Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಓಣಂ ಸಂಭ್ರಮ : ಸಾಧಕರಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಓಣಂ ಸಂಭ್ರಮ : ಸಾಧಕರಿಗೆ ಸನ್ಮಾನ*

ನವೆಂಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.2 NEWS DESK : ಮಲಯಾಳಿಗರ ಸಂಸ್ಕೃತಿ, ಸಂಪ್ರದಾಯದ ಅನಾವರಣದೊಂದಿಗೆ ಮಡಿಕೇರಿಯಲ್ಲಿ ಓಣಾಘೋಷಂ ಹಾಗೂ ಓಣಂ ಸಧ್ಯ ಕಾರ್ಯಕ್ರಮ ನಡೆಯಿತು. ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಹಿಂದೂ ಮಲಯಾಳಿ ಸಮಾಜ ಮಡಿಕೇರಿ ಘಟಕದ ವತಿಯಿಂದ ಓಣಂ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಲಯಾಳಿಗರು ಒಂದಾಗಿ ಸಂಭ್ರಮಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯಗಳು, ಹಾಡು ಸೇರಿದಂತೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮಕ್ಕೆ ಮೆರುಗು ನೀಡಿದವು. ಇದರೊಂದಿಗೆ ಹಬ್ಬದ ಸಧ್ಯ (ಭೋಜನ) ಸವಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಓಣಂ ಅದ್ಭುತ ಐತಿಹ್ಯ, ಸಂಪ್ರದಾಯ ಹೊಂದಿರುವ ಹಬ್ಬವಾಗಿದೆ. ಸಾರ್ವಜನಿಕವಾಗಿ ಹಬ್ಬ ಆಚರಣೆ ಮೂಲಕ ಜನಾಂಗವನ್ನು ಒಗ್ಗಟ್ಟಿಸುವ ಕೆಲಸವಾಗುತ್ತಿದೆ. ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ರೀತಿಯ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಎಲ್ಲಿದ್ದರೂ ಸಂಸ್ಕೃತಿ, ಸಂಪ್ರದಾಯ ಮರೆಯಬಾರದು ಎಂದು ಕರೆ ನೀಡಿದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದೂ ಸಮಾಜದಲ್ಲಿ ವಿವಿಧ ಆಚಾರ, ವಿಚಾರ, ಪದ್ಧತಿಗಳಿವೆ. ಆದರೆ ವಿವಿಧತೆಯಲ್ಲಿ ಏಕತೆಯನ್ನು ಕಾಣುತ್ತೇವೆ. ನಾವೆಲ್ಲ ಬಂಧು-ನಾವೆಲ್ಲ ಹಿಂದೂ ಎಂಬ ಭಾವನೆ ನಮ್ಮಲ್ಲಿ ಮೂಡಬೇಕು. ಮಲಯಾಳಿ ಸಂಘ ಸಂಘಟನಾತ್ಮಕವಾಗಿ ಸಂಸ್ಕೃತಿ,ಉಳಿಸುವ ಕೆಲಸ ಮಾಡುತ್ತಿದೆ. ಗ್ರಾಮ ಮಟ್ಟದಲ್ಲಿ ಸಂಘ ಬೆಳೆಯಬೇಕು. ಹಿಂದೂ ಸಮಾಜ ಗಟ್ಟಿಯಾಗಬೇಕಾದರೆ ಜನಾಂಗಗಳು ಸಂಘಟಿತಗೊಳ್ಳಬೇಕು. ಓಣಂಘೋಷಂ ಮೂಲಕ ಬೇಧ-ಭಾವವಿಲ್ಲದೆ ಒಂದಾಗಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಲಕಸಬು, ಕರಕುಶಲ, ನಾವು ಮಾಡುತ್ತಿರುವ ಕೆಲಸವನ್ನು ಮಕ್ಕಳಿಗೆ ಕಲಿಸಬೇಕು, ಇದರಿಂದ ಮಕ್ಕಳಲ್ಲಿ ಸ್ವಾಭಿಮಾನ ಮೂಡಿ ಧೈರ್ಯದಿಂದ ಸಮಾಜದಲ್ಲಿ ಬದುಕುತ್ತಾರೆ. ಸಮಾಜ ಕ್ಲಿಷ್ಟಕರ ಪರಿಸ್ಥತಿಯಲ್ಲಿದೆ. ಈ ಹಿನ್ನೆಲೆ ಮಕ್ಕಳ ಮೇಲೆ ನಿಗಾವಹಿಸಬೇಕು. ತಪ್ಪುದಾರಿ ಹಿಡಿಯದಂತೆ ಎಚ್ಚರವಹಿಸಬೇಕು. ನೈತಿಕ ಶಿಕ್ಷಣ ನೀಡಬೇಕು ಎಂದು ಕರೆ ನೀಡಿದರು. ನಗರಸಭಾ ಮಾಜಿ ಸದಸ್ಯ ಕೆ.ಎಂ.ಗಣೇಶ್ ಮಾತನಾಡಿ, ರಾಜಕೀಯ ಮಧ್ಯ ಪ್ರವೇಶದಿಂದ ಸಂಘಟನೆಗಳು ಹಾಳಾದ ಉದಾಹರಣೆಗಳಿವೆ. ಆದರೆ ಮಲಯಾಳಿ ಸಂಘ ವ್ಯವಸ್ಥಿತ ಹಾಗೂ ಉತ್ತಮ ಗುರಿಯೊಂದಿಗೆ ಸಾಗುತ್ತಿದೆ. ಮಲಯಾಳಿಗರು ಸ್ಥಳೀಯ ನಾಡು-ನುಡಿಯನ್ನು ಗೌರವಿಸುತ್ತಿರುವುದು ಪ್ರಶಂಸನೀಯ ಎಂದರು. ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಆರ್.ವಾಸುದೇವ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎನ್.ಆರ್.ಸ್ನೇಹಾ, ಕೆ.ಎ.ಅಪೇಕ್ಷಾ, ಕೆ.ಎಸ್.ಬಿನೀಶ್, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಎನ್.ಆರ್.ಸ್ನೇಹಾ, ಕೆ.ಎ.ಅಪೇಕ್ಷಾ, ಕೆ.ಎಸ್.ಬಿನೀಶ್, ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ದೀಕ್ಷಾ, ಎ.ಎಸ್.ಸಂಚಿಂತ್ ಅವರುಗಳನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೆಂದ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಡಿ.ಹೆಚ್.ಗಣೇಶ್, ಹಿಂದೂ ಮಲಯಾಳಿ ಸಮಾಜ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್, ಪ್ರಧಾನ ಕಾರ್ಯದರ್ಶಿ ಎಂ.ಎಸ್.ದಿನೇಶ್ ನಾಯರ್, ಖಜಾಂಚಿ ಎಂ.ಪಿ.ರವಿ, ನಾಪೋಕ್ಲು ಘಟಕ ಅಧ್ಯಕ್ಷ ಕೆ.ಕೆ.ಅನಿಲ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜನ್, ಯುವ ಘಟಕ ಅಧ್ಯಕ್ಷ ಆರ್.ಅರವಿಂದ್ ಸೇರಿದಂತೆ ವಿವಿಧ ಮಲಯಾಳಿ ಸಂಘಗಳ ಅಧ್ಯಕ್ಷರು ಹಾಜರಿದ್ದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಕನ್ನಡ ಧ್ವಜವನ್ನು ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ನಿವೃತ್ತ ಪೊಲೀಸ್ ಅಧಿಕಾರಿ, ರಾಷ್ಟ್ರಪತಿ ಪದಕ ಪುರಸ್ಕøತ ಎಂ.ಅಚ್ಚುತ್ತ ನಾಯರ್ ರಾಷ್ಟ್ರ ಧ್ವಜಾರೋಹಣ ಮಾಡಿದರು.
ತಿರುವದರ ನೃತ್ಯದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ದೀಪ್ತಿ ಧರ್ಮೆಂದ್ರ ಪ್ರಾರ್ಥಿಸಿದರು. ಟಿ.ಕೆ.ಸದೀರ್ ಸ್ವಾಗತಿಸಿದರು, ಅನು ಅನೀಶ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.