ಸೋಮವಾರಪೇಟೆ NEWS DESK ನ.10 : ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಮತ್ತು ಜಿಲ್ಲಾ ಶಿಕ್ಷಣ ಇಲಾಖೆ ವತಿಯಿಂದ ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಮತ್ತು ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದಲ್ಲಿ ಕುಶಾಲ್ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರತೀಕ್ಷಾ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.








