Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏಳನೇ ಹೊಸಕೋಟೆ ಗ್ರಾಮಸಭೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏಳನೇ ಹೊಸಕೋಟೆ ಗ್ರಾಮಸಭೆ* 

ನವೆಂಬರ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಕುಶಾಲನಗರ ನ.7 NEWS DESK :  ಕಾಡಾನೆಗಳಿಂದ ನಿರಂತರವಾಗಿ ಬೆಳೆ ಹಾಗೂ ಸ್ವತ್ತು ನಷ್ಟವಾಗುತ್ತಿದ್ದರೂ ಕೂಡ ಅರಣ್ಯ ಇಲಾಖೆ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಗೆ ತಾಕೀತು ಮಾಡಿ ಬೆಳೆ ನಷ್ಟ ಪರಿಹಾರ ಕೊಡಿಸಬೇಕೆಂದು ಗ್ರಾಮಸಭೆಯಲ್ಲಿ ಏಳನೇ ಹೊಸಕೋಟೆ ಗ್ರಾ.ಪಂ ವ್ಯಾಪ್ತಿಯ ಕೃಷಿಕರು ಒತ್ತಾಯಿಸಿದರು. ಏಳನೇ ಹೊಸಕೋಟೆ ಗ್ರಾ.ಪಂ ಸಭಾಂಗಣದಲ್ಲಿ ಅಧ್ಯಕ್ಷ ಇ.ಬಿ.ಜೋಸೆಫ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ತೊಂಡೂರು, ಕಂಬಿಬಾಣೆ ಹಾಗೂ ಏಳನೇ ಹೊಸಕೋಟೆಯ ರೈತರು ಹಾಗೂ ಸಾರ್ವಜನಿಕರು ಆಗ್ರಹಿಸಿದರು. ಕಾಡಾನೆಗಳ ಹಾವಳಿ ನಿರಂತರವಾಗಿದ್ದರೂ ಕೂಡ ಅರಣ್ಯ ಇಲಾಖೆ ಆನೆಗಳ ತಡೆಗೆ ಯೋಜನೆ ರೂಪಿಸುತ್ತಿಲ್ಲ. ತೊಂಡೂರು ವ್ಯಾಪ್ತಿಯ ಅರಣ್ಯದಂಚಿನಲ್ಲಿ ರೈಲ್ವೆ ಕಂಬಿ ತಡೆಗೋಡೆ ಕಾಮಗಾರಿ ಅಪೂರ್ಣಗೊಂಡಿದೆ. ಕಾಡಾನೆಗಳಿಂದ ಆಗುತ್ತಿರುವ ಬೆಳೆ ನಷ್ಟ ಪರಿಹಾರಕ್ಕಾಗಿ ಕಚೇರಿಗೆ ಅಲೆದು ಚಪ್ಪಲಿ ಸವೆದರೂ ಕೂಡ ಪರಿಹಾರ ಮಾತ್ರ ನಯಾಪೈಸೆ ಬರಲಿಲ್ಲ ಎಂದು ಗ್ರಾಮಸ್ಥರು ಅಸಮಧಾನ ವ್ಯಕ್ತಪಡಿಸಿದರು. ಏಳನೇ ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯಂಚಿನಲ್ಲಿ ಯೋಜಿಸಿರುವ ಹೊಸ ಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ನೀಡುವ ವಿಚಾರವಾಗಿ ಕೆಲವರಿಂದ ವಿರೋಧ ವ್ಯಕ್ತವಾದರೆ ಮತ್ತೆ ಹಲವರಿಂದ ಮದ್ಯದಂಗಡಿಗೆ ಪರವಾದ ಚರ್ಚೆಗಳು ನಡೆಯಿತು. ಸ್ಥಳೀಯ ನಿವಾಸಿ ಅಸ್ಲಾಂ ಮತ್ತಿತರರು ರಾಷ್ಟ್ರೀಯ ಹೆದ್ದಾರಿಯಂಚಿನಲ್ಲಿ ಮದ್ಯದಂಗಡಿ ಆರಂಭಕ್ಕೆ ಪಂಚಾಯಿತಿ ಪರವಾನಗಿ ನೀಡಬಾರದು ಎಂದರೆ, ಪಂಚಾಯಿತಿ ಮಾಜಿ ಸದಸ್ಯ ಎ.