Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಫುಟ್ಬಾಲ್ ಪಂದ್ಯಾವಳಿ  : ವಿದ್ಯಾರ್ಥಿಗಳಲ್ಲಿ ಶಿಸ್ತು ಏಕೆ ಮುಖ್ಯ : ತಾತಂಡ ಜ್ಯೋತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಫುಟ್ಬಾಲ್ ಪಂದ್ಯಾವಳಿ  : ವಿದ್ಯಾರ್ಥಿಗಳಲ್ಲಿ ಶಿಸ್ತು ಏಕೆ ಮುಖ್ಯ : ತಾತಂಡ ಜ್ಯೋತಿ*

ನವೆಂಬರ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.7 NEWS DESK :  ಕ್ರೀಡೆಯಲ್ಲಿ ಶಿಸ್ತು ಹಾಗೂ ಏಕತೆ  ಮುಖ್ಯವಾಗಿದೆ ಎಂದು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ  ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೈಂಟ್ ಆನ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಐಕ್ಯೂಎಸಿ ಮತ್ತು ಬಿಬಿಎ ವಿಭಾಗಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಉತ್ತಮವಾದ ಅವಕಾಶಗಳಿದ್ದು, ತಮಗೆ ಸಿಕ್ಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಪೋಷಕರನ್ನು ಗೌರವಿಸಬೇಕು ಎಂದರು. ಮಾತ್ರವಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಉತ್ತಮವಾಗಿ ವರ್ತಿಸುದರ ಜೊತೆಗೆ ಮಾದರಿ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ಆಟಗಾರರು ಶಿಸ್ತು ಬದ್ದವಾದ ಆಟವನ್ನು ಪ್ರದರ್ಶಿಸುವುದರ ಮೂಲಕ ಕಾಲೇಜಿಗೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಸೈಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಮಾತನಾಡಿ, ಕ್ರೀಡೆಗಳನ್ನು ಆಯೋಜಿಸುವುದರಿಂದ ಏಕತೆಯ ಜೊತೆಗೆ ಪರಸ್ಪರ ಬಾಂಧವ್ಯ ವೃದ್ಧಿಯಾಗುತ್ತದೆ. ಸಮಾಜದ, ರಾಷ್ಟ್ರದ ಅಭಿವೃದ್ಧಿಗೂ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡುತ್ತಾ ಬಂದಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ನಮ್ಮ ಕಾಲೇಜಿನ ವತಿಯಿಂದ ಸತತ ಎರಡನೇ ಬಾರಿಗೆ ರಾಷ್ಟ್ರ ಮಟ್ಟದ ಕ್ರೀಡೆಯನ್ನು ಆಯೋಜಿಸುತ್ತಿದ್ದು, ಇದಕ್ಕೆ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಎಲ್ಲಾ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದರು. ಏಕಾಗ್ರತೆ, ದೃಢ ನಿರ್ಧಾರ, ಯೋಜನೆ ಹಾಗೂ ಕ್ರಿಯಾಶೀಲತೆಯಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದ ಅವರು, ವಿದ್ಯಾರ್ಥಿಗಳ ತಂಡ ಕಾರ್ಯವನ್ನು ಪ್ರಶಂಸಿಸಿದರು. ಈ ಸಂದರ್ಭ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಜ್ಯೋತಿ ಅವರನ್ನು ಕಾಲೇಜು ವತಿಯಿಂದ  ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ದೈಹಿಕ ಶಿಕ್ಷಕರಾದ ರಾಜ ರೈ, ಕ್ರೀಡಾ ನಾಯಕರಾದ ಕಾವೇರಪ್ಪ, ರಹೀಮ್ ಹಾಜರಿದ್ದರು. ಉಪನ್ಯಾಸಕಿ ಹೇಮ ಸ್ವಾಗತಿಸಿದರು. ವಿಲೀನ ಗೋನ್ಸಾಲ್ವೇಸ್ ನಿರೂಪಿಸಿದರು. ಉಪನ್ಯಾಸಕಿ ಪೂಜಾ ವಂದಿಸಿದರು. ನ.8 ರಂದು ಪಂದ್ಯಾವಳಿಯ ಸಮಾರೋಪ ಸಮಾರಂಭ ನಡೆಯಲಿದೆ. ವಿವಿಧ ಕಾಲೇಜುಗಳ 28 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.