Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*
  • *ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*
  • *ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*
  • *ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*
  • *ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*
  • *ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ಮಟ್ಟದ ‘ಯುವ ಸಂಸತ್ ಸ್ಪರ್ಧೆ : 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ಮಟ್ಟದ ‘ಯುವ ಸಂಸತ್ ಸ್ಪರ್ಧೆ : 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ* 

ನವೆಂಬರ್ 13, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.13 NEWS DESK : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ  ಜಿಲ್ಲಾ ಮಟ್ಟದ ‘ಯುವ ಸಂಸತ್ ಸ್ಪರ್ಧೆ ನಡೆಯಿತು. ಕಾವೇರಿ ನದಿ ನೀರು ಹಂಚಿಕೆ ಪರಿಹಾರ ಕಂಡುಕೊಳ್ಳುವುದು. ರಾಷ್ಟ್ರದ ಗಡಿ ಪ್ರದೇಶದಲ್ಲಿ ಹೆಚ್ಚಿನ ರಕ್ಷಣಾ ಕಾರ್ಯಕೈಗೊಂಡು ರಾಷ್ಟ್ರಕ್ಕೆ ನುಸುಳಿ ಬರುವವರನ್ನು ತಡೆಯುವುದು, ಅಂತರರಾಷ್ಟ್ರೀಯ ಸಂಬಂಧವನ್ನು ಮತ್ತಷ್ಟು ಬಲಪಡಿಸುವುದು ಸೇರಿದಂತೆ  ಹಲವು ವಿಚಾರಗಳ ಕುರಿತು ವಿರೋಧ ಪಕ್ಷದಿಂದ  ಪ್ರಶ್ನೆಗಳ ಸುರಿಮಳೆ ಕೇಳಿ ಬಂತು. ಇದಕ್ಕೆ ಆಡಳಿತ ಪಕ್ಷದಿಂದ ಸಮರ್ಪಕ ಉತ್ತರವೂ ದೊರೆಯಿತು. ಭಾರತ ‘ಅಲಿಪ್ತ ನೀತಿ’ ಹೊಂದಿದ್ದು, ಸದಾ ಶಾಂತಿಯನ್ನು ಬಯಸುತ್ತದೆ. ಆ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಸಂಬಂಧವನ್ನು ಬಲಪಡಿಸಲು ಸದಾ ಸನ್ನದ್ಧವಾಗಿದೆ ಎಂಬ ಉತ್ತರ ದೊರೆಯಿತು. ಇಸ್ರೇಲ್ ಮತ್ತು ಹಮಾಸ್, ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಆ ರಾಷ್ಟ್ರದ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ. ಆ ನಿಟ್ಟಿನಲ್ಲಿ ಭಾರತ ಸದಾ ಶಾಂತಿಯನ್ನು ಬಯಸುತ್ತದೆ ಎಂದು ಆಡಳಿತ ಪಕ್ಷದಿಂದ ಉತ್ತರ ದೊರೆಯಿತು. ನೋಟು ಅಮಾನ್ಯಕರಣ ಮಾಡಿದರೂ ಕಪ್ಪುಹಣ ಸಂಗ್ರಹ ಕಡಿಮೆಯಾಗಿಲ್ಲ. ಕಪ್ಪುಹಣ ಸಂಗ್ರಹ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದಿಂದ ಕೇಳಿ ಬಂದಿತ್ತು. ಏಕರೂಪ ನಾಗರಿಕ ಸಂಹಿತೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವೇ ಎಂಬ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು ಎಂದು ಯುವ ಸಂಸತ್ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದವರಿಂದ ಕೇಳಿ ಬಂದಿತು. ‘ಇದಕ್ಕೆ ಆಡಳಿತ ಪಕ್ಷದವರು ಸಮರ್ಪಕ ಉತ್ತರ ನೀಡಿದರು. ರಾಷ್ಟ್ರದ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಏಕರೂಪ ಕಾನೂನುಗಳು ಜಾರಿಯಾಗಬೇಕು, ಸಮಾಜ ನಿಂತ ನೀರು ಆಗದೆ, ಹರಿಯುವ ನೀರು ಆಗಬೇಕು. ಆ ದಿಸೆಯಲ್ಲಿ ಬದಲಾವಣೆಯತ್ತ ಮುನ್ನೆಡೆಯಬೇಕು ಎಂಬ ಅಂಶ ಆಡಳಿತ ಪಕ್ಷದವರಿಂದ ಬಂದಿತು.’ ರಾಷ್ಟ್ರದ ಅಭಿವೃದ್ಧಿಗೆ ಎಲ್ಲರೂ ಒಳಗೊಳ್ಳುವುದು ಅತೀ ಮುಖ್ಯ. ಆ ನಿಟ್ಟಿನಲ್ಲಿ ಆಡಳಿತ ಪಕ್ಷ ಸದಾ ಪ್ರಯತ್ನಿಸಿದೆ. ರಕ್ಷಣೆ, ಗೃಹ, ವಿದೇಶಾಂಗ ವ್ಯವಹಾರ, ವ್ಯಾಪಾರ ಮತ್ತು ವಾಣಿಜ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆಗೆ ಕ್ರಮವಹಿಸಲಾಗಿದೆ ಎಂಬ ಉತ್ತರ ಆಡಳಿತ ಪಕ್ಷದಿಂದ ದೊರೆಯಿತು. ಹಾಗೆಯೇ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಗ್ಗೆಯೂ ಸಹ ಚರ್ಚೆಗಳು ನಡೆಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷದಷ್ಟೇ ಮಹತ್ವ ವಿರೋಧ ಪಕ್ಷಕ್ಕೂ ಇದೆ. ಆಡಳಿತ ಪಕ್ಷ ತಪ್ಪು ಮಾಡಿದರೆ ಸರಿ ದಾರಿಗೆ ತರುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ ಎಂಬುವುದು ವಿದ್ಯಾರ್ಥಿಗಳಿಂದ ಕೇಳಿ ಬಂದಿತು. ಮಡಿಕೇರಿಯ ಸರ್ಕಾರಿ ಪಿಯು ಕಾಲೇಜಿನ ಶಕುಂತಲಾ ಅವರು ಸಭಾಧ್ಯಕ್ಷತೆ ವಹಿಸಿದ್ದರು. ತಿತಿಮತಿ ಸರ್ಕಾರಿ ಪಿಯು ಕಾಲೇಜಿನ ವಿನಯ ಕುಮಾರ, ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜಿನ ಅನ್ಸಿಕಾ, ಸೋಮವಾರಪೇಟೆಯ ಪಿಯು ಕಾಲೇಜಿನ ಅಮೃತ್, ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಪ್ರೀತಂ, ಮೂರ್ನಾಡು ಪಿಯು