Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.16 ಮತ್ತು 17 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.16 ಮತ್ತು 17 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ*

ನವೆಂಬರ್ 11, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.11 NEWS DESK : ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಯ ದೂರದೃಷ್ಟಿಯಿಂದ ಹಿರಿಯರು ಕಟ್ಟಿ ಬೆಳೆಸಿದ ದಕ್ಷಿಣ ಕೊಡಗಿನ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 100 ಫಲಪ್ರದವಾದ ವರ್ಷಗಳನ್ನು ಪೂರೈಸಿದ್ದು, ಶಾಲೆಯ ಶತಮಾನೋತ್ಸವ ಸಮಾರಂಭ ನ.16 ಮತ್ತು 17 ರಂದು ಆಯೋಜಿತವಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಯಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಮಿತಿಯ ಪ್ರಮುಖರು ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರೂ ಆಗಿರುವ ಟಾಟು ಮೊಣ್ಣಪ್ಪ ಈ ಬಗ್ಗೆ ಮಾಹಿತಿ ನೀಡಿ, 1924 ರಲ್ಲಿ ಆರಂಭಗೊಂಡ ಶಾಲೆ ಪ್ರಸ್ತುತ ಶತಮಾನೋತ್ಸವ ಸಂಭ್ರಮದಲ್ಲಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆಯೆಂದು ತಿಳಿಸಿದರು.
ಕ್ರೀಡಾ ಚಟುವಟಿಕೆ :: ಶತಮಾನೋತ್ಸವ ಹಿನ್ನೆಲೆಯಲ್ಲಿ ನ.15 ರಂದೆ ಪೊನ್ನಂಪೇಟೆ ತಾಲ್ಲೂಕು ಮಟ್ಟದ ವಾಲಿಬಾಲ್, ಪುರುಷರು ಮತ್ತು ಮಹಿಳೆಯರ ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಪಂದ್ಯಾವಳಿ ನಡೆಯಲಿದೆಯೆಂದು ತಿಳಿಸಿದರು. ನ.16 ರಂದು ಬೆಳಗ್ಗೆ 10 ಗಂಟೆಗೆ ವಿಧಾನ ಪರಿಷತ್‍ನ ಮಾಜಿ ಸದಸ್ಯರಾದ ಚೆಪ್ಪುಡಿರ ಅರುಣ್ ಮಾಚಯ್ಯ ಅವರು ಆಟೋಟ ಸ್ಪರ್ಧೆಗಳಿಗೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಅಂದು ಬೈಕ್ ಮತ್ತು ಸೈಕಲ್ ನಿಧಾನ ಚಾಲನೆ ಸ್ಪರ್ಧೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿರುವುದಾಗಿ ಮಾಹಿತಿಯನ್ನಿತ್ತರು.
ಸಭಾಂಗಣ ಉದ್ಘಾಟನೆ – ಸನ್ಮಾನ : ಅಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ವಹಿಲಿದ್ದಾರೆ. ಶತಮಾನೋತ್ಸವ ಪ್ರಯುಕ್ತ ಶಾಲೆಯ ಹಳೆಯ ವಿದ್ಯಾರ್ಥಿಗಳಾದ, ಪ್ರಸ್ತುತ ರಾಜ್ಯದ ಇಂಧನ ಸಚಿವರಾಗಿರುವ ಕೆ.ಜೆ.ಜಾರ್ಜ್ ಒದಗಿಸಿರುವ ಸುಮಾರು 15 ಲಕ್ಷ ರೂ.ನೆರವಿನಿಂದ ನಿರ್ಮಿಸಲಾಗಿರುವ ‘ಶತಮಾನೋತ್ಸವ ಸಭಾಂಗಣ’ವನ್ನು ಸಚಿವರೆ ಉದ್ಘಾಟಿಸಲಿದ್ದಾರೆ ಎಂದರು. ಶಾಲೆ ನಡೆದು ಬಂದ ಹಾದಿಯ ಬಗ್ಗೆ ಹೊರ ತರಲಾಗಿರುವ ‘ಸ್ಮರಣ ಸಂಚಿಕೆ’ಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅನಾವರಣಗೊಳಿಸಲಿದ್ದಾರೆಂದರು.
