Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ : ಪಠ್ಯಪುಸ್ತಕದಲ್ಲಿ ಅಪ್ಪಯ್ಯ ಗೌಡರ ವಿಚಾರಧಾರೆ ಮರು ಸೇರ್ಪಡೆಗೆ ಕ್ರಮ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆ : ಪಠ್ಯಪುಸ್ತಕದಲ್ಲಿ ಅಪ್ಪಯ್ಯ ಗೌಡರ ವಿಚಾರಧಾರೆ ಮರು ಸೇರ್ಪಡೆಗೆ ಕ್ರಮ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಅಕ್ಟೋಬರ್ 31, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.31 : ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಕುರಿತು ಮತ್ತು ಅಮರ ಸುಳ್ಯ ದಂಗೆಯ ಹೋರಾಟಗಾರರ ವಿಷಯವನ್ನು ಪಠ್ಯಪುಸ್ತಕದಲ್ಲಿ ಮರು ಸೇರ್ಪಡೆ ಮಾಡುವ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೋಟೆ ಆವರಣದಲ್ಲಿ ಗುರುವಾರ ಏರ್ಪಡಿಲಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. 1837 ರಲ್ಲಿ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರೊಡನೆ ಹೊರಾಡಿ ಗಲ್ಲಿಗೇರಿಸಲ್ಪಟ್ಟ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರು ಹಾಗೂ ಅಮರ ಸುಳ್ಯ ದಂಗೆ ಬಗ್ಗೆ ಈ ಹಿಂದೆ 2012 ರಿಂದ 2019 ರ ವರೆಗೆ 6 ನೇ ತರಗತಿ ರಾಜ್ಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಉಲ್ಲೇಖವಾಗಿತ್ತು ಎಂಬ ಬಗ್ಗೆ ಕೊಡಗು ಗೌಡ ಯುವ ವೇದಿಕೆ ಗಮನ ಸೆಳೆದಿದ್ದು, ಈ ಸಂಬಂಧ ಸರ್ಕರದ ಗಮನ ಸೆಳೆಯಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರö್ಯಕ್ಕಾಗಿ ಹೋರಾಟ ಮಾಡಿದ್ದು, ಇತಿಹಾಸವನ್ನು ಯಾರೂ ಸಹ ತಿರುಚಲು ಸಾಧ್ಯವಿಲ್ಲ ಎಂದರು. ಜಾತಿ, ಧರ್ಮವನ್ನು ಮೀರಿ ದೇಶಕ್ಕಾಗಿ ಪಣತೊಟ್ಟ ವೀರ ಯೋಧರನ್ನು ಸದಾ ಸ್ಮರಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಇತಿಹಾಸದ ಪುಟದಲ್ಲಿ ಇರಬೇಕು. ಆ ನಿಟ್ಟಿನಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಚರಿತ್ರೆ ಉಳಿಸಲು ಕೈಜೋಡಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮಾತನಾಡಿ ಸ್ವಾತಂತ್ರö್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡ ಅವರನ್ನು ಗಲ್ಲಿಗೇರಿಸಿದ ಸ್ಥಳವು ಕೋಟೆ ಆವರಣದಲ್ಲಿದ್ದು, ಈ ಜಾಗವು ಕೇಂದ್ರ ಪುರಾತತ್ವ ಇಲಾಖೆ ವ್ಯಾಪ್ತಿಗೆ ಬರಲಿದೆ. ಆದ್ದರಿಂದ 15*15 ಅಳತೆಯಲ್ಲಿ ಇಂಟರ್‌ಲಾಕ್ ಅಳವಡಿಸಿ ಅಭಿವೃದ್ಧಿಪಡಿಸಲು ಮುಂದಾಗಬೇಕಿದೆ ಎಂದು ಕೋರಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದ ಬಳಿ ಇರುವ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯೂ ಇಂಟರ್‌ಲಾಕ್ ಅಳವಡಿಸಿ, ಅಭಿವೃದ್ಧಿಮಾಡಿ ಪ್ರವಾಸಿಗರ ವೀಕ್ಷಣೆಗೆ ಅವಕಾಶ ಮಾಡಬೇಕಿದೆ ಎಂದರು. ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ.ದಿನೇಶ್ ಅವರು ಮಾತನಾಡಿ ಗುಡ್ಡೆಮನೆ ಅಪ್ಪಯ್ಯ ಗೌಡರು ರಾಷ್ಟçದಲ್ಲಿ ಸ್ವಾತಂತ್ರ್ಯ ದಂಗೆಗೂ ಮೊದಲೇ ಸ್ವಾತಂತ್ರö್ಯಕ್ಕಾಗಿ ಹೋರಾಡಿದ್ದು, ಇವರ ಹೆಸರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ‘ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಜಾತಿಯಿಂದ ಗುರ್ತಿಸಬಾರದು. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರಲ್ಲಿಯೇ ಹೆಚ್ಚಿನ ಜಾತಿಯತೆ ಕಂಡುಬರುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಕಾಫಿ ಮಂಡಳಿ ವತಿಯಿಂದ ಹಲವು ರೀತಿಯ ಸಹಾಯ, ಸಹಕಾರ ಕಲ್ಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ನಿಡ್ಯಮಲೆ ಡಾ.ಎ.ಜ್ಞಾನೇಶ್ ಅವರು ಮಾತನಾಡಿ 1837 ರಲ್ಲಿ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡ ಅವರು ಹಾಗೂ ಅಮರ ಸುಳ್ಯ ಕ್ರಾಂತಿಗೆ ಇತಿಹಾಸವಿದೆ ಎಂದರು.
ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಭಾರತದಲ್ಲಿ ಸ್ವಾತಂತ್ರö್ಯದ ಕಿಚ್ಚು ಹಚ್ಚಿರುವುದನ್ನು ಯಾರು ಸಹ ಮರೆಯಬಾರದು ಎಂದು ಹೇಳಿದರು. ಶಾಸಕದ್ವಯರಿಂದ ಪುಷ್ಪ ನಮನ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸ್ವಾತಂತ್ರö್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣಾ ದಿನಾಚರಣೆಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ಗುರುವಾರ ನಡೆಯಿತು. ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ.ದಿನೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಡಿವೈಎಸ್‌ಪಿ ಮಹೇಶ್ ಕುಮಾರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ನಿಕಟಪೂರ್ವ ಅಧ್ಯಕ್ಷರಾದ ಲಕ್ಷಿö್ಮÃನಾರಾಯಣ ಕಜೆಗದ್ದೆ, ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಮಡಿಕೇರಿ ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕೊಡಗು ಗೌಡ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್, ಭಾರತೀಯ ಕಾಫಿ ಮಂಡಳಿ ಸದಸ್ಯರಾದ ತಳೂರು ಕಿಶೋರ್ ಕುಮಾರ್, ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಗವಿನ್, ವಿವಿಧ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿಪ್ರಸಾದ್(ಕುಶಾಲನಗರ), ಯಂಕನ ಉಲ್ಲಾಸ(ಸುಂಟಿಕೊಪ್ಪ), ಅಯ್ಯಂಡ್ರ ರಾಘವಯ್ಯ(ಚೆಟ್ಟಳ್ಳಿ), ಮುಕ್ಕಾಟಿ ಗಣಪತಿ(ವಿರಾಜಪೇಟೆ), ಮುಕ್ಕಾಟಿ ಕುಶಾಲಪ್ಪ (ಪಾರಾಣೆ), ಪಾಣತ್ತಲೆ ಹರೀಶ್, (ಮೂರ್ನಾಡು), ಕೊಡಪಾಲು ಗಣಪತಿ(ಚೇರಂಬಾಣೆ), ಕುದುಪಜೆ ಪಳಂಗಪ್ಪ(ಭಾಗಮಂಡಲ), ಕಟ್ಟೆಮನೆ ಜನಾರ್ದನ (ಮರಗೋಡು), ತೂಟೇರ ವೆಂಕಟರಮಣ(ಮಕ್ಕಂದೂರು), ಗುಡ್ಡೆಮನೆ ವಿಶುಕುಮಾರ್(ಗುಡ್ಡೆಹೊಸೂರು), ಗೌಡ ಮಹಿಳಾ ಒಕ್ಕೂಟದ ಅಮೆ ದಮಯಂತಿ, ಕೊಡಗು ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ, ವಕೀಲರಾದ ಕೊಟ್ಟಕೇರಿಯನ ದಯಾನಂದ, ಕುಡೆಕಲ್ಲು ವಿದ್ಯಾಧರ, ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ, ನಿವೃತ್ತ ನೌಕರರ ಸಂಘದ ಕೋರನ ವಿಶ್ವನಾಥ, ಮಾಜಿ ಸೈನಿಕರ ಸಂಘದ ತುಂತಜೆ ದಯಾನಂದ, ಕುಶಾಲನಗರ ಗೌಡ ಯುವ ವೇದಿಕೆಯ ಕೊಡಗನ ಹರ್ಷ, ಹಿರಿಯರಾದ ದಂಬೆಕೋಡಿ ಆನಂದ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಪಿ.ಎಂ.ಸಂದೀಪ, ವಿನೋದ್ ಮೂಡಗದ್ದೆ, ಚಂದ್ರಶೇಖರ ಪೆರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾಪ್ರಸಾದ್ ಕುದ್ಪಾಜೆ, ನಿಡ್ಯಮಲೆ ಡಾ.ಜ್ಞಾನೇಶ್, ಲೋಕೇಶ್ ಊರುಬೈಲು, ಕುದುಪಜೆ ಕೆ.ಪ್ರಕಾಶ, ಪೊನ್ನಚ್ಚನ ಮೋಹನ್, ಕೊಡಗು ಯುವ ವೇದಿಕೆಯ ಸದಸ್ಯರು ಮುಖಂಡರು ಇತರರು ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು. ಭಾರತ್ ಸೇವಾದಳದ ರೇವತಿ ರಮೇಶ್, ಕಡ್ಲೇರ ತುಳಸಿ ಮೋಹನ್ ಹಾಗೂ ಚೊಕ್ಕಾಡಿ ಪೇಮ ರಾಘವಯ್ಯ ಅವರು ಗುಡ್ಡೆಮನೆ ಅಪ್ಪಯ್ಯಗೌಡರ ಕುರಿತು ‘ನಮನ ಗೀತೆ’ ಹಾಗೂ ರಾಷ್ಟ್ರಗೀತೆ ಹಾಡಿದರು. ಲಿಟ್ಲ್ ಪ್ಲವರ್ ಶಾಲೆಯ ಮುಖ್ಯಸ್ಥರಾದ ಸುನಿತಾ ಪ್ರೀತು ಮತ್ತು ವಿದ್ಯಾರ್ಥಿಗಳು ಆಶಯ ಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.