Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ*

ನವೆಂಬರ್ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ನ.12 NEWS DESK : ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು (ಎಂಎಸ್‍ಎಂಇ) ಕ್ಯಾಟಲಿಸ್ಟ್ ವಿಮೆನ್ ಎಂಟ್ರೆಫ್ರೆನ್ಸ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಕೊಡಗು ಜಿಲ್ಲೆ ಹೋಂ-ಸ್ಟೇ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ನೋಂದಾಯಿತ ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರವು ನಗರದ ಹೋಟೆಲ್ ಮಯೂರ ವ್ಯಾಲಿ ವ್ಯೂನಲ್ಲಿ ನಡೆಯಿತು. ಆರ್ಥಿಕವಾಗಿ ಲಾಭದಾಯಕ ಹಾಗೂ ಜವಾಬ್ದಾರಿಯಾಗಿ ಹೋಂಸ್ಟೇ ನಡೆಸುವ ಬಗ್ಗೆ ಹಾಗೂ ಸ್ಥಳೀಯವಾಗಿ ದೊರೆಯುವ ಉತ್ಪನ್ನಗಳಿಗೆ ಬಾರ್ಕೋಡ್ ಅಳವಡಿಸುವ ಬಗ್ಗೆ ಇತರೆ ವಿಷಯದ ಬಗ್ಗೆ ಸಮಗ್ರವಾಗಿ ಎಂಎಸ್‍ಎಂಇ ಸಂಸ್ಥೆಯ ವಿಷಯ ತಜ್ಞರು ಮಾಹಿತಿ ನೀಡಿದರು. ಜಿಲ್ಲೆಯಲ್ಲಿರುವ ನೋಂದಾಯಿತ ಹೋಂ-ಸ್ಟೇಗಳಿಗೆ ತಾಂತ್ರಿಕ ಮಾರ್ಗದರ್ಶನ ಹಾಗೂ ಜಿಲ್ಲೆಯ ಉತ್ಪನ್ನಗಳಾದ ಕಾಫಿ, ವೈನ್, ಚಾಕೋಲೇಟ್, ಜೇನು, ಮಸಾಲೆ ಪದಾರ್ಥಗಳಿಗೆ ಮೌಲ್ಯ ವರ್ಧನೆ ಮಾಡುವ ಬಗ್ಗೆ ಹಾಗೂ ಮಾರ್ಕೆಟಿಂಗ್ ಮಾಡುವ ಬಗ್ಗೆ ಹಾಗೂ ಸ್ವಾಸ್ಥ್ಯ ಕೇಂದ್ರ ಭಾರತ ಸರ್ಕಾರದ ಎಂಎಸ್‍ಎಂಇ ನೋಂದಾಣಿ ಬಗ್ಗೆ ತಿಳಿಸಿದರು. ಜಿಲ್ಲೆಯ ನೋಂದಾಯಿತ ಹೋಂ-ಸ್ಟೇಗಳು ಎಂಎಸ್‍ಎಂಇ ನೋಂದಾಣಿ ಮಾಡುವ ಕುರಿತು ಹಾಗೂ ಅದರ ಪ್ರಾಯೋಜನಗಳ ಬಗ್ಗೆ ಮಂಗಳೂರು ಎಂಎಸ್‍ಎಂಇ ಸಹಾಯಕ ನಿರ್ದೇಶಕರಾದ ಸುಮನ್ ಎಸ್.ರಾಜು ಮಾಹಿತಿ ನೀಡಿದರು. ಬಿಸಿನೆಸ್ ಸ್ಟ್ರಾಟೆಜಿಸ್ ಫಾರ್ ಎಂಟ್ರೆಪ್ರೆನುರ್ಸ್ ಎಂಬ ವಿಷಯದ ಬಗ್ಗೆ ಮಂಗಳೂರು ಕ್ಯಾಟಲಿಸ್ಟ್ ವಿಮೆನ್ ಎಂಟ್ರೆಫ್ರೆನ್ಸ್ ಲೀಡ್ ಸಂಗೀತಾ ಶಶ್ರೀಂಧ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ನೋಂದಾಯಿತ ಹೋಂ-ಸ್ಟೇ ಮಾಲೀಕರು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್, ಹೋಂ-ಸ್ಟೇ ಅಸೋಸಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್ ಹೋಂ ಸ್ಟೇಗಳ ನಿರ್ವಹಣೆ, ಬೆಳವಣಿಗೆ, ಅಭಿವೃದ್ಧಿ ಹಾಗೂ ಕಸವಿಲೇವಾರಿ ಸಂಬಂಧ ಮಾತನಾಡಿದರು. ಸೋಮವಾರಪೇಟೆ ತಾಲ್ಲೂಕು ಹೋಂಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಸಿ.ಕೆ.ರೋಹಿತ್, ಸುಮಾರು 65 ಕ್ಕೂ ಹೆಚ್ಚು ಹೋಂಸ್ಟೇಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚರಾದ ಜತೀನ್ ಬೋಪಣ್ಣ ಇತರರು ಇದ್ದರು.
ಮತ್ತಷ್ಟು ಮಾಹಿತಿ: ಕೊಡಗು ಜಿಲ್ಲೆಗೆ ಪ್ರತೀ ವರ್ಷ 40 ರಿಂದ 50 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಇಲ್ಲಿನ ಸ್ಥಳೀಯರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಾವಿರಾರು ಮಂದಿಗೆ ಉದ್ಯೋಗ ದೊರೆಯುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ 4 ಸಾವಿರದಷ್ಟು ಹೋಂ ಸ್ಟೇಗಳಿದ್ದು, ಇಲ್ಲಿಯವರೆಗೆ 2010 ಹೋಂ ಸ್ಟೇಗಳು ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಅವರು ತಿಳಿಸಿದರು. ಗೂಗಲ್‍ನಲ್ಲಿ ಅತೀ ಹೆಚ್ಚು ಕೊಡಗಿನ ಪ್ರವಾಸೋದ್ಯಮ ಕ್ಷೇತ್ರವನ್ನು ಹುಡುಕಿರುವುದು ಕಂಡುಬಂದಿದೆ. ಆ ನಿಟ್ಟಿನಲ್ಲಿ ರಾಜ್ಯದ ಪ್ರವಾಸೋದ್ಯಮದಲ್ಲಿ ಕೊಡಗು ಪ್ರಮುಖ ಸ್ಥಾನವನ್ನು ಹೊಂದಿದೆ ಎಂದರು. 2023 ರ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ ಸುಮಾರು 43,69,507 ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ. 2024 ರ ಜನವರಿಯಿಂದ ಅಕ್ಟೋಬರ್ ಅಂತ್ಯದವರೆಗೆ 20,67,168 ಮಂದಿ ಪ್ರವಾಸಿಗರು ಭೇಟಿ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದರು. ಕೊಡಗು ಜಿಲ್ಲೆಯ ಪ್ರಾಕೃತಿಕ ಸಂಪತ್ತು, ಪರಂಪರೆ, ಸಾಂಪ್ರದಾಯಿಕತೆ ಮತ್ತು ಇಲ್ಲಿನ ಪ್ರೇಕ್ಷಣೀಯ ಸ್ಥಳಗಳು, ಧಾರ್ಮಿಕ ಪವಿತ್ರ ಕ್ಷೇತ್ರಗಳಿಗೆ ವಿಶೇಷ ಸ್ಥಾನ ಹೊಂದಿದೆ ಎಂದು ಹೇಳಿದರು. ಹಸಿರನ್ನೇ ಉಸಿರಾಗಿಸಿಕೊಂಡಿರುವ ನಿಸರ್ಗದ ಪ್ರಾಕೃತಿಕ ಹಾಗೂ ಸ್ವಾಭಾವಿಕ ಸಂಪನ್ಮೂಲವನ್ನು ಹೊಂದಿರುವ ಕೊಡಗನ್ನು ಕಾಣುತ್ತೇವೆ ಎಂದರು. ಕೊಡಗು ಜಿಲ್ಲೆಯು ಬೆಟ್ಟಗುಡ್ಡಗಳಿಂದ ಕೂಡಿ ಸಸ್ಯ ಸಂಪತ್ತನ್ನು ಹೊಂದಿ ಹಚ್ಚ ಹಸುರಿನಿಂದ ಕೂಡಿರುವ ಜಿಲ್ಲೆಯಾಗಿದೆ. ಮನೋಹರವಾದ ಪ್ರಾಕೃತಿಕ ಸೌಂದರ್ಯ ಆಕರ್ಷಿಸಿರುವುದು ವಿಶೇಷವಾಗಿದೆ ಎಂದರು. ಎತ್ತರದ ಪರ್ವತ ಶ್ರೇಣಿಗಳು, ನದಿ, ತೊರೆ, ಹಳ್ಳ ಕೊಳ್ಳಗಳು, ಕಣಿವೆಗಳು, ಜಲಪಾತಗಳನ್ನು ಕೂಡಿದ್ದ ನಿಸರ್ಗ ರಮಣೀಯ ಪ್ರದೇಶವು ಪಶ್ಚಿಮಘಟ್ಟದಲ್ಲಿ ಕಂಡುಬಂದಿರುವುದು ವಿಶೇಷವೇ ಸರಿ. ಪ್ರವಾಸೋದ್ಯಮವು ಭಾರತದಲ್ಲಿ ಅತೀ ದೊಡ್ಡ ಸೇವಾ ವಲಯವಾಗಿದ್ದು, ರಾಷ್ಟ್ರದ ಜಿಡಿಪಿಗೆ ಪ್ರವಾಸೋದ್ಯಮ ಕೊಡುಗೆಗೆ ಶೇ.6 ರಷ್ಟು, ರಾಜ್ಯದ ಕೊಡುಗೆ ಶೇ.14 ರಷ್ಟು ಅಧಿಕವಾಗಿದೆ. 30 ಲಕ್ಷಕ್ಕೂ ಅಧಿಕ ಉದ್ಯೋಗ ಸೃಷ್ಟಿ ಮಾಡಿರುವುದು ಪ್ರವಾಸೋದ್ಯಮದ ಮಹತ್ವವನ್ನು ಸಾರುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರು ವಿವರಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.