Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪಲಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪಲಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*

ನವೆಂಬರ್ 14, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿರಾಜಪೇಟೆ ತಾಲೂಕು, ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ , ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್, ವಿರಾಜಪೇಟೆ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಡಾ  ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ.ಹೇಮಾವತಿ ವಿ.ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ  ಎಂಬ ವಿಷಯದ ಕುರಿತು ಜಾಗೃತಿ ಹಾಗೂ ಅರಿವು ಮೂಡಿಸುವ ” ಸ್ವಾಸ್ಥ್ಯ ಸಂಕಲ್ಪ ” ಕಾರ್ಯಕ್ರಮ ನಡೆಯಿತು. ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಉಪ ಪ್ರಾಂಶುಪಾಲರಾದ ಎಂ.ಕೆ.ಪದ್ಮಾ, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ. ವಿದ್ಯಾರ್ಥಿಗಳೇ ಉತ್ತಮ ಸಮಾಜದ ಆಸ್ತಿ ಎಂದು ಹೇಳಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ್ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ 17,548 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 20 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದಾರೆ ಎಂದರು. ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1883 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 50 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ. ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣಹೊಂದಿದ್ದಾರೆ. 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ ಎಂದರು. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು ವಿದ್ಯಾರ್ಥಿಗಳ ವಯಸ್ಸು ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ. ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ. ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ. ಸಮಾಜದಲ್ಲಿ ವ್ಯಸನಕ್ಕೆ ಬಲಿ ಬಿದ್ದವರಿಗೆ ಅಪಘಾತ, ಆತ್ಮಹತ್ಯೆ ಮತ್ತು ಅಕಾಲಿಕ ಮರಣ ಇವುಗಳು ಸರ್ವೇ ಸಾಮಾನ್ಯ ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು ಎಂದು ಹೇಳಿದರು. ದೃಢ ನಿರ್ಧಾರ, ಸಂಧಾನ ಕೌಶಲ್ಯ, ರಚನಾತ್ಮಕ ಚಿಂತನೆ, ವಿಮರ್ಶಾತ್ಮಕ ಚಿಂತನೆ, ಸಂವಹನ ಕುಶಲತೆ ವ್ಯಕ್ತಿ – ವ್ಯಕ್ತಿ ಸಂಬಂಧ, ಸಮಯ ಪಾಲನೆ, ನಡತೆ, ಗೌರವ, ಆತ್ಮಸ್ಥೈರ್ಯ, ಸಮಸ್ಯಾ ಪರಿಹಾರ, ಪರಾನುಭೂತಿ, ದೃಢ ನಿಲುವು, ಭಾವ ನಿಯಂತ್ರಣ, ಧನಾತ್ಮಕ ಚಿಂತನೆ, ಕರ್ತವ್ಯ ಪ್ರಜ್ಞೆ, ಮತ್ತು ಪ್ರೀತಿ ವಿಶ್ವಾಸಗಳಿಂದ ಮಾತ್ರ ವ್ಯಸನ ಮುಕ್ತ ಜೀವನವನ್ನು ನಡೆಸಲು ಸಾಧ್ಯ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ. ಅನಾರೋಗ್ಯವಂತ ಶರೀರವೇ ಆತ್ಮದ ಸೆರೆಮನೆ. ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದ ಅವರು,  ಬಹುತೇಕ ಯುವಜನತೆ ಬಾಹ್ಯ ವ್ಯಕ್ತಿಗಳ ಪ್ರಭಾವದಿಂದ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ   ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್  ವಿರಾಜಪೇಟೆ ತಾಲೂಕು ಕ್ಷೇತ್ರ ಯೋಜನಾಧಿಕಾರಿ ದಿನೇಶ್, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಜೆಸಿಂತಾ, ಕಾಲೇಜಿನ ಛಾಯಾಗ್ರಾಹಕ ಚೆನ್ನಾ ನಾಯಕ್, ಸಿಬ್ಬಂದಿ ವರ್ಗ ಮತ್ತು ಸೇವಾ ಪ್ರತಿನಿಧಿಗಳು ಹಾಜರಿದ್ದರು. ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ 80 ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾಲೇಜಿನ ಉಪನ್ಯಾಸಕ ಚೇತನ್ ಚಿಣ್ಣಪ್ಪ ಸ್ವಾಗತಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೆ.ಎಂ ಕುಸುಮ ನಿರೂಪಿಸಿದರು. ಗೋಣಿಕೊಪ್ಪಲು ವಲಯದ ಮೇಲ್ವಿಚಾರಕ ನಿತಿನ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.