Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿ.ಡಿ.ಮಂಜುನಾಥ್ “ಕೊಡಗು ಸಹಕಾರ ರತ್ನ” ಪ್ರಶಸ್ತಿಗೆ ಭಾಜನ : ನ.20 ರಂದು ಸಹಕಾರ ಸಪ್ತಾಹ ಸಮಾರೋಪ, ಪ್ರಶಸ್ತಿ ಪ್ರದಾನ*

ನವೆಂಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.16 NEWS DESK : 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ, “ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ದಿನಾಚರಣೆ ಮತ್ತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ.20 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ ಎಂದರು.
::: ಸಹಕಾರ ರತ್ನ ಪ್ರಶಸ್ತಿ :::
ಈ ಬಾರಿಯ ಕೊಡಗು ಸಹಕಾರ ರತ್ನ ಪ್ರಶಸ್ತಿಗೆ ಬಿ.ಡಿ.ಮಂಜುನಾಥ್, ಶ್ರೇಷ್ಠ ಸಹಕಾರಿಗಳು ಪ್ರಶಸ್ತಿಗೆ ನಂದಿನೆರವಂಡ ಎ.ರವಿ ಬಸಪ್ಪ, ಕಾಯಪಂಡ ಟಾಟಾ ಚಂಗಪ್ಪ, ಪಾಸುರ ಎನ್.ಉತ್ತಪ್ಪ, ಹಾಗೂ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿಗೆ ಮೊಳ್ಳೆರ ಸರಸು ಪೆÇನ್ನಪ್ಪ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ ಮನು ಮುತ್ತಪ್ಪ ಅವರು, ಹಿರಿಯ ಸಹಕಾರಿಗಳು ಹಾಗೂ “ಪದ್ಮಶ್ರೀ” ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರು ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಿದ್ದಾರೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಉಪಾಧ್ಯಕ್ಷ ಪಿ.ಸಿ.ಮನು ರಾಮಚಂದ್ರ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕ ಬಿ.ಎ.ರಮೇಶ್ ಚಂಗಪ್ಪ, ಕೊಡಗು ಜಿಲ್ಲಾ ಸಹಕಾರ ಯುನಿಯನ್ ಹಾಗೂ ಸಹಕಾರ ಕೇಂದ್ರ ಬ್ಯಾಂಕ್‍ನ ನಿದೇಶಕ ಎನ್.ಎಂ.ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೆ.ಎಂ.ತಮ್ಮಯ್ಯ, ಸಿ.ಎಸ್.ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ವಿ.ಎಸ್.ಶ್ಯಾಮ್ ಚಂದ್ರ, ಎನ್.ಎ.ರ್ಯಾಲಿ ಮಾದಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್.ವಿಜಯ್ ಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ ಪಾಲ್ಗೊಳ್ಳಲಿದ್ದು, ಮಡಿಕೇರಿಯ ಕೆ.ಐ.ಸಿ.ಎಂ. ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಕಳೆದ 64 ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಶಸ್ತಿಯನ್ನು ಪಡೆದುಕೊಂಡು ರಾಜ್ಯದ ಎಲ್ಲಾ ಯೂನಿಯನ್ ಗಳಿಗೆ ಮಾದರಿ ಸಂಸ್ಥೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮನು ಮುತ್ತಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಪಟ್ಟಡ ಮನು ರಾಮಚಂದ್ರ, ನಿರ್ದೇಶಕರುಗಳಾದ ಪಿ.ಬಿ.ಯತೀಶ್ ಕುಮಾರ್, ಕೋಡಿರ ಪ್ರಸನ್ನ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.