ಕಾಲೇಜಿನ ಅನನ್ಯ ದೇವೇಂದ್ರ ನಾಯಕ್, ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿನ ರಾಣಿ, ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಡಿಂಪಲ್, ಸೋಮವಾರಪೇಟೆ ಪಿಯು ಕಾಲೇಜಿನ ಇಮ್ರಾನ್, ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನ ಶ್ರೀನಿವಾಸ ಇತರರು ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸುಮಾರು 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವ ಸಂಸತ್‍ನಲ್ಲಿ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಭಾರತವು ವಿಶ್ವದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ಹೊಂದಿದ್ದು, ಕೇಂದ್ರದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ, ಹಾಗೆಯೇ ರಾಜ್ಯದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಒಳಗೊಂಡಿದ್ದು, ಪ್ರಜಾಪ್ರಭುತ್ವ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವಂತಾಗಬೇಕು ಎಂದರು. ‘ಜನ ಪ್ರತಿನಿಧಿಗಳು ಜನಸಾಮಾನ್ಯರ ಸೇವಕರಾಗಿದ್ದು, ತಮ್ಮ ಸ್ಥಳೀಯ ಸಮಸ್ಯೆಗಳ ಬಗ್ಗೆ ಸದನದಲ್ಲಿ ಬೆಳಕು ಚೆಲ್ಲಿ ಪರಿಣಾಮಕಾರಿ ಕಾರ್ಯಕ್ರಮ ರೂಪಿಸುವುದು ಪ್ರಜಾಪ್ರಭುತ್ವದ ಮೈಲುಗಲ್ಲಾಗಿದೆ ಎಂದು ಹೇಳಿದರು.’ ಸುಗಮ ಹಾಗೂ ಸುಭದ್ರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ತೆಗೆದುಕೊಂಡು ಹೋಗುವಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ವೀಣಾ ಅಚ್ಚಯ್ಯ ಅವರು ಹೇಳಿದರು. ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ಪಿ.ಎಂ.ದೇವಕಿ ಅವರು ಮಾತನಾಡಿ ರಾಷ್ಟ್ರದ ಅಭಿವೃದ್ಧಿಯಲ್ಲಿ ಪ್ರಜಾಪ್ರಭುತ್ವದ ಪಾತ್ರ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ರಾಜಕೀಯ ವಿಜ್ಞಾನವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಜೊತೆಗೆ ಉತ್ತಮ ನಾಯಕತ್ವ ಬೆಳೆಸಿಕೊಳ್ಳುವಂತಾಗಬೇಕು ಎಂದು ಒತ್ತಿ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಮಂಜುಳಾ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ಬಗ್ಗೆ ಅರಿವು ಇರಬೇಕು. ಕೃಷಿ, ಆರೋಗ್ಯ, ಶಿಕ್ಷಣ, ರಕ್ಷಣೆ, ವಿದೇಶಾಂಗ ವ್ಯವಹಾರ ಹೀಗೆ ಪ್ರತಿಯೊಂದರ ಬಗ್ಗೆಯೂ ಅರಿವು ಇರಬೇಕು ಎಂದರು. ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು, ಅವಕಾಶ ಕಲ್ಪಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಯುವ ಸಂಸತ್‍ನ್ನು ಆಯೋಜಿಸಲು ಸರ್ಕಾರ ಅವಕಾಶ ಮಾಡಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಮಾತನಾಡಿ ಇಡೀ ವಿಶ್ವದಲ್ಲಿ ಮಾದರಿ ಪ್ರಜಾಪ್ರಭುತ್ವವನ್ನು ರಾಷ್ಟ್ರ ಹೊಂದಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿದುಕೊಳ್ಳುವಂತಾಗಬೇಕು ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಚಿದಾನಂದ ಅವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಕಾರ್ಯ ಕಲಾಪಗಳ ಬಗ್ಗೆ ಮಾಹಿತಿ ನೀಡಿ, ಸಭಾಧ್ಯಕ್ಷರ ಕಾರ್ಯ ನಿರ್ವಹಣೆ, ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಗಮನ ಸೆಳೆಯುವ ಸೂಚನೆಗಳು, ಶಾಸನ ರಚನೆ ಹಾಗೂ ವಿಧೇಯಕಗಳ ಮಂಡನೆ ಮತ್ತಿತರ ವಿಚಾರಗಳ ಕುರಿತು ವಿವರಿಸಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರಾ ಮೈನಾ, ಸಂತ ಮೈಕಲರ ಶಾಲೆಯ ಪ್ರಾಂಶುಪಾಲರಾದ ಸುಮಂತ್ ಕೆ.ಎಸ್., ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಉದಯ್ ಕುಮಾರ್ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೆಚ್ಚುವರಿ ಅನುದಾನಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕಾವೇರಮ್ಮೆ ಕೊಡವ ಅಮ್ಮ ಕೊಡವ ಚಾರಿಟೇಬಲ್ ಟ್ರಸ್ಟ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರೈನ್‌ಕೋಟ್, ಪುಸ್ತಕ ವಿತರಣೆ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, ಆ.18 NEWS DESK : ವಿರಾಜಪೇಟೆಯ ಮಗ್ಗುಲದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ‘ಎಲ್‌ಎಸ್‌ಎ ಕೇರ್ಸ್’…

