
ಮಡಿಕೇರಿ NEWS DESK ನ.12 : ಮೈಸೂರು ಕಾಫಿ ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಮಾರು 24 ವರ್ಷಗಳ ನಂತರ ಆಡಳಿತ ಮಂಡಳಿಗೆ ಚುನಾವಣೆ ನಡೆಯಿತು. ಉಪಾದ್ಯಕ್ಷರಾಗಿ ಪ್ರಭುದೇವ್ ಆಯ್ಕೆಯಾದರು.
ಅಧಿಕಾರ ಸ್ವೀಕರಿಸಿ ಮತನಾಡಿದ ಎ.ಎಸ್.ಪೊನ್ನಣ್ಣ ಅವರು, ಮೈಸೂರು ಕಾಫಿ ಸಂಸ್ಕರಣ ಕೇಂದ್ರವನ್ನು ಪುನಶ್ಚೇತನಗೊಳಿಸಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ಸದಸ್ಯರ ಬೆಂಬಲ ಕೋರಿದರು. ಸಭೆಯಲ್ಲಿ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ, ಅಡಳಿತಾಧಿಕಾರಿ ರಘು, ಚುನಾವಣಾಧಿಕಾರಿ ರವಿಶಂಕರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.









