Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲೆಯಲ್ಲಿ 13 ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ : ಸಚಿವ ಕೆ.ಜೆ.ಜಾರ್ಜ್*

ನವೆಂಬರ್ 16, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ನ.16 : ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು. ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ. ವಿದ್ಯುತ್ ಉಪ ಕೇಂದ್ರಗಳು ಎಲ್ಲೆಲ್ಲಿ ಅಗತ್ಯವಿದೆ. ಅಂತಹ ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಮುಂದಾಗಲಾಗುವುದು. ಅಕ್ರಮ ಸಕ್ರಮ ಅರ್ಜಿಗಳನ್ನು ಪರಿಶೀಲಿಸಿ ಮುಂದಿನ ಕ್ರಮವಹಿಸಲಾಗುವುದು. ರಾಜ್ಯದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಸೋಲಾರ್ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದರು. ಜಿಲ್ಲೆಯಲ್ಲಿ 636 ಮಂಜೂರಾದ ಹುದ್ದೆಗಳಿದ್ದು, 242 ಮಂದಿ ಕಾರ್ಯನಿರ್ವಹಿಸುತಿದ್ದಾರೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮವಹಿಸಲಾಗುವುದು ಎಂದು ಕೆ.ಜೆ.ಜಾರ್ಜ್ ಅವರು ತಿಳಿಸಿದರು. ಗೃಹಜ್ಯೋತಿ ಯೋಜನೆಯು ರಾಜ್ಯಾದ್ಯಂತ ಉತ್ತಮವಾಗಿ ನಡೆಯುತ್ತಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 1,56,022 ಕುಟುಂಬಗಳು ಹೆಸರು ನೋಂದಣಿ ಮಾಡಿದ್ದು, ಶೇ.99.59 ರಷ್ಟು ಪ್ರಗತಿ ಸಾಧಿಸಲಾಗಿದೆ. ಇದಕ್ಕಾಗಿ ಪ್ರತಿ ತಿಂಗಳು 6.9 ಕೋಟಿ ಸಹಾಯಧನ ಬೇಡಿಕೆ ಇದೆ ಎಂದು ಮಾಹಿತಿ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುದಿಕೇರಿ, ಸಿದ್ದಾಪುರ, ಬಾಳೆಲೆಯಲ್ಲಿ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದ್ದು, ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದೆ ಎಂದರು.
ಹಾಗೆಯೇ ಸಂಪಾಜೆ, ಭಾಗಮಂಡಲ ಭಾಗದಲ್ಲಿಯೂ ಸಹ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ಮುಂದಾಗಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ಇಂಧನ ಇಲಾಖೆಯ ಅಧಿಕಾರಿಯೊಬ್ಬರು ಸಂಪಾಜೆ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಅರಣ್ಯವಿರುವುದರಿಂದ 33 ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‌ಗೌಡ ಅವರು 33 ಕೆ.ವಿ.ವಿದ್ಯುತ್ ಉಪ ಕೇಂದ್ರ ನಿರ್ಮಾಣ ಮಾಡುವುದರಿಂದ ಸಮರ್ಪಕವಾಗಿ ವಿದ್ಯುತ್ ಒದಗಿಸಲು ಸಾಧ್ಯವಿಲ್ಲ. ಆದ್ದರಿಂದ ಭವಿಷ್ಯದ ದೃಷ್ಟಿಯಿಂದ 66 ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣ ಮಾಡುವುದು ಒಳ್ಳೆಯದು ಎಂದು ಅವರು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೆಸ್ಕ್ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ ಅವರು ಸದ್ಯ ಈಗಾಗಲೇ ಇರುವ ಪ್ರಸ್ತಾವನೆಯಂತೆ 33 ಕೆ.ವಿ. ವಿದ್ಯುತ್ ಉಪ ಕೇಂದ್ರವನ್ನು ನಿರ್ಮಿಸಲಿ, ನಂತರ ಮುಂದಿನ ಹಂತದಲ್ಲಿ 66 ಕೆ.ವಿ. ವಿದ್ಯುತ್ ಉಪಕೇಂದ್ರವನ್ನು ನಿರ್ಮಿಸಲು ಪ್ರಯತ್ನಿಸಬಹುದು ಎಂದರು. ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಪಡೆಯುವುದು. ಹಾಗೆಯೇ ಹಾಡಿಗಳು ಸೇರಿದಂತೆ ಕುಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಲಾಗುತ್ತದೆ ಎಂದು ರಮೇಶ್ ಬಂಡಿ ಸಿದ್ದೇಗೌಡ ಅವರು ಹೇಳಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಕಾಮಗಾರಿಗೆ ಬಾಕಿ ಇರುವುದನ್ನು ಶೀಘ್ರವೇ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು. ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಲಾಗುವುದು ಎಂದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಪ್ರಸಕ್ತ ವರ್ಷದ ಮಳೆಗಾಲದ ಸಂದರ್ಭದಲ್ಲಿ ಸೆಸ್ಕ್ ಇಲಾಖೆಯಿಂದ ಉತ್ತಮವಾಗಿ ಕೆಲಸ ನಿರ್ವಹಣೆಯಾಗಿದೆ ಎಂದು ತಿಳಿಸಿದರು. ಮಳೆಗಾಲದ ಸಂದರ್ಭದಲ್ಲಿ ಹಾನಿಯಾಗಿ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಗಳನ್ನು ಬದಲಿಸಿ, ನಿರಂತರ ವಿದ್ಯುತ್ ಪೂರೈಕೆಗೆ ಶ್ರಮಿಸಿದ್ದಾರೆ ಎಂದು ಮಾಹಿತಿ ನೀಡಿದರು. ಪ್ರಸಕ್ತ ವರ್ಷದಲ್ಲಿ 40 ಕ್ಕೂ ಹೆಚ್ಚು ಲೈನ್‌ಮೆನ್‌ಗಳು ಕರ್ತವ್ಯ ನಿರ್ವಹಿಸಿದ ಪರಿಣಾಮ ಉತ್ತಮ ಕಾರ್ಯನಿರ್ವಹಣೆ ಆಗಿದೆ ಎಂದರು. ಪ್ರಸಕ್ತ ವರ್ಷದಲ್ಲಿ ಹೆಚ್ಚಿನ ಮಳೆಯಿಂದಾಗಿ 3,472 ಕಂಬಗಳಿಗೆ ಹಾನಿಯಾಗಿದ್ದು, 12.42 ಎಚ್.ಟಿ ಲೈನ್, 11.12 ಎಲ್‌ಟಿ ಲೈನ್ ಹಾಗೂ 77 ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದು, ಒಟ್ಟು 550.32 ಲಕ್ಷದಷ್ಟು ಹಾನಿಯಾಗಿದೆ ಎಂದು ತಿಳಿಸಿದರು. ಗಂಗಾ ಕಲ್ಯಾಣ ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಯಡಿ ಕಳೆದ ವರ್ಷ 87 ಮತ್ತು 52 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 19 ಮತ್ತು ಕುಡಿಯುವ ನೀರು ಪೂರೈಕೆ ಯೋಜನೆಯಡಿ 76 ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಿಸಲಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಇಂಧನ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.