಾಗತಿಸಿದರು, ಕುಳುವಂಡ ಶೃತಿ ಪೂಣಚ್ಚ ವಂದಿಸಿದರು. ಪೆಬ್ಬಟ್ಟಿರ ಶೀತಲ್ ಕಾರ್ಯಪ್ಪ ಅವರು ಲೇಖಕಿ ಟೀನಾ ಚಂಗಪ್ಪ ಅವರನ್ನು ಪರಿಚಯಿಸಿದರು, ಪೇರಿಯಂಡ ಯಶೋಧ ಪುಸ್ತಕ ಪರಿಚಯ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಭಾಗಮಂಡಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಕಟ್ಟಡದ…

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.