Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ*

ನವೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.12 NEWS DESK : ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು. ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ ಕೊಡುಗೆಯಿಂದ ಇಂದಿಗೂ ಸಹ ಪ್ರಸ್ತುತರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ ಸೇರಿದಂತೆ ಹಲವು ಮಹಿಳಾ ಹೋರಾಟಗಾರರು ತಮ್ಮ ತಮ್ಮ ಪ್ರಾಂತ್ಯದಲ್ಲಿ ಶತ್ರುಗಳ ವಿರುದ್ಧ ಹೋರಾಡಿ ಜಯಸಾಧಿಸಿದ್ದಾರೆ ಎಂದು ಅವರು ಹೇಳಿದರು. ಓಬವ್ವ ಸಾಹಸ ತಿಳಿದು ಅಲ್ಲಿನ ಅರಸರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ದುರ್ಗದ ಕೋಟೆಯನ್ನು ರಕ್ಷಿಸಿದ ತಾಯಿ ಒನಕೆ ಓಬವ್ವ ಎಂದು ಶ್ಲಾಘಿಸುತ್ತಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ವಿವರಿಸಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಕೋರನ ಸರಸ್ವತಿ ಅವರು ಮಾತನಾಡಿ ಭಾರತ ಸ್ವಾತಂತ್ರ್ಯಕ್ಕೂ ಮೊದಲು ಆಯಾಯ ಪ್ರಾಂತ್ಯದಲ್ಲಿ ರಾಜ ಮಹಾರಾಜರು ಇತರರು ತಮ್ಮ ವ್ಯಾಪ್ತಿಯಲ್ಲಿ ಆಡಳಿತ ಮಾಡುತ್ತಾರೆ. ತಮ್ಮ ಪ್ರಾಂತ್ಯದ ರಕ್ಷಣೆಗಾಗಿ ಸದಾ ಮುಂದಾಗಿರುತ್ತಾರೆ. ಆ ನಿಟ್ಟಿನಲ್ಲಿ ಒನಕೆ ಓಬವ್ವ ಶತ್ರುಗಳ ಸಂಹಾರ ಮಾಡಿದ್ದಾರೆ. ಸಮಯ ಪ್ರಜ್ಞೆ ಮತ್ತು ಸಂದರ್ಭೋಚಿತವಾಗಿ ಸ್ವಯಂ ರಕ್ಷಣೆ ಮಾಡಿಕೊಳ್ಳುವತ್ತ ಮುಂದಾಗಿದ್ದು ಒನಕೆ ಓಬವ್ವ ಅವರ ಛಲ ವಿಶೇಷವಾಗಿದೆ ಎಂದರು. ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೆಂಕಟ್ ನಾಯಕ್ ಅವರು ಮಾತನಾಡಿ ವೀರರಾಣಿ ಒನಕೆ ಓಬವ್ವ ಅವರು ಧೈರ್ಯ ಸಾಹಸದಿಂದ ಶತ್ರುಗಳ ಸಂಹಾರಕ್ಕೆ ಮುಂದಾದರು. ಇವರ ಧೈರ್ಯ, ಸ್ಥೈರ್ಯವನ್ನು ಮೆಚ್ಚಬೇಕಿದೆ ಎಂದರು. ‘ವಿರಾರಾಣಿ ಒನಕೆ ಓಬವ್ವ ಅವರಂತೆ ಮಹಿಳೆಯರು ಸಮಾನವಾಗಿ ಬದುಕು ಕಟ್ಟಿಕೊಳ್ಳುವಂತಾಗಬೇಕು. ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವೀರರಾಣಿ ಒನಕೆ ಓಬವ್ವ ಅವರಂತೆ ಹೋರಾಟದ ಮನೋಭಾವ ಇರಬೇಕು ಎಂದು ವೆಂಕಟ್ ನಾಯಕ್ ಪ್ರತಿಪಾದಿಸಿದರು.’ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ನಿವೃತ್ತ ಶಿಕ್ಷಕರಾದ ಬಿ.ಸಿ.ಶಂಕರಯ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.