
ಮಡಿಕೇರಿ NEWS DESK ನ.13 : ರೈತರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಆಲೂರು ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ ಹೊಸಗುತ್ತಿ ಗ್ರಾಮದಲ್ಲಿ ಘಟನೆ. ಮಜೀದ್(45) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ರೈತ. ಬುಧವಾರ ತಮ್ಮ ಮನೆಯಲ್ಲಿ ತಮ್ಮದೇ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಾಲಬಾಧೆ ಎಂದು ಹೇಳಲಾಗುತ್ತಿದೆಯಾದರೂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.








