Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ ವಾಷಿ೯ಕ ಸಮ್ಮೇಳನ : ಕಾಫಿ ಕೃಷಿಕರ ನೆರವಿಗೆ ಸಕಾ೯ರ ಧಾವಿಸಬೇಕು : ಮ್ಯಾಥ್ಯು ಅಬ್ರಾಹಂ*

ನವೆಂಬರ್ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.18 NEWS DESK : ಮಡಿಕೇರಿಯ ಹೊರವಲಯದಲ್ಲಿರುವ ಕ್ಯಾಪಿಟಲ್ ವಿಲೇಜ್ ನಲ್ಲಿ ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ನ 66ನೇ ಎರಡು ದಿನಗಳ ವಾಷಿ೯ಕ ಸಮ್ಮೇಳನ ನಡೆಯುತ್ತಿದ್ದು, ಕೃಷಿ ಯಂತ್ರೋಪಕರಣಗಳು, ಕಾಫಿಯ ಹೊಸ ಅವಿಷ್ಕಾರಗಳ ಬಗೆಗಿನ ಪ್ರದಶ೯ನ ಮಳಿಗೆಗಳು ಗಮನ ಸೆಳೆಯಿತು. ಈ ಸಂದಭ೯ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ದಕ್ಷಿಣ ಭಾರತ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮ್ಯಾಥ್ಯು ಅಬ್ರಾಹಂ ಕಾಮಿ೯ಕರನ್ನೇ ನಂಬಿರುವ ಕಾಫಿ ಉದ್ಯಮವು ಇಂದು ಕವಲುದಾರಿಯಲ್ಲಿದೆ. ಕಾಫಿ ಬೆಳೆಗೆ ಇನ್ನು 3 ವಷ೯ಗಳ ಕಾಲ ಅತ್ಯುತ್ತಮ ಬೆಲೆ ನಿರೀಕ್ಷಿಸಬಹುದಾಗಿದ್ದರೂ ಕಾಫಿ ತೋಟಗಳಲ್ಲಿ ಅಕಾಲಿಕ ಮಳೆ, ಗಾಳಿಯಂಥ ಹವಾಮಾನ ವೈಪರಿತ್ಯದಿಂದಾಗಿ ಕಾಫಿಯ ಉತ್ಪಾದನೆ ನಿರೀಕ್ಷೆಗೂ ಮೀರಿ ಕಡಮೆಯಾಗುತ್ತಿದೆ, ಅಂತೆಯೇ ಅಕಾಲಿಕ ಮಳೆ ಹಾಗೂ ಕಾಮಿ೯ಕರು ಸರಿಯಾದ ಸಮಯಕ್ಕೆ ದೊರಕದ ಹಿನ್ನಲೆಯಲ್ಲಿಯೂ ಕಾಫಿ ಬೆಳೆಯ ಗುಣಮಟ್ಟ ಕೂಡ ಕುಂಠಿತವಾಗಿದೆ, ಈ ಸವಾಲುಗಳನ್ನು ಎದುರಿಸುವುದೇ ಇಂದಿನ ತುತು೯ ಅಗತ್ಯವಾಗಿದೆ ಎಂದು ಹೇಳಿದರು. ಬ್ರೆಜಿಲ್, ಕೊಲಂಬಿಯಾ, ಮೆಕ್ಸಿಕೋದಂಥ ಜಗತ್ತಿನ ಪ್ರಮುಖ ಕಾಫಿ ಬೆಳೆಗಾರ ದೇಶಗಳಲ್ಲಿಯೂ ಈಗ ಕಾಫಿ ಉ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ, ಹೀಗಾಗಿ ಭಾರತದ ಕಾಫಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಮುಂದಿನ 3 ವಷ೯ಗಳ ಕಾಲ ಉತ್ತಮ ಬೇಡಿಕೆ ಲಭಿಸುವ ಎಲ್ಲಾ ಸಾಧ್ಯತೆಗಳಿದೆ, ಹೀಗಿದ್ದಾಗ ಹೆಚ್ಚಿನ ಅಥವಾ ಕಡಮೆ ಮಳೆ, ಜತೆಗೆ ಅಕಾಲಿಕವಾಗಿ ಸುರಿಯುತ್ತಾ ಫಸಲಿನ ಮೇಲೆ ಪರಿಣಾಮ ಬೀರುತ್ತಿರುವ ಮಳೆಯಿಂದಾಗಿ ಭಾರತದಲ್ಲಿಯೂ ಕಾಫಿ ಉತ್ಪಾದನೆ ಇಳಿಮುಖವಾಗಲಿದೆ, ಇದು ಬೆಳೆಗಾರರ ಪಾಲಿಗೆ ಕಳವಳಕಾರಿಯಾದ ವಿಚಾರ ಎಂದು ಅಬ್ರಾಹಂ ವಿಷಾಧಿಸಿದರು. ಕನಾ೯ಟಕದಲ್ಲಿ ಈ ಕೖಷಿ ಸಾಲಿನಲ್ಲಿ ಅರೆಬಿಕಾ ಕಾಫಿಯ ಉತ್ಪಾದನೆಯಲ್ಲಿ ಶೇ, 50 ರಷ್ಟು ಕುಂಠಿತವಾಗಲಿದ್ದು, ಕಾಫಿ ಕೖಷಿಕರ ನೆರವಿಗೆ ಸಕಾ೯ರಗಳು ಇನ್ನಾದರೂ ಬರಬೇಕಾದ ಅನಿವಾಯ೯ತೆ ಸೃಷ್ಟಿಯಾಗಿದೆ ಎಂದೂ ಅವರು ಆಗ್ರಹಿಸಿದರು. ಉಪಾಸಿಯ ಕಾಫಿ ಸಮಿತಿಯ ಅಧ್ಯಕ್