Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತಿ ಹೆಚ್ಚು ಅಂಕ ಪಡೆದವರಿಗೆ ಸನ್ಮಾನ : ಶಿಕ್ಷಣ ನೀಡಿದ ಸರ್ಕಾರಿ ಶಾಲೆಗೆ ಆದಾಯದ ಒಂದು ಭಾಗ ಮೀಸಲಿಡಿ : ಹೆಚ್.ಎಲ್.ದಿವಾಕರ್ ಕರೆ*

ನವೆಂಬರ್ 16, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.16 NEWS DESK : ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರಿದವರು ತಾವು ವಿದ್ಯೆ ಕಲಿತ ಶಾಲೆಯ ಅಭ್ಯುದಯಕ್ಕಾಗಿ ತಮ್ಮ ಆದಾಯದ ಶೇ.1 ಭಾಗವನ್ನಾದರೂ ಮೀಸಲಿಡಬೇಕೆಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಕರೆ ನೀಡಿದ್ದಾರೆ.
2023-24ನೇ ಸಾಲಿನ ಪರೀಕ್ಷೆಯಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಪ್ರತಿಭಾನ್ವಿತರಾಗಿರುತ್ತಾರೆ. ಶೈಕ್ಷಣಿಕ ಸಾಧನೆಯ ಮೂಲಕ ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಎಷ್ಟೇ ಉನ್ನತ ಸ್ಥಾನಕ್ಕೇರಿದರೂ ತಮಗೆ ವಿದ್ಯೆ ನೀಡಿದ ಶಾಲೆಯನ್ನು ಹಾಗೂ ಶಿಕ್ಷಕರನ್ನು ಮರೆಯದೆ ಗೌರವಿಸಬೇಕು. ತಾವು ಸಂಪಾದಿಸಿದ ಆದಾಯದ ಒಂದು ಭಾಗವನ್ನು ಶಾಲೆಗಾಗಿ ಮೀಸಲಿಟ್ಟರೆ ಶಾಲೆ ಅಭಿವೃದ್ಧಿಯಾಗುವುದಲ್ಲದೆ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ಸಹಕಾರಿಯಾಗಲಿದೆ ಎಂದರು. ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಲು ಶಿಕ್ಷಕರೇ ಮುಖ್ಯ ಕಾರಣ. ಶಿಕ್ಷಕರು ಕಲಿಯುಗದ ದೇವರು, ವಿದ್ಯೆ ನೀಡಿದ ಶಿಕ್ಷಕ ದೇವರ ಸೇವೆ ಮಾಡಲು ದಲಿತ ಸಂಘರ್ಷ ಸಮಿತಿ ಸದಾ ಸಿದ್ಧವಿದೆ. ಕಳೆದ 35 ವರ್ಷಗಳಿಂದ ಶಿಕ್ಷಣಕ್ಕೆ ಆದ್ಯತೆ ನೀಡಿ ಸಂಘಟನೆ ವತಿಯಿಂದ ನಿರಂತರವಾಗಿ ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಹಾಗೂ ಉಪನ್ಯಾಸಕರನ್ನು ಸನ್ಮಾನಿಸುತ್ತಾ ಬರಲಾಗುತ್ತಿದೆ. ಸರ್ಕಾರಿ ಶಾಲೆಗಳು ಶೇ.100ರಷ್ಟು ಗುರಿ ಸಾಧಿಸಬೇಕು, ಆ ಮೂಲಕ ಬಡ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದು ಹೆಚ್.ಎಲ್.ದಿವಾಕರ್ ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಸುಂಟಿಕೊಪ್ಪ ಕೂಬ ಮಸೀದಿ ಅಧ್ಯಕ್ಷ, ಸಮಾಜ ಸೇವಕ ಹೆಚ್.ಯು.ಇಸಾಕ್ ಖಾನ್ ಮಾತನಾಡಿ ವಿದ್ಯಾರ್ಥಿಗಳು ಸಂಪಾದನೆಯ ದೃಷ್ಟಿಯಿಂದ ಮಾತ್ರ ಶಿಕ್ಷಣವನ್ನು ಪಡೆಯಬಾರದು. ಜಾತಿ, ಧರ್ಮ, ಬೇಧ, ಭಾವ ಎಲ್ಲವನ್ನೂ ಮೀರಿ ಮನಷ್ಯತ್ವಕ್ಕೆ ಬೆಲೆ ಕೊಡುವ ಸಮಾಜ ನಿರ್ಮಾಣ ಮಾಡಬೇಕು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಮೂಲ ಉದ್ದೇಶಗಳನ್ನು ಅರ್ಥ ಮಾಡಿಕೊಂಡು ಅವರ ಆಶಯಗಳನ್ನು ಸಾಕಾರಗೊಳಿಸಲು ದೇಶದ ಪ್ರತಿಯೊಬ್ಬರೂ ಮುಂದಾಗಬೇಕು. ಪ್ರತಿಯೊಬ್ಬರಿಗೂ ವಿದ್ಯೆ ಬಹಳ ಮುಖ್ಯ, ಸಮಾಜವನ್ನು ಉತ್ತಮ ರೀತಿಯಲ್ಲಿ ನಿರ್ಮಾಣ ಮಾಡುವುದು ಶಿಕ್ಷಣದ ಮುಖ್ಯ ಉದ್ದೇಶವಾಗಿದೆ. ಮನುಷ್ಯತ್ವ, ಮಾನವ ಮೌಲ್ಯಗಳಿಗೆ ಬೆಲೆ ಕೊಟ್ಟು ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ವೋದಯ ಸಮಿತಿಯ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಲು ಕರೆ ನೀಡಿದರು. ಶೈಕ್ಷಣಿಕ ಜೀವನದಲೇ ಮಹತ್ತರ ಸಾಧನೆ ಮಾಡಿ, ದೇಶದ ಉತ್ತಮ ಪ್ರಜೆಯಾಗಿ ಪೋಷಕರಿಗೆ, ಓದಿದ ಶಾಲೆಗೆ ಕೀರ್ತಿ ತರುವಂತೆ ತಿಳಿಸಿದರು. ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಬಹಳ ಮುಖ್ಯ. ಶಿಸ್ತುಬದ್ಧ ಜೀವನದಿಂದ ಮಾತ್ರ ಸಾಧನೆ ಸಾಧ್ಯ ಎಂದರು. ಸಾಕಷ್ಟು ಕಷ್ಟ, ನೋವುಗಳನ್ನು ಅನುಭವಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಛಲ, ಸಾಧನೆಯ ಮೂಲಕ ಭವ್ಯ ಭಾರತದ ಕನಸನ್ನು ನನಸಾಗಿಸಲು ಪ್ರಯತ್ನಿಸಿದರು. ದೇಶದ ಪ್ರಮುಖ ನಾಯಕರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರು. ಅಂಬೇಡ್ಕರ್ ಅವರ ಸಾಧನೆ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಚಿಂತನೆಗಳು, ಪ್ರಗತಿಪರ ಆಲೋಚನೆಗಳು ಹಾಗೂ ದೂರದರ್ಶಿತ್ವದ ಫಲವಾಗಿ ಇಂದು ನಾವು ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗಿದೆ. ಅವರ ಆಶಯದಂತೆ ಯುವ ಜನತೆ ಉನ್ನತ ಶಿಕ್ಷಣ ಪಡೆದು ನಾಡಿನ ಹೆಮ್ಮೆಯ ಶಿಲ್ಪಿಗಳಾಗಬೇಕು ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ, ಮಕ್ಕಳ ಬಗ್ಗೆ ಪೋಷಕರು ಹೆಚ್ಚು ಜವಾಬ್ದಾರಿ ವಹಿಸಬೇಕು. ವಿದ್ಯಾರ್ಥಿಗಳು ಮೊಬೈಲ್‍ಗಳಲ್ಲಿ ಒಳ್ಳೆಯ ವಿಚಾರವನ್ನು ಪಡೆದುಕೊಂಡು, ಪುಸ್ತಕ ಓದುವ ಹವ್ಯಾದೊಂದಿಗೆ ಸ್ನೇಹವನ್ನು ಬೆಳೆಸಿಕೊಳ್ಳಬೇಕು. ಧರ್ಮ ಯಾವುದಾದರೇನು ಮನುಷ್ಯ ಒಳ್ಳೆಯವನಾಗಬೇಕು. ಆಗ ಮಾತ್ರ ಸಮಾಜದಲ್ಲಿ ಸುಸ್ಥಿರತೆಯನ್ನು ಕಾಣಲು ಸಾಧ್ಯ ಎಂದರು. ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಪೊನ್ನಪ್ಪ ಮಾತನಾಡಿ, ಮೊದಲು ನಮ್ಮನ್ನು ನಾವು ಅರ್ಥ ಮಾಡಿಕೊಂಡು ಉತ್ತಮ ಶಿಕ್ಷಣವನ್ನು ಪಡೆದುಕೊಂಡರೆ ಸಮಾಜದ ಬಗ್ಗೆ ಅರಿತು ಕೊಳ್ಳಬಹುದು, ಆಗ ಒಳ್ಳೆಯ ಸಮಾಜವನ್ನು ನಿರ್ಮಾಣ ಮಾಡಬಹುದು ಎಂದರು. ಸಮಾಜವನ್ನು ಅರಿತುಕೊಳ್ಳಲು ಪುಸ್ತಕಗಳನ್ನು ಓದುವುದರಿಂದ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿದ ಪುಸ್ತಕವನ್ನು ಹೆಚ್ಚು ಹೆಚ್ಚು ಓದಬೇಕು. ಸಾಧನೆಗೆ ಹೆಣ್ಣು, ಗಂಡು ಎಂಬ ಬೇಧ, ಭಾವವಿಲ್ಲ. ಆದರೆ ಛಲ ಮತ್ತು ಗುರಿ ಇರಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿಯ ಸದಸ್ಯೆ ಪ್ರೇಮಾ ಕೃಷ್ಣಪ್ಪ, ಕುಮಾರ್, ಸಿದ್ದೇಶ್ವರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅತಿಥಿಗಳು ಸನ್ಮಾನಿಸಿ ಗೌರವಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.