ಪಿ.ರಮೇಶ್ ಮತ್ತಿತರರು ಏಳನೇ ಹೊಸಕೋಟೆ ಪಂಚಾಯಿತಿಯಲ್ಲಿ ಒಂದೇ ಒಂದು ಸಿಎಲ್ 7 ಮದ್ಯದಂಗಡಿ ಇಲ್ಲ. ಮದ್ಯದಂಗಡಿ ತೆರೆಯಲು ಸಾಧಕ ಬಾಧಕ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಪರವಾನಗಿ ನೀಡಿದೆ. ಈ ಭಾಗದ ಹಲವು ಮದ್ಯಪ್ರಿಯರು ಸುಂಟಿಕೊಪ್ಪ ಹಾಗೂ ಕುಶಾಲನಗರ ಮತ್ತಿತರೆಡೆಗಳಿಗೆ ನಿತ್ಯವೂ ಹತ್ತಾರು ಕಿ.ಮಿ ಕ್ರಮಿಸುತ್ತಿದ್ದಾರೆ.  ಕೆಲವರು ಹೆದ್ದಾರಿಯ ವಾಹನಗಳ ದಟ್ಟಣೆಯಿಂದ ಅಪಘಾತಕ್ಕೆ ಸಿಲುಕಿ ಜೀವವನ್ನು ಕಳೆದುಕೊಂಡಿದ್ದಾರೆ.  ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯವಾಗಿಯೇ ಮದ್ಯದಂಗಡಿ ಅಗತ್ಯವಿದೆ. ಕಾನೂನಿನ ರೀತಿಯೇ ಯಾರಿಗೂ ಅನಾನುಕೂಲವಾಗದಂತೆ ಮದ್ಯದಂಗಡಿ ತೆರೆಯಬೇಕಿದೆ. ಮದ್ಯದಂಗಡಿಯಿಂದ ಪಂಚಾಯಿತಿಗೂ ಆದಾಯ ಬರುತ್ತದೆ ಎಂದು ಎ.ಪಿ.ರಮೇಶ್ ಮತ್ತಿತರರು ಒತ್ತಾಯಿಸಿದರು. ಸಭಾಧ್ಯಕ್ಷ ಜೋಸೆಫ್ ಮದ್ಯದಂಗಡಿಗೆ ಪರವಾನಗಿ ನೀಡುವ ವಿಚಾರವಾಗಿ ಸದಸ್ಯರೊಂದಿಗೆ ಚರ್ಚಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಮಾನಸಿಕ ಅಸ್ವಸ್ಥರು ಹೆಚ್ಚಿದ್ದು, ಪ್ರಾರ್ಥನಾಲಯಕ್ಕೆ ಕಲ್ಲು ಬೀಸುವುದಲ್ಲದೇ,‌ ಕಂಡ ಕಂಡ ವಾಹನಗಳಿಗೂ ಕಲ್ಲು ತೂರಿ ಹಾನಿಪಡಿಸುತ್ತಿದ್ದಾರೆ. ಈ ಬಗ್ಗೆ ಪೋಲೀಸರಿಗೆ ದೂರು ನೀಡಿದರೆ ಪಂಚಾಯಿತಿಯಿಂದ ಕ್ರಮ ಕೈಗೊಳ್ಳಬೇಕೇ ವಿನಃ ನಾವೇನು ಮಾಡಲಾಗುವುದಿಲ್ಲ ಎನ್ನುತ್ತಾರೆ. ಈ ಬಗ್ಗೆ ಪಂಚಾಯಿತಿ ವತಿಯಿಂದ ಮಾನಸಿಕ ಅಸ್ವಸ್ಥರನ್ನು ಬೇರೆಡೆಗೆ ಸಾಗಿಸಬೇಕು ಎಂದು ಅಸ್ಲಾಂ ಎಂಬವರು ಆಗ್ರಹಿಸಿದಾಗ,ಪಂಚಾಯಿತಿ ಪಿಡಿಒ ನಂದೀಶ ಈ ಬಗ್ಗೆ ಮೇಲಧಿಕಾರಿಯೊಂದಿಗೆ ಚರ್ಚಿಸಿ ಕ್ರಮ ಜರುಗಿಸುವ ಭರವಸೆ ನೀಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲೆಡೆ ಕಾಲುವೆ ಹಾಗೂ ಗುಂಡಿಗಳನ್ನು ತೆಗೆದು ಹಾಗೆಯೇ ಬಿಡಲಾಗಿದೆ. ಹಾಗಾಗಿ ದ್ವಿಚಕ್ರ ವಾಹನಗಳ ಸವಾರರು ಮಳೆಯಿಂದಾಗುವ ಕೆಸರಿನಲ್ಲಿ ಸಿಲುಕಿ ಜಾರಿ ಬೀಳುತ್ತಿದ್ದಾರೆ ಎಂದು ನಿವಾಸಿ ಸುಬ್ರಾಯ ಎಂಬವರು ದೂರಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು. ಬೀದಿ ದೀಪಗಳ ಸಮರ್ಪಕವಾದ ನಿರ್ವಹಣೆಯಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು. ನೋಡಲ್ ಅಧಿಕಾರಿ ಸೋಮಯ್ಯ ಮಾತನಾಡಿ, ಗ್ರಾಮ ಸಭೆಯಲ್ಲಿ ಹಿಂದಿನ ಗ್ರಾಮಸಭೆಗಳ ನಡವಳಿಗಳನ್ನು ಓದಿ ಹೇಳುವ ಮೂಲಕ ಅದರ ಮೇಲೆ ಚರ್ಚೆಗಳಾಗಬೇಕು. ಕೆಲಸ ಕಾರ್ಯಗಳನ್ನು ಬದಿಗೊತ್ತಿ ಗ್ರಾಮಸಭೆಗೆ ಬರುವ ಸಾರ್ವನಿಕರನ್ನು ಗೌರವದಿಂದ ಕಾಣುವಂತಾಗಬೇಕು. ಪಂಚಾಯಿತಿ ವ್ಯಾಪ್ತಿಯ ಶಾಲೆಗಳು ಹಾಗೂ ಅಂಗನವಾಡಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅಗತ್ಯವಾದ ಅನುದಾನಗಳನ್ನು ನೀಡುವಂತಾಗಬೇಕು ಎಂಬಿತ್ಯಾದಿ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಸಾರ್ವಜನಿಕರು ಚರ್ಚಿಸಿದ ವಿಚಾರಗಳನ್ನು ಅಭಿವೃದ್ದಿಗೆ ಪೂರಕವಾಗಿ ಮನಗಂಡು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಭಾಧ್ಯಕ್ಷ ಜೋಸೆಫ್ ಹೇಳಿದರು. ಪಂಚಾಯಿತಿ ಉಪಾಧ್ಯಕ್ಷೆ ಸೌಮ್ಯಶ್ರೀ, ಸದಸ್ಯರಾದ ಕೆ.ಎಂ. ರಮೇಶ್, ಮಧುಸೂದನ್, ಸಿದ್ದಿಕಿ, ಮುಸ್ತಾಫ, ಚಂದ್ರಾವತಿ, ಕಮಲಾ, ಸಿಂಧೂ, ವೇದಾವತಿ ಹಾಗೂ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಬಿ.ಸಿ.ನದೀಶ್ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.