Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಮ್ಮನಕೊಲ್ಲಿ ಶಾಲಾ ಮಕ್ಕಳಿಂದ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಜಾಥಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಮ್ಮನಕೊಲ್ಲಿ ಶಾಲಾ ಮಕ್ಕಳಿಂದ ಹಸಿರು ದೀಪಾವಳಿ ಆಚರಣೆ ಕುರಿತು ಜಾಗೃತಿ ಜಾಥಾ*

ಅಕ್ಟೋಬರ್ 30, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಅ.30 NEWS DESK : ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ’, ನಮ್ಮ ನಡೆ ಹಸಿರೆಡೆಗೆ ಗೋ ಗ್ರೀನ್ ಅಭಿಯಾನದಡಿ
ಕುಶಾಲನಗರ ತಾಲ್ಲೂಕಿನ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ “ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ” ಕುರಿತು ಜಾಗೃತಿ ಜಾಥಾ ನಡೆಯಿತು. ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಶಾಲೆಯ ಇಕೋ ಕ್ಲಬ್ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಗುಮ್ಮನಕೊಲ್ಲಿ ಗ್ರಾಮದಲ್ಲಿ ಜಾಥಾ ನಡೆಸಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದರಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಿದರು. ದೀಪಾವಳಿ ಹಬ್ಬದಲ್ಲಿ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವ ಮೂಲಕ ಹಸಿರು ದೀಪಾವಳಿ ಆಚರಿಸಬೇಕು ಎಂದು ಮನವಿ ಮಾಡಿದರು. ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ,ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಸಾಕುಪ್ರಾಣಿಗಳನ್ನು ರಕ್ಷಿಸಲು ಪಟಾಕಿಗಳನ್ನು ತಪ್ಪಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ಎಂಬ ಬಗ್ಗೆ ವಿದ್ಯಾರ್ಥಿ ಸಮುದಾಯದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕಣ್ಣಿಗೆ ಮುದ ನೀಡಿ ಅಂಧತ್ವಕ್ಕೆ ಕಾರಣವಾಗುವ ಪಟಾಕಿ ಸಿಡಿತದಿಂದ ಉಂಟಾಗುವ ವಾಯು ಮಾಲಿನ್ಯವು ನಮ್ಮ ಆರೋಗ್ಯ ಹಾಗೂ ಪರಿಸರವನ್ನು ಕೆಡಿಸುವ ರಾಸಾಯನಿಕಗಳ ವಿಷಗುಳಿಗೆಗಳಾಗಿವೆ ಎಂದರು. ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಪಟಾಕಿ ಸಿಡಿತವು ನಮ್ಮ ಆರೋಗ್ಯ ಹಾಗೂ ಪರಿಸರಕ್ಕೆ ಹಾನಿಯುಂಟು ಮಾಡುತ್ತವೆ. ಈ ದಿಸೆಯಲ್ಲಿ ನಾವು ಸ್ವಚ್ಛ ಹಾಗೂ ಸ್ವಸ್ಥ ಪರಿಸರಕ್ಕಾಗಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಯಬೇಕು ಎಂದರು. ಪಟಾಕಿ ಸಿಡತವು ನೆಲ, ಜಲ, ಗಾಳಿಯನ್ನು ವಿಕಾರಗೊಳಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತವೆ ಎಂದರು. ಹಸಿರು ದೀಪಾವಳಿ ಆಚರಣಾ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಹೆಚ್.ಸಾಕಮ್ಮ , ವಿದ್ಯಾರ್ಥಿಗಳು ಪಟಾಕಿ ತ್ಯಜಿಸಿ ಹಣತೆ ಬೆಳಗಿಸಿ ಹಸಿರು ದೀಪಾವಳಿ ಆಚರಿಸಬೇಕು ಎಂದರು. ಸ್ವಚ್ಛ ಹಾಗೂ ಸ್ವಸ್ಥ ದೀಪಾವಳಿ ಆಚರಣೆ ಕುರಿತ ಪ್ರತಿಜ್ಞಾ ವಿಧಿಯನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಹೆಚ್.ಎಸ್.ಉಮಾದೇವಿ ಬೋಧಿಸಿದರು. ಸಿ ಆರ್ ಪಿ ಟಿ.ಈ.ವಿಶ್ವನಾಥ್ ,ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಬಿಡುಗಡೆಗೊಳಿಸಿದರು. ಶಾಲಾ ವಿದ್ಯಾರ್ಥಿನಿ ಅಸ್ಮಿಯ ಅನಿಸಿಕೆ ವ್ಯಕ್ತಪಡಿಸಿ, ತಾನು ಜನರಲ್ಲಿ ಹಸಿರು ದೀಪಾವಳಿ ಆಚರಿಸುವ ಮೂಲಕ ಪಟಾಕಿ ತ್ಯಜಿಸುವ ಬಗ್ಗೆ ಜಾಗೃತಿ ಮೂಡಿಸುತ್ತೇನೆ ಎಂದರು. ಜಿಲ್ಲಾ ಗೈಡ್ಸ್ ವಿಭಾಗದ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಕೌಟ್ಸ್, ಗೈಡ್ಸ್ ನ‌ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ವಿ. ಅರುಣ್, ಕೆ.ಆರ್.ರೋಹಿಣಿ, ಎ.ಸಿ. ಶಾಂತಿ, ಕಾರ್ಯದರ್ಶಿ ಎಂ.ಎಸ್.ಗಣೇಶ್, ಸಹ ಕಾರ್ಯದರ್ಶಿ ಎಸ್.ಆರ್.ಶಿವಲಿಂಗ, ಸದಸ್ಯ ಎಂ.ಎಸ್.ಕುಮಾರ್, ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್, ಕಾರ್ಯದರ್ಶಿ ನಿತಿನ್, ಖಜಾಂಚಿ ಕಿರಣ್, ಕ್ಲಬ್ ನ ಮಾಜಿ ಅಧ್ಯಕ್ಷ ಕೊಡಗನ ಹರ್ಷ, ಸದಸ್ಯ ಸತೀಶ್, ಸಮಿತಿ ಸದಸ್ಯರು,ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು. ಜಾಥಾದಲ್ಲಿ ವಿದ್ಯಾರ್ಥಿಗಳು ಹಸಿರು ದೀಪಾವಳಿ ಆಚರಣೆ ಕುರಿತ ಭಿತ್ತಿಫಲಕಗಳನ್ನು ಹಿಡಿದು ವಿವಿಧ ಘೋಷಣೆಗಳನ್ನು ಪ್ರಚುರಪಡಿಸಿದರು. ವಿದ್ಯಾರ್ಥಿಗಳು ಹಣತೆ ಬೆಳಗಿಸಿ ದೀಪಾವಳಿ ಆಚರಿಸಿ, ಪಟಾಕಿ ತ್ಯಜಿಸಿ ಮಾಲಿನ್ಯ ತಡೆಯಿರಿ, ‌ನಮ್ಮ ನಡೆ ಹಸಿರೆಡೆಗೆ ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ಮೂಲಕ ನಾಗರಿಕರ ಗಮನ ಸೆಳೆದರು.

  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.18 : ಭಾಗಮಂಡಲದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್ ನ ಕಟ್ಟಡದ…

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.