Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಮ್ಮತ್ತಿ : ಮಿನಿ ಒಲಿಂಪಿಕ್ಸ್ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಸಲಹೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಮ್ಮತ್ತಿ : ಮಿನಿ ಒಲಿಂಪಿಕ್ಸ್ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ : ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಸಲಹೆ* 

ನವೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ಕೊಡಗು ಜಿಲ್ಲೆಯ ಯುವ ಫುಟ್ಬಾಲ್ ಆಟಗಾರರಿಗೆ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ದೊರೆತಿದ್ದು,  ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಂಡರ್ 14 ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕರಾದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಕರೆ ನೀಡಿದ್ದಾರೆ. ನ.15 ರಿಂದ 18ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟಕ್ಕೆ, ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮೈದಾನದಲ್ಲಿ ನಡೆದ ಮಿನಿ ಒಲಿಂಪಿಕ್ಸ್ ಫುಟ್ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಕೊಡಗು ತಂಡದ ಬಾಲಕ ಮತ್ತು ಬಾಲಕಿಯರ ತಂಡದ ಆಟಗಾರರಿಗೆ ಫುಟ್ಬಾಲ್ ಕಿಟ್ ವಿತರಿಸಿ ಅವರು ಮಾತನಾಡಿದರು. ಕೊಡಗಿನ ಗ್ರಾಮೀಣ ಪ್ರತಿಭೆಗಳಿಗೆ ಬೆಂಗಳೂರಿನ ಆಡಲು ಅವಕಾಶ ದೊರೆತಿರುವುದು ಒಳ್ಳೆಯ ಅವಕಾಶವಾಗಿದ್ದು,ಗ್ರಾಮೀಣ ಭಾಗದಲ್ಲಿ ಆಡಿ ಬೆಳೆದಿರುವ ಯುವ ಆಟಗಾರರಿಗೆ ತಮ್ಮ ಆಟದ ಕೌಶಲಗಳನ್ನು ಬೆಳೆಸಲು ಮಿನಿ ಒಲಿಂಪಿಕ್ಸ್ ಉತ್ತಮ ವೇದಿಕೆಯಾಗಿದೆ. ಕೊಡಗು ತಂಡವನ್ನು ಪ್ರತಿನಿಧಿಸುತ್ತಿರುವ ಆಟಗಾರರು ಉತ್ತಮ ಪ್ರದರ್ಶನ ತೋರುವುದರ ಮೂಲಕ ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಮತ್ತು ಕೊಡಗು ಜಿಲ್ಲೆಗೆ ಉತ್ತಮ ಹೆಸರು ತರಬೇಕು ಎಂದು ಮೋಹನ್ ಅಯ್ಯಪ್ಪ ಹೇಳಿದರು. ಆಟಗಾರರು ಕ್ರೀಡಾಕೂಟದಲ್ಲಿ ಶಿಸ್ತಿನ ವರ್ತಿಸಬೇಕೆಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಉಪಾಧ್ಯಕ್ಷ ಮತ್ತು ಮಿನಿ ಒಲಿಂಪಿಕ್ಸ್ ಕೊಡಗು ಬಾಲಕರ ತಂಡದ ತರಬೇತುದಾರ ಕ್ರಿಸ್ಟೋಫರ್ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಬೆಳೆಯುತ್ತಿರುವ ಯುವ ಫುಟ್ಬಾಲ್ ಆಟಗಾರರನ್ನು ಹುಡುಕಿ ಅವರಿಗೆ  ಉತ್ತಮ ವೇದಿಕೆಯನ್ನು ಮಾಡಿಕೊಡಲು ಜಿಲ್ಲಾ ಫುಟ್ಬಾಲ್ ಸಂಸ್ಥೆ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಇದೀಗ ಮಿನಿ ಒಲಿಂಪಿಕ್ಸ್ ನಲ್ಲಿ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಬಾಲಕ ಮತ್ತು ಬಾಲಕಿಯರ ತಂಡ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.  ಕಳೆದ ಮೂರು ತಿಂಗಳುಗಳಿಂದ ‌ನಿರಂತರವಾಗಿ ಅಭ್ಯಾಸ ಮಾಡುತ್ತಿರುವ ಕೊಡಗಿನ ತಂಡದ ಆಟಗಾರರು ಬೆಂಗಳೂರಿನಲ್ಲಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ಹೊಂದಿದ್ದೇವೆ. ಅದಲ್ಲದೇ ಆಟಗಾರರು ಪೋಷಕರು ಕೂಡ ನಮ್ಮೊಂದಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿರುವುದು ಶ್ಲಾಘನೀಯ ವಿಷಯ ಎಂದು ಕ್ರಿಸ್ಟೋಫರ್ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾ ಫುಟ್ಬಾಲ್ ‌ಸಂಸ್ಥೆಯ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ,  ಕೊಡಗಿನ ಅಂಡರ್ 14 ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಮಿನಿ ಒಲಿಂಪಿಕ್ಸ್ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ. ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯನ್ನು ಮಿನಿ ಒಲಿಂಪಿಕ್ಸ್ ನಲ್ಲಿ ಪ್ರತಿನಿಧಿಸುತ್ತಿರುವ ಆಟಗಾರರಿಗೆ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಸಂಪೂರ್ಣ ಕಿಟ್ ಮತ್ತು ಎಲ್ಲಾ ವ್ಯವಸ್ಥೆಗಳನ್ನು ಉಚಿತವಾಗಿ ಮಾಡಲಾಗಿದೆ ಎಂದರು. ಕಾರ್ಯಕ್ರಮವನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ ನಾಗೇಶ್ ನಿರೂಪಿಸಿ,ಸದಸ್ಯ ಮಹೇಂದ್ರ ಸ್ವಾಗತಿಸಿದರು. ಈ ಸಂದರ್ಭ ರಾಜ್ಯ ಫುಟ್ಬಾಲ್ ಸಂಸ್ಥೆಯ ಸದಸ್ಯ ಜಗದೀಶ್ ಕೊಡಗರಹಳ್ಳಿ,ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಖಜಾಂಜಿ ದೀಪು ಮಾಚಯ್ಯ, ರಾಜ್ಯ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರ ಇಸ್ಮಾಯಿಲ್ ಕಂಡಕರೆ, ವಿಜು ಅಮ್ಮತ್ತಿ ಮತ್ತು ಲೋಹಿತ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.