Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
  • *ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*
  • *ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಹಕಾರ ಸಪ್ತಾಹ : ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಶ್ರಮಿಸಿ : ಎಂ.ಸಿ.ನಾಣಯ್ಯ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಹಕಾರ ಸಪ್ತಾಹ : ಸಹಕಾರ ಸಂಘಗಳ ಬಲವರ್ಧನೆಗೆ ಮತ್ತಷ್ಟು ಶ್ರಮಿಸಿ : ಎಂ.ಸಿ.ನಾಣಯ್ಯ ಸಲಹೆ*

ನವೆಂಬರ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.14 NEWS DESK : ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ ನಂತರ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸಹಕಾರ ಕ್ಷೇತ್ರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇರಬಾರದು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದ್ದಲ್ಲಿ ಸಹಕಾರ ಸಂಘಗಳ ಬಲವರ್ಧನೆ ಸಾಧ್ಯ ಎಂದರು.’ ಸಹಕಾರ ಸಂಘಗಳಿಗೆ ದೇಶದಲ್ಲಿ ತಮ್ಮದೇ ಆದ ಸ್ಥಾನವಿದ್ದು, ಸಂಪತ್ತನ್ನು ಎಲ್ಲರೂ ಹಂಚಿಕೊಂಡು ಸಮಾನವಾಗಿ ಬದುಕುವುದು ಸಹಕಾರದ ಧ್ಯೇಯೋದ್ದೇಶವಾಗಿದೆ ಎಂದು ಎಂ.ಸಿ.ನಾಣಯ್ಯ ತಿಳಿಸಿದರು. ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಇದ್ದಲ್ಲಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಸಹಕಾರ ಸಂಘದಲ್ಲಿ ಲಕ್ಷಾಂತರ ಜನರು ಸದಸ್ಯತ್ವವನ್ನು ಹೊಂದಿದ್ದಾರೆ. ಸಹಕಾರ ಕ್ಷೇತ್ರಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಬೇಕು. ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು ಎಂದರು. ರಾಜ್ಯದಲ್ಲಿ 21 ಕೇಂದ್ರ ಸಹಕಾರ ಬ್ಯಾಂಕುಗಳು ಇದ್ದು, ಕೊಡಗು ಜಿಲ್ಲೆಯ ಸಹಕಾರ ಬ್ಯಾಂಕು ಅತ್ಯುತ್ತಮವಾಗಿ ಆರ್ಥಿಕ ಚಟುವಟಿಕೆ ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಎಂ.ಸಿ.ನಾಣಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ಮಾತನಾಡಿ 71 ನೇ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಕೊಡಗು ಡಿಸಿಸಿ ಬ್ಯಾಂಕ್ ವತಿಯಿಂದ 3 ರಿಂದ 5 ಲಕ್ಷ ರೂ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿಕರಿಗೆ ಸಾಲ ನೀಡಲಾಗುತ್ತಿದ್ದು, ಕೃಷಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು. ಸಹಕಾರ ಕಾಯ್ದೆ ತಿದ್ದುಪಡಿಯಿಂದ ಸಹಕಾರ ಸಂಘಗಳ ಬೆಳವಣಿಗೆ ಕಷ್ಟಸಾಧ್ಯ. ನೂತನ ಸಹಕಾರ ಕಾಯ್ದೆ ಜಾರಿಗೊಂಡಲ್ಲಿ ಸಹಕಾರ ಸಂಘಗಳು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಸಹಕಾರ ಸಂಘಗಳು ಸಮರ್ಥವಾಗಿ ಬೆಳೆಯುವಲ್ಲಿ ಅವಕಾಶ ಮಾಡಬೇಕು. ಸಹಕಾರ ಸಂಘಗಳು ವಿಕೇಂದ್ರೀಕರಣ ಆಗಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿದರೂ ಸಹ, ಸಹಕಾರಿಗಳಿಂದ ಒಂದು ಸಹಕಾರಿ ಸಂಸ್ಥೆ ಬೆಳೆಯುತ್ತದೆ ಎಂಬುದನ್ನು ಮನಗಾನಬೇಕು. ಪಂಚಾಯತ್ ರಾಜ್ ವ್ಯವಸ್ಥೆಗೂ, ಸಹಕಾರ ಸಂಘಗಳ ವ್ಯವಸ್ಥೆಗೂ ಬಹಳ ವ್ಯತ್ಯಾಸವಿದೆ. ಆದ್ದರಿಂದ ಈ ಬಗ್ಗೆ ಯೋಚಿಸಬೇಕು ಎಂದರು. ಕೊಡಗಿನ ಸಹಕಾರ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆ. ನಬಾರ್ಡ್ ಮೂಲಕ ಬರುವ ಸಾಲ ಸೌಲಭ್ಯ ಕಡಿಮೆಯಾಗಿರುವುದರಿಂದ ಕೃಷಿಕರಿಗೆ ಸಾಲ ಸೌಲಭ್ಯ ಒದಗಿಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ನಮ್ಮ ಪಾಲನ್ನು ಬಿಡುಗಡೆ ಮಾಡಬೇಕು ಎಂದರು. ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ಅವರು ಮಾತನಾಡಿ ಸಹಕಾರ ಸಪ್ತಾಹದಲ್ಲಿ ಸಹಕಾರ ಸಂಘಗಳ ಪ್ರಗತಿ ಬಗ್ಗೆ ವಿಮರ್ಶೆಗಳು ನಡೆಯಬೇಕು ಎಂದು ಹೇಳಿದರು. ಸಹಕಾರ ಚಳುವಳಿಯನ್ನು ಬಲಪಡಿಸಿ ಸಾಮೂಹಿಕ ಪ್ರಯತ್ನದಿಂದ ಪ್ರಗತಿ ಸಾಧಿಸುವುದು ಸಹಕಾರದ ತತ್ವವಾಗಿದೆ. ಸಹಕಾರ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಸಾಕಷ್ಟು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶ್ಯಾಮಲ ಹೇಳಿದರು. ಸಹಕಾರ ಕ್ಷೇತ್ರದಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ ಹೀಗೆ ವಿವಿಧ ರೀತಿಯ ಉದ್ಯೋಗಾವಕಾಶಗಳು ದೊರೆಯಲಿವೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರ ಬಲಪಡಿಸಲು ಮುಂದಾಗಬೇಕಿದೆ. ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಸುಧಾರಿಸಬೇಕು. ಮೂಲ ಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು. ‘ಸಮಗ್ರ ಗ್ರಾಮೀಣ ಅಭಿವೃದ್ಧಿ ಸಾಧಿಸುವುದೇ ಸಹಕಾರ ಕ್ಷೇತ್ರದ ಮೂಲ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ವೃತ್ತಿಪರತೆ, ಪಾರದರ್ಶಕತೆ ಕಾಪಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎಂದು ಅವರು ತಿಳಿಸಿದರು.’ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಹೊಟ್ಟೆಂಗಡ ಎಂ.ರಮೇಶ್, ಹೊಸೂರು ಸತೀಶ್ ಕುಮಾರ್, ಕೆ.ಅರುಣ್ ಭೀಮಯ್ಯ, ಕಾಂಗೀರ ಎನ್.ಸತೀಶ್, ಪೂಳಂಡ ಪಿ.ಪೆಮ್ಮಯ್ಯ, ಎಚ್.ಕೆ.ಮಾದಪ್ಪ, ಎಸ್.ಸಿ.ಶರತ್‍ಶೇಖರ್, ಶರವಣ ಕುಮಾರ್ ಟಿ.ಆರ್., ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಜಲಜಾ ಶೇಖರ್, ವೃತ್ತಿಪರ ನಿರ್ದೇಶಕರಾದ ಮುಂಡಂಡ ಸಿ.ನಾಣಯ್ಯ, ಡಿಸಿಸಿ ಬ್ಯಾಂಕಿನ ಸಿಇಒ ಪ್ರವೀಣ್ ಬಿ ನಾಯಕ್, ಪ್ರಧಾನ ವ್ಯವಸ್ಥಾಪಕಿ ಬೋಜಮ್ಮ ಜಿ.ಎಂ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಸೆ. 9: ಕೊಡಗಿನಲ್ಲಿ ಗದ್ಯ ಹಾಗೂ ಕಾವ್ಯ ರಚನೆಯ ಮೂಲಕ ಸಾಹಿತ್ಯ ಕೃಷಿ ಮಾಡಿರುವ ತ್ರಿಭಾಷಾ…

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026

*ಸೋಮವಾರಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ : ರೋಗಿಗಳ ಪಾಲಿಗೆ ತಜ್ಞರ ಸೇವೆ ಮರೀಚಿಕೆ*

ಸೆಪ್ಟೆಂಬರ್ 9, 2026

*ಮೂರ್ನಾಡಿನಲ್ಲಿ 102ನೇ ವರ್ಷದ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.