Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ : ವಿದ್ಯಾರ್ಥಿಗಳು ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ : ಎಸ್ಪಿ ಕೆ.ರಾಮರಾಜನ್*

ನವೆಂಬರ್ 15, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.15 NEWS DESK : ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ಶತತ ಪ್ರಯತ್ನ ಮತ್ತು ಪೂರ್ವ ಸಿದ್ಧತೆ ಅತ್ಯಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರತಿಪಾದಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಾಂಸ್ಕೃತಿಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಶಿಸ್ತು, ಶ್ರದ್ಧೆ ಮತ್ತು ಸಮಯಪ್ರಜ್ಞೆ ಅತೀಮುಖ್ಯ. ಆದ್ದರಿಂದ ಇವುಗಳನ್ನು ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವತ್ತ ಗಮನಹರಿಸಬೇಕು ಎಂದು ಕೆ.ರಾಮರಾಜನ್ ಸಲಹೆ ನೀಡಿದರು. ಇಂದಿನ ಆಧುನಿಕ ಯುಗದಲ್ಲಿ ಅವಕಾಶಗಳು ಬಹಳಷ್ಟು ಇದ್ದು, ಅವುಗಳನ್ನು ಇಚ್ಛಾಶಕ್ತಿಯಿಂದ ಬಳಸಿಕೊಳ್ಳಬೇಕು. ಆ ದಿಸೆಯಲ್ಲಿ ಗುರಿ ಮತ್ತು ಉದ್ದೇಶ ಇರಬೇಕು ಎಂದರು. ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಳ್ಳಬೇಕು. ಸತತ ಪ್ರಯತ್ನ ಇದ್ದಲ್ಲಿ ಪ್ರಶಸ್ತಿ ಹಾಗೂ ಉದ್ಯೋಗ ದೊರೆಯಲಿದೆ. ಯುವ ವಯಸ್ಸಿನಲ್ಲಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಒಳ್ಳೆಯ ಗುಣಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಸಾಮಾನ್ಯ ಜ್ಞಾನ ಇರಬೇಕು. ಪ್ರಶಸ್ತಿ ಬೇಕಿದ್ದಲ್ಲಿ ಪ್ರಯತ್ನ ಅಗತ್ಯ. ಆ ನಿಟ್ಟಿನಲ್ಲಿ ಆಸಕ್ತಿ ಇರುವ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು ಯಶಸ್ಸುಗಳಿಸುವತ್ತ ಮುನ್ನಡೆಯಬೇಕು. ಪರಿಶ್ರಮ ಇದ್ದಲ್ಲಿ ಯಶಸ್ಸು ದೊರೆಯುತ್ತದೆ. ಆ ನಿಟ್ಟಿನಲ್ಲಿ ಯುವ ವಯಸ್ಸಿನಲ್ಲಿ ಮೌಲ್ಯಯುತ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಮಂಜುಳಾ ಅವರು ಮಾತನಾಡಿ ಈ ಬಾರಿ ಪಿಯು ಪರೀಕ್ಷೆ ವೆಬ್‍ಕಾಸ್ಟಿಂಗ್ ಇರಲಿದ್ದು, ಮಾನಸಿಕವಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧರಾಗಿರಬೇಕು. ಕೊಡಗು ಜಿಲ್ಲೆ ಪಿಯು ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಪಿಯು ಪರೀಕ್ಷೆಗೆ ಇನ್ನು ಮೂರುವರೆ ತಿಂಗಳಿದ್ದು, ಪರೀಕ್ಷೆಯತ್ತ ಗಮನಹರಿಸಬೇಕು ಎಂದು ಹೇಳಿದರು. ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಹಾಗೂ ಕೊಡಗು ಜಿಲ್ಲಾ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಅವರು ಮಾತನಾಡಿ ಪಿಯು ಪರೀಕ್ಷಾ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ. ಇನ್ನೂ ಅತ್ಯುತ್ತಮ ಸ್ಥಾನ ಪಡೆಯಲು ಎಲ್ಲರೂ ಓದಿನ ಕಡೆ ಗಮನಹರಿಸಬೇಕು ಎಂದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ್ ಮಾತನಾಡಿ ಶಿಸ್ತಿನ ಜೊತೆಗೆ ತಾಳ್ಮೆ ಇರಬೇಕು. ಮರಳಿ ಪ್ರಯತ್ನ ಮಾಡಬೇಕು. ದುಶ್ಚಟಗಳಿಂದ ದೂರವಿರಬೇಕು ಎಂದರು. ಜಿಲ್ಲಾ ಮಟ್ಟದ ಯುವ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಸುಮಾರು 450 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ, ಏಕಪಾತ್ರ ಅಭಿನಯ, ಭಾವಗೀತೆ, ಜಾನಪದ ಗೀತೆ, ಚಿತ್ರಕಲೆ, ಭಕ್ತಿಗೀತೆ, ಆಶುಭಾಷಣ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಗಮನ ಸೆಳೆದರು. ಯುವ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. (ಪ್ರಥಮ ಬಹುಮಾನ ರೂ.1,500, ದ್ವಿತೀಯ ರೂ.1,200 ಮತ್ತು ತೃತೀಯ ರೂ.900)
ಉದ್ಘಾಟನೆ :: ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ವಿದ್ಯಾರ್ಥಿಗಳು ಓದಿನ ಜೊತೆಗೆ ಸಾಂಸ್ಕೃತಿಕ, ಕ್ರೀಡೆ ಹೀಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಾಧನೆ ಮಾಡುವತ್ತ ಗಮನಹರಿಸಬೇಕು ಎಂದರು. ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದು, ಅದನ್ನು ಸರಿಯಾಗಿ ಬಳಸಿಕೊಂಡು ಮುನ್ನಡೆಯಬೇಕು. ಯಾವುದೇ ಕಾರಣಕ್ಕೂ ಹಿಂಜರಿಕೆ ಇರಬಾರದು ಎಂದು ವಿನಾಯಕ ನರ್ವಾಡೆ ಅವರು ತಿಳಿಸಿದರು. ಸಮಾಜದಲ್ಲಿ ಕಾಲಕ್ಕೆ ತಕ್ಕಂತೆ ನಾವು ಬದಲಾವಣೆ ಹೊಂದುತ್ತಾ ಸ್ಪರ್ಧೆಯನ್ನು ಎದುರಿಸಿ ಛಲ ಸಾಧಿಸಬೇಕು. ಯಾವುದೇ ಕಾರಣ್ಕೂ ಧೃತಿಗೆಡಬಾರದು ಎಂದು ವಿನಾಯಕ ನರ್ವಾಡೆ ಸಲಹೆ ನೀಡಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದೇರ್ಶಕರಾದ ಕೆ.ಮಂಜುಳಾ ಅವರು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಇಂತಹ ವೇದಿಕೆಗಳನ್ನು ಬಳಸಿಕೊಳ್ಳಬೇಕು. ಶಿಕ್ಷಣವು ಪ್ರತಿಯೊಬ್ಬರ ಸರ್ವತೋಮುಖ ಅಭಿವೃದ್ಧಿಗೆ ಮುನ್ನುಡಿ ಎಂಬುದನ್ನು ಮರೆಯಬಾರದು ಎಂದು ಪ್ರತಿಪಾದಿಸಿದರು. ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು ಹಾಗೂ ಕೊಡಗು ಜಿಲ್ಲೆಯ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಎನ್.ಕೆ.ಜ್ಯೋತಿ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಆರ್.ಪಿ.ಚಂದ್ರಶೇಖರ ಅವರು ಮಾತನಾಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಉಪನ್ಯಾಸಕರಾದ ಚಿದಾನಂದ, ಉಪನ್ಯಾಸಕರು, ವಿದ್ಯಾರ್ಥಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.