9 ಮಂದಿ ಗಣ್ಯರಿಗೆ ಸನ್ಮಾನ : ಮಾಯಮುಡಿ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಸಾಧನೆಗಳನ್ನು ಮಾಡಿರುವ 9 ಮಂದಿಯನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಶಾಲಾ ವಿದ್ಯಾರ್ಥಿಗಳಾಗಿದ್ದ ಇಂದಿನ ಇಂಧÀನ ಸಚಿವ ಕೆ.ಜೆ.ಜಾರ್ಜ್, ಮಾಜಿ ಎಂಎಲ್‍ಸಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಕರಾಟೆಪಟು ಚೆಪ್ಪುಡಿರ ಅರುಣ್ ಮಾಚಯ್ಯ, ಸಿಎಫ್‍ಟಿಆರ್‍ಐ ವಿಜ್ಞಾನಿ ಕಾಳಪಂಡ ಕಾಶಿ ಅಪ್ಪಯ್ಯ, ಫುಟ್ಬಾಲ್ ಮತ್ತು ಹಾಕಿಯಲ್ಲಿ ಉನ್ನತ ಸಾಧನೆ ಮಾಡಿರುವ ಕಳ್ಳಿಚಂಡ ಪ್ರಸಾದ್, ಬಿಎಸ್‍ಎಫ್‍ನಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸಿದ್ದ ದಿವಂಗತ ಐಚೆಟ್ಟಿರ ಪೊನ್ನಪ್ಪ ಅವರ ಕುಟುಂಬಸ್ಥರು, ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ವಿಶ್ರಾಂತ ಡೀನ್ ಡಾ.ಸಿ.ಜಿ.ಕುಶಾಲಪ್ಪ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕಂಜಿತಂಡ ಸ್ವಾತಿ, ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕೊಂಗಂಡ ಗಣಪತಿ ಮತ್ತು ಚೆಪ್ಪುಡಿರ ರಾಧಾ ಅಚ್ಚಯ್ಯ ಅವರು ಸನ್ಮಾನಕ್ಕೆ ಪಾತ್ರರಾಗಲಿದ್ದಾರೆಂದು ವಿವರಗಳನ್ನಿತ್ತರು. ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಕಾಳ¥ಂಡ ಟಿ.ಬಿದ್ದಪ್ಪ ಅವರು ಮಾತನಾಡಿ, ನ.17 ರಂದು ಮಧ್ಯಾಹ್ನ 1 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.ಶತಮಾನೋತ್ಸವವನ್ನು ಯಶಸ್ವಿಯಾಗಿ ನಡೆಸುವುದಕ್ಕೆ ಗ್ರಾಮಸ್ಥರನ್ನು ಒಳಗೊಂಡಂತೆ ಸರ್ವರ ಸಹಕಾರದೊಂದಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು.
ಸಾಂಸ್ಕೃತಿಕ ಸಂಭ್ರಮ : ಶತಮಾನೋತ್ಸವ ಸಮಿತಿಯ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಬಾನಂಡ ಪ್ರಥ್ಯು ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಶತಮಾನೋತ್ಸವ ಸಮಾರಂಭದ ಸಂದರ್ಭ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಳೇ ವಿದ್ಯಾರ್ಥಿ ಸಂಘ, ಗೋಣಿಕೊಪ್ಪಲಿನ ಸ್ಥಕ್ಲೋನ್ ತಂಡ, ಕಾವೇರಿ ಕಾಲೇಜಿನ ಉಮ್ಮತ್ತಾಟ್ ತಂಡ, ಪೊನ್ನಂಪೇಟೆಯ ನಿಸರ್ಗ ತಂಡ, ನಾಟ್ಯ ಸಂಕಲ್ಪ ನೃತ್ಯ ಶಾಲೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ನ.17 ರಂದು ರಾತ್ರಿ 8 ಗಂಟೆಗೆ ಕೊಡಿಬೈಲ್ ಚಂದ್ರಶೇಖರ್ ತಂಡದಿಮದ ‘ಶಿವ ಧೂತ ಗುಳಿಗ’ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆಯೆಂದರು. ಗೋಷ್ಠಿಯಲ್ಲಿ ಶತಮಾನೋತ್ಸವ ಸಮಿತಿ ಖಜಾಂಚಿ ಎಸ್.ಎಸ್.ಸುರೇಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.