Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಂದಚೇರಿ ಚೆಟ್ಟಿಮಾನಿ ಗ್ರಾಮಸಭೆ : ವಿದ್ಯುತ್ ಉಪಕೇಂದ್ರ ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಂದಚೇರಿ ಚೆಟ್ಟಿಮಾನಿ ಗ್ರಾಮಸಭೆ : ವಿದ್ಯುತ್ ಉಪಕೇಂದ್ರ ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಚರ್ಚೆ*

ನವೆಂಬರ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ಕುಂದಚೇರಿ (ಚೆಟ್ಟಿಮಾನಿ) ಗ್ರಾ.ಪಂ 2024-25ನೇ ಸಾಲಿನ ಗ್ರಾಮಸಭೆ ಚೆಟ್ಟಿಮಾನಿ ಸಮುದಾಯ ಭವನದಲ್ಲಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. 66/11 ಕೆವಿ ವಿದ್ಯುತ್ ಉಪಕೇಂದ್ರದ ಅಗತ್ಯತೆ ಮತ್ತು ಮೂಲಭೂತ ಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪಂಚಾಯಿತಿ ಸದಸ್ಯ ಹ್ಯಾರೀಸ್ ಮಾತನಾಡಿ, ಪದಕಲ್ಲು ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಿಗೆ ಪಂಚಾಯ್ತಿ ಜಾಗ ಮಂಜೂರಾಗಿದೆ, ಸೋಲಾರ್ ಪ್ಲಾಂಟ್ ಗೆ ಜಾಗದ ಅವಶ್ಯಕತೆ ಇದೆ. ಆದರೆ ಪಂಚಾಯ್ತಿಗೆ ಸೇರಿದ ಜಾಗವನ್ನು ಇತ್ತೀಚೆಗೆ ಹೊರಗಿನ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ, ಶಾಸಕರು ಕೂಡ ಸೂಚನೆ ನೀಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಗ್ರಾಮಸ್ಥ ದಬ್ಬಡ್ಕ ಶ್ರೀದರ್ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಯ ಜಾಗವನ್ನು ಈ ಭಾಗದ ಜನರಿಗೆ ಮತ್ತು ಇಲಾಖೆಗೆ ಮೀಸಲಿಡಬೇಕೆ ಹೊರತು ಹೊರಗಿನವರಿಗೆ ನೀಡಬಾರದು. ತಕ್ಷಣ ಸರ್ವೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಕಂದಾಯ ನಿರೀಕ್ಷಕ ಶಿವಕುಮಾರ್ ಅವರು ಇದಕ್ಕೆ ಒಪ್ಪಿಗೆ ಸೂಚಿಸಿದರು. ಹೆಚ್.ಮಧು ಮಾತನಾಡಿ, ಪದಕಲ್ಲು ಗ್ರಾಮದಲ್ಲಿ 33/11 ಕೆ.ವಿ ವಿದ್ಯುತ್ ಉಪಕೇಂದ್ರಕ್ಕೆ 3 ಏಕರೆ ಜಾಗ ಮಂಜೂರಾಗಿದೆ. ಈ ಸಾಮಥ್ರ್ಯದ ವಿದ್ಯುತ್ ಉಪಕೇಂದ್ರದಿಂದ ಭವಿಷ್ಯದಲ್ಲಿ ಗ್ರಾಮದ ಜನರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ, ಸಾಮಥ್ರ್ಯವನ್ನು ಹೆಚ್ಚಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಸದಸ್ಯ ಹ್ಯಾರೀಸ್, ಈಗಾಗಲೇ ಈ ಬಗ್ಗೆ ಕೆಪಿಟಿಸಿಎಲ್ ನ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ, ಶಾಸಕರ ಗಮನಕ್ಕೂ ತರಲಾಗಿದೆ. ಹೋಬಳಿ ಮಟ್ಟದ 6 ಗ್ರಾ.ಪಂ, ಪಕ್ಕದ ಹೋಬಳಿಯ 4 ಗ್ರಾ.ಪಂ ಸೇರಿ ಒಟ್ಟು 10 ಪಂಚಾಯಿತಿಯ 40,000 ಜನಸಂಖ್ಯೆಗೆ ಅನುಕೂಲವಾಗಬೇಕಾದರೆ 66/11 ಕೆವಿ ಉಪಕೇಂದ್ರದ ಅಗತ್ಯವಿದೆ ಎಂದರು. ಜಲಜೀವನ್ ಮಿಷನ್ ಯೋಜನೆ ಕುರಿತು ಚರ್ಚಿಸಿ ತಕ್ಷಣ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಹೊಸ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುಚ್ಛಕ್ತಿ ಒದಗಿಸಬೇಕೆಂದು ಗ್ರಾಮಸ್ಥರಾದ ಕೀರ್ತಿಕುಮಾರ್, ದಬ್ಬಡ್ಕ ಶ್ರೀಧರ್, ಮಂಗೇರಿರ ಜಗದೀಶ್, ಶರತ್, ರಘು ಒತ್ತಾಯಿಸಿದರು. ಇದಕ್ಕೆ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್, ನೋಡಲ್ ಅಧಿಕಾರಿಯಾಗಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕಿರಿಯ ಅಭಿಯಂತರರು ಹಾಗೂ ಸೆಸ್ಕ್ ಶಾಖಾಧಿಕಾರಿ ಒಪ್ಪಿಗೆ ಸೂಚಿಸಿದರು. ನೂತನ ಮನೆ ನಿರ್ಮಾಣಕ್ಕೆ ಇರುವ ಮಾನದಂಡಗಳ ಬಗ್ಗೆ ಪಿಡಿಓ ಯಾದವ್ ಸಭೆಗೆ ಮಾಹಿತಿ ನೀಡಿದರು. ಕೃಷಿ ಇಲಾಖೆ, ವಿದ್ಯುತ್ ಇಲಾಖೆ, ಜಿ.ಪಂ ಇಂಜಿನಿಯರಿಂಗ್ ಇಲಾಖೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅಂಗನವಾಡಿ, ಆಶಾ ಮತ್ತಿತರ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮಾಹಿತಿಯನ್ನು ಸಭೆಗೆ ಒಪ್ಪಿಸಿದರು. ಉಪಾಧ್ಯಕ್ಷರಾದ ಹೆಚ್.ಬೇಬಿ ಹಾಗೂ ಸದಸ್ಯರುಗಳು ಗ್ರಾಮಸ್ಥರಿಗೆ ಅಗತ್ಯ ಮಾಹಿತಿ ನೀಡಿದರು. ಇದೇ ಸಂದರ್ಭ ಗ್ರಾಮಸ್ಥರಿಂದ ವಿವಿಧ ಯೋಜನೆಗಳಿಗೆ ಅರ್ಜಿ ಸ್ವೀಕರಿಸಲಾಯಿತು. ಅಭಿವೃದ್ಧಿ ಅಧಿಕಾರಿ ಯಾದವ್ ಸ್ವಾಗತಿಸಿ, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.