*ಆದರ್ಶ ಸೇವಾ ರತ್ನ ಪ್ರಶಸ್ತಿ ಪ್ರದಾನ : ಕಲೆ, ಸಂಸ್ಕೃತಿಯ ಅನಾವರಣಕ್ಕೆ ಸಾಹಿತ್ಯ ಪರಿಷತ್ತು ವೇದಿಕೆಯಾಗಿದೆ : ಡಾ.ರಘುನಾಥ್ ಬಿ.ಎನ್*

ಆಗಷ್ಟ್ 18, 2026

*ಸಮಾಜ ವಿಜ್ಞಾನ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ*

ಆಗಷ್ಟ್ 18, 2026

*ಕಾಡಾನೆ ಹಾವಳಿ ತಡೆಗೆ ಒತ್ತಾಯ : ಸುಂಟಿಕೊಪ್ಪ ರೈತ ಸಂಘದಿಂದ ಪ್ರತಿಭಟನೆ*

ಆಗಷ್ಟ್ 18, 2026

*ಪೊನ್ನಂಪೇಟೆಯಲ್ಲಿ ಮಿನಿ ಉದ್ಯೋಗ ಮೇಳ : ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ದುಡಿಮೆಯ ದಾರಿ : ಸಿ.ಎಸ್.ಸಂಜನಾ*

ಆಗಷ್ಟ್ 18, 2026

*ಮಾನವ–ಪ್ರಾಣಿ ಸಂಘರ್ಷ, ಜಮ್ಮಾಮಲೆ ಸಮಸ್ಯೆ : ಅರಣ್ಯ ಸಚಿವರೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಚರ್ಚೆ*

ಆಗಷ್ಟ್ 18, 2026

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.