Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ 145ನೇ ವಾಷಿ೯ಕ ಮಹಾಸಭೆ : ಕಾಫಿ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಹೋಬಳಿವಾರು ಸಮುದಾಯ ಗುಂಪುಗಳ ಪ್ರಾರಂಭ : ಡಾ.ಕೆ.ಜಿ.ಜಗದೀಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ 145ನೇ ವಾಷಿ೯ಕ ಮಹಾಸಭೆ : ಕಾಫಿ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಹೋಬಳಿವಾರು ಸಮುದಾಯ ಗುಂಪುಗಳ ಪ್ರಾರಂಭ : ಡಾ.ಕೆ.ಜಿ.ಜಗದೀಶ್*

ನವೆಂಬರ್ 4, 20244 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.4 NEWS DESK : ಹೋಬಳಿ ಮಟ್ಟದಲ್ಲಿ ಸಮುದಾಯ ಕೖಷಿಕ ಗುಂಪುಗಳನ್ನು ಪ್ರಾರಂಭಿಸುವ ಮೂಲಕ ಆಯಾ ವಲಯಗಳಲ್ಲಿರುವ ಕಾಫಿ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದು ಗುಣಮಟ್ಟ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ವಿನೂತನ ಯೋಜನೆ ಭಾರತೀಯ ಕಾಫಿ ಮಂಡಳಿ ಮುಂದಿದೆ ಎಂದು ಮಂಡಳಿಯ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಮತ್ತು ಕಾಯ೯ದಶಿ೯ ಡಾ.ಕೆ.ಜಿ.ಜಗದೀಶ್ ಹೇಳಿದರು.  ನಗರದ ಕ್ರಿಸ್ಟಲ್ ಕೋಟ್೯ ಸಭಾಂಗಣದಲ್ಲಿ ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ನ 145 ನೇ ವಾಷಿ೯ಕ ಮಹಾಸಭೆಗೆ ಉದ್ಘಾಟಿಸಿ ಮಾತನಾಡಿದ ಜಗದೀಶ್, ಕಾಫಿ ಬೆಳೆಯ ಗುಣಮಟ್ಟಕ್ಕೆ ಆದ್ಯತೆ ನೀಡಿದಾಗ ಭಾರತೀಯ ಕಾಫಿ ಬೆಳೆಗೆ ಎಂದಿಗೂ ಹಿನ್ನಡೆಯಾಗಲಾರದು, ಈ ನಿಟ್ಟಿನಲ್ಲಿ ಕಾಫಿ ಬೆಳೆಯ ಗುಣಮಟ್ಟ ಕಾಪಾಡುವ ದೖಷ್ಟಿಯಿಂದ ಪ್ರತೀ ಹೋಬಳಿಯಲ್ಲಿಯೂ 100 ಕೖಷಿಕರನ್ನೊಳಗೊಂಡ ಸಮುದಾಯ ಗುಂಪನ್ನು ಪ್ರಾರಂಭಿಸಿ, ಅವರು ಬೆಳೆದ ಕಾಫಿಯನ್ನು ಸಂಗ್ರಹಿಸಿ ಅದರ ಗುಣಮಟ್ಟದ ಬಗ್ಗೆ ( ಕಾಫಿ ಕಪ್ಪಿಂಗ್ ಸ್ಕೋರ್ ) ಪ್ರಯೋಗಾಲಯದಿಂದ ಮಾಹಿತಿ ಪಡೆಯಲಾಗುತ್ತದೆ, ಗುಣಮಟ್ಟ ಹೆಚ್ಚಳವಾಗಬೇಕೆಂದಾದಲ್ಲಿ ಯಾವ ರೀತಿ ಗುಣಮಟ್ಟ ಹೆಚ್ಚಳ ಮಾಡಬಹುದು ಎಂಬ ಬಗ್ಗೆಯೂ ಕಾಫಿ ಮಂಡಳಿಯಿಂದ ಸೂಕ್ತ ಮಾಹಿತಿಯನ್ನು ತಜ್ಞರು ಕೖಷಿಕರಿಗೆ ನೀಡಲಿದ್ದಾರೆ, ಈ ಯೋಜನೆಯಿಂದ ಪ್ರತೀ ಗ್ರಾಮದ ಕಾಫಿ ಕೖಷಿಕರಿಗೆ ಕಾಫಿಯ ಗುಣಮಟ್ಟ ಹೆಚ್ಚಳ ಕಾಪಾಡಿಕೊಳ್ಳಲು ಸಾಧ್ಯವಾಗಿ ಉತ್ತಮ ಬೆಲೆಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪಡೆಯಲು ಸಾಧ್ಯವಾಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.  ಭಾರತೀಯ ಕಾಫಿ ಮಂಡಳಿಯಿಂದ ಶೀಘ್ರದಲ್ಲಿಯೇ 2 ವಷ೯ಗಳ ಡಿಪ್ಲೋಮ ಪದವಿಯನ್ನು ನೀಡಲಾಗುತ್ತದೆ ಇದರಿಂದಾಗಿ ಯುವಪೀಳಿಗೆಯು ಕಾಫಿ ಕೖಷಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದ ಡಾ ಜಗದೀಶ್, ತೋಟ ನಿವ೯ಹಣೆಗೆ ಸೂಕ್ತ ತರಬೇತಿ ಹೊಂದಿದವರ ಕೊರತೆಯನ್ನು ಗಮನಿಿಸ ಕಾಫಿ ಮಂಡಳಿಯು ತೋಟಗಳ ಸೂಪರ್ ವೈಸರ್ ಗಳು ಮತ್ತು ವ್ಯವಸ್ಥಾಪಕರಾಗಿ ತರಬೇತಿ ನೀಡುವ ಯೋಜನೆ ಪ್ರಾರಂಭಿಸಲಿದೆ, 10 ನೇ ತರಗತಿ ಉತ್ತೀಣ೯ರಾದವರು ಈ ತರಬೇತಿಯನ್ನು ಪಡೆಯುವ ಮೂಲಕ ಕಾಫಿ ತೋಟಗಳಲ್ಲಿ ಉದ್ಯೋಗ ಪಡೆಯಲು ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.  ಅಂತೆಯೇ ಹೆಚ್ಚುತ್ತಿರುವ ಕಾಫಿ ಕೆಫೆಗಳಿಗೆ ಸೂಕ್ತ ಸಿಬ್ಬಂದಿ ಅಗತ್ಯತೆಯನ್ನು ಮನಗಂಡು ಮಹಿಳೆಯರು, ಮಕ್ಕಳೂ ಸೇರಿದಂತೆ ಆಸಕ್ತಿಯುಳ್ಳವರಿಗೆ ಕೆಫೆ ಬರಿಸ್ಟಾ (ಕೆಫೆ ನಿವಾ೯ಹಕರು) ತರಬೇತಿಯನ್ನು ನೀಡುವ ಯೋಜನೆ ಮಂಡಳಿಯ ಮುಂದಿದೆ ಈ ಮೂಲಕ ಕಾಫಿ ತೋಟಗಳಿಗೆ ಬರುವ ಸಂದಶ೯ಕರು, ಪ್ರವಾಸಿಗರಿಗೂ ಉತ್ತಮ ಗುಣಮಟ್ಟದ ಸ್ವಾದಿಷ್ಟ ಕಾಫಿಯನ್ನು ತಯಾರಿಸಿ ನೀಡಬಹುದಾಗಿದೆ ಎಂದೂ ಡಾ ಜಗದೀಶ್ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.  ಕೊಡಗಿನಲ್ಲಿ ಪರಿಸರ ಸ್ನೇಹಿ ಕಾಫಿ ಪ್ರವಾಸೋದ್ಯಮದ ಮೂಲಕ ಕಾಫಿ ತೋಟಗಳಿಗೆ ಸಂದಶ೯ಕರನ್ನು ಕರೆತರಲು ಸಾಧ್ಯವಿದೆ ಎಂದು ಸಲಹೆ ನೀಡಿದ ಜಗದೀಶ್, ಈ ನಿಟ್ಟಿನಲ್ಲಿ ಕಾಫಿ ತೋಟಗಳನ್ನು ಪರಿಸರ ಸ್ನೇಹಿಯಾಗಿ ಸಂರಕ್ಷಿಸಿಕೊಳ್ಳುವ ಹೊಣೆಗಾರಿಕೆ ತೋಟ ಮಾಲೀಕರ ಮೇಲಿದೆ ಎಂದು ಅಭಿಪ್ರಾಯಪಟ್ಟರು ಕೊಡಗೂ ಸೇರಿದಂತೆ ಕನಾ೯ಟಕದ ಕಾಫಿ ತೋಟಗಳಲ್ಲಿ ಹಲವಷ್ಟು ಜೀವವೈವಿಧ್ಯತೆಗಳಿವೆ, ಇದನ್ನೇ ಬಳಸಿಕೊಂಡು ಜಾಗತಿಕ ಮಟ್ಟದಲ್ಲಿ ಕನಾ೯ಟಕದ ಕಾಫಿ ತೋಟಗಳಲ್ಲಿನ ವಿಶಿಷ್ಟತೆಗಳ ಕಥೆ ಹೇಳುವಂತಾಗಬೇಕೆಂದೂ ಕಾಫಿ ಮಂಡಳಿ ಕಾಯ೯ದಶಿ೯ ಡಾ.ಜಗದೀಶ್ ಸಲಹೆ ನೀಡಿದರು. ಹವಾಮಾನ ಬದಲಾವಣೆ ಎಂಬುದು ವಿಶ್ವವ್ಯಾಪಿಯಾಗಿದೆ, ಈ ನಿಟ್ಟಿನಲ್ಲಿ ಕಾಫಿ ಬೆಳೆಗಾರರ ಒಂದಾಗಿ ಚಿಂತನೆ ಹರಿಸಿ ವಿಕೋಪ ಸಂದಭ೯ ಯಾವ ರೀತಿ ಕಾಫಿ ಸಮುದಾಯದ ಹಿತರಕ್ಷಣೆ ಮಾಡಬಹುದು ಎಂಬ ಬಗ್ಗೆ ಕಾಳಜಿ ತೋರಬೇಕು ಕೆಲವು ತೋಟಗಳು ಪ್ರಾಕೖತ್ತಿಕ ವಿಕೋಪದ ಸಂದಭ೯ ನೀರು ಸಾಗಲು ಉತ್ತಮ ಚರಂಡಿ, ಮಳೆ ಕೊಯ್ಲು ಮುಂತಾದ ಮುಂಜಾಗ್ರತ ಕ್ರಮ ಕೈಗೊಂಡಿವೆ, ಹೀಗಾಗಿ ಇಂಥ ತೋಟಗಳಿಗೆ ಸಮಸ್ಯೆ ಭಾದಿಸುತ್ತಿಲ್ಲ, ಇದನ್ನೇ ಮಾದರಿಯಾಗಿಸಿಕೊಂಡು ತೋಟಗಳ ನಿವ೯ಹಣೆ ಕೈಗೊಳ್ಳಬೇಕೆಂದೂ ಜಗದೀಶ್ ಸೂಚಿಸಿದರು. ಭವಿಷ್ಯದಲ್ಲಿ ಕಾಮಿ೯ಕರ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಹಿನ್ನಲೆಯಲ್ಲಿ ಶೇ 60 ರಷ್ಟು ತೋಟವನ್ನಾದರೂ ಯಾಂತ್ರೀಕರಣಕ್ಕೆ ಒಳಪಡಿಸುವ ಅನಿವಾಯ೯ತೆ ಕಾಫಿ ಕೖಷಿಕರಿಗೆ ಇದೆ ಇದನ್ನು ಗಂಭೀರವಾಗಿ ಪರಿಗಣಿಸದೇ ಕಾಮಿ೯ಕರನ್ನೇ ನಂಬಿಕೊಂಡರೆ ಸಮಸ್ಯೆ ಖಂಡಿತಾ ಎಂದು ಎಚ್ಚರಿಸಿದ ಜಗದೀಶ್, ಪ್ರಸ್ತುತ ಶೇ.5 ರಷ್ಟಿರುವ ಸ್ಲೆಷಾಲಿಟಿ ಕಾಫಿ ಶೇ, 40 ರಷ್ಟು ಮಾರುಕಟ್ಟೆ ಪ್ರಮಾಣ ಹೊಂದುವ ಸಾಧ್ಯತೆ ಇದೆ, ಹೀಗಾಗಿ ಸ್ಪೆಷಾಲಿಟಿ ಕಾಫಿಯತ್ತ ಹೆಚ್ಚಿನ ಗಮನ ನೀಡುವುದು ಸೂಕ್ತ ಎಂದೂ ಅವರು ಹೇಳಿದರು.  ಭಾರತದಲ್ಲಿ ಕಾಫಿಯ ಬಗ್ಗೆ ಯುವಪೀಳಿಗೆ ಹೆಚ್ಚು ಆಸಕ್ತಿ ವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದ ಡಾ ಜಗದೀಶ್, 2018 ರಲ್ಲಿ ಕಾಫಿ ಮಂಡಳಿಗೆ 180 ತೋಟಿ ರುಪಾಯಿ ಅನುದಾನ ನೀಡಲಾಗುತ್ತಿತ್ತು, ಈ ವಷ೯ 307 ಕೋಟಿ ರುಪಾಯಿಗಳ ಅನುದಾನ ದೊರಕಿದ್ದು ಸಾಕಷ್ಟು ಯೋಜನೆಗಳನ್ನು ಈ ಅನುದಾನದ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ ಡಾ ಜಗದೀಶ್, ಮುಂದಿನ 1 ವಷ೯ದಲ್ಲಿಯೇ ಭಾರತಾದ್ಯಂತ 3 ಸಾವಿರ ಕಾಫಿ ಕೆಫೆಗಳು ಪ್ರಾರಂಭವಾಗುತ್ತಿರುವುದು ಕೂಡ ಕಾಫಿ ಕ್ಷೇತ್ರದ ಭವಿಷ್ಯದ ಬಗ್ಗೆ ಆಶಾಭಾವನೆ ಮೂಡಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು ಕಳೆದ ವಷ೯ 2 92 ಮೆಟ್ರಿಕ್ ಟನ್ ಉತ್ಪಾದನೆಯಿದ್ದ ಭಾರತೀಯ ಕಾಫಿ ಈ ವಷ೯ 3 60 ಮೆಟ್ರಿಕ್ ಟನ್ ಗಳ ಮೂಲಕ 80 ಸಾವಿರ ಮೆಟ್ರಿಕ್ ಟನ್ ಗಳಷ್ಟು ಹೆಚ್ಚಳ ಕಂಡಿರುವುದು ಕೂಡ ಹಷ೯ದಾಯಕ ಬೆಳವಣಿಗೆಯಾಗಿದ್ದರೂ ಅಕಾಲಿಕ ಮಳೆಯಿಂದಾಗಿ ಕಾಫಿ ಉತ್ಪಾದನೆ ಮೇಲೆ ವ್ಯತಿರಿಕ್ತ ಪರಿಣಾದ ಸಾಧ್ಯತೆ ಚಿಂತೆಗೀಡು ಮಾಡಿದೆ ಎಂದೂ ಹೇಳಿದರು. ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿದೇ೯ಸಕ ಪಿ ಎ ಮಂದಣ್ಣ ಮಾತನಾಡಿ, ಸುಸ್ಥಿರ ಕಾಫಿ ಬೆಳೆಯತ್ತ ಪ್ರತೀ ಬೆಳಗಾರರೂ ಆದ್ಯತೆ ನೀಡುವಂತಾಗಬೇಕು, ಪರಿಸರ, ಆಥಿ೯ಕತೆ ಮತ್ತು ಸಾಮಾಜಿಕ ಸೇವೆಯತ್ತಲೂ ತೋಟ ಕೖಷಿಕರು ಗಮನ ಹರಿಸಬೇಕೆಂದು ಹೇಳಿದರಲ್ಲದೇ, ಟಾಟಾ ಕಾಫಿ ಸಂಸ್ಥೆಯ ತೋಟಗಳಲ್ಲಿ ಪರಿಸರ ಸ್ನೇಹಿ ಪಲ್ಪರ್ ಗಳು, ಮಳೆ ಕೊಯ್ಲು ವ್ಯವಸ್ಥೆಯನ್ನು ಸೂಕ್ತರೀತಿಯಲ್ಲಿ ನಿವ೯ಹಿಸಿರುವ ಪರಿಣಾಮವೇ ಮಣ್ಣಿನ ಫಲವತ್ತತೆ ಹೆಚ್ಚಳವಾಗಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿದೆ, ಅಂತರ್ ಜಲದ ಮಟ್ಟದಲ್ಲಿಯೂ ಹೆಚ್ಚಳವಾಗಿದೆ ಎಂದು ಮಾಹಿತಿ ನೀಡಿದರು. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಎ ನಂದ ಬೆಳ್ಯಪ್ಪ ಮಾತನಾಡಿ, ಕಳೆದ 1 ವಷ೯ಧಲ್ಲಿ ಅಸೋಸಿಯೇಷನ್ ವತಿಯಿಂದ ಹಲವಾರು ಗಮನಾಹ೯ ಯೋಜನೆ ಜಾರಿಗೊಳಿಸಲಾಗಿದೆ, ಜಮ್ಮ, ಸಾಗು ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಸಕಾ೯ರದ ಮಟ್ಟದಲ್ಲಿ ಧ್ವನಿ ಎತ್ತಲಾಗಿದೆ ಬೆಳೆಗಾರರಿಗೆ ಕಾಲದಿಂದ ಕಾಲಕ್ಕೆ ಅಗತ್ಯ ಮಾಹಿತಿ ನೀಡಿದ ಕೀತಿ೯ ಸಂಸ್ಥೆಗೆ ಸಲ್ಲುತ್ತದೆ ಎಂದು ಹಷ೯ ವ್ಯಕ್ತಪಡಿಸಿದರು. ಡಾ.ರಾಜಾ ವಿಜಯ್ ಕುಮಾರ್, ಯುನೆಟೈಡ್ ಕಿಂಗ್ ಡಮ್ ನ ಕೖಷಿ ಪರಿಣಿತ ಮಾಕ್೯ ತ್ರಿಸ್ನಿ, ಕೆ ಸುದೀಂದ್ರ ಅವರು ಕಾಫಿ ಕೖಷಿ ಸಂಬಂಧಿತ ವಿವಿಧ ವಿಚಾರಗಳ ಬಗ್ಗೆ ಪ್ರಾತಕ್ಷಿಕೆ ಮೂಲಕ ಉಪಯುಕ್ತ ಮಾಹಿತಿಗಳನ್ನು ಬೆಳೆಗಾರರಿಗೆ ನೀಡಿದರು. ಕೂಗ್೯ ಪ್ಲಾಂಟಸ್೯ ಅಸೋಸಿಯೇಷನ್ ಕಾಯ೯ದಶಿ೯ ಸಿ ಕೆ ಬೆಳ್ಳಿಯಪ್ಪ, ಉಪಾಧ್ಯಕ್ಷ ಎ ಚಂಗಪ್ಪ ವೇದಿಕೆಯಲ್ಲಿದ್ದರು, ಕಾಯ೯ಕ್ರಮದಲ್ಲಿ ಕನಾ೯ಟಕ ಕಾಫಿ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಕೆ ರಾಜೀವ್, ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರಾದ ನಡಿಕೇರಿಯಂಡ ಬೋಸ್ ಮಂದಣ್ಣ, ಬಿ ಡಿ ಮಂಜುನಾಥ್, ಮೋಹನ್ ದಾಸ್, ಕೆ ಪಿ ಉತ್ತಪ್ಪ ಸೇರಿದಂತೆ ಕಾಫಿ ಉದ್ಯಮದ ಅನೇಕರು ಹಾಜರಿದ್ದರು ವಿವಿಧ ಕೖಷಿ ಯಂತ್ರೋಪಕರಣಗಳ ಪ್ರದಶ೯ನ ಮತ್ತು ಮಾರಾಟ ಆಯೋಜಿಸಲ್ಪಟ್ಟಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಕರ್ಕಾಳ ಮೇ 9 NEWS DESK : ರಾಷ್ಟ್ರೀಯ ರಕ್ಷಣಾ ಪಡೆಗೆ ಸೇರಬಯಸುವವರಿಗೆ ಕೇಂದ್ರ ಲೋಕಸೇವಾ ಆಯೋಗದವರು ನಡೆಸುವ 2026ರ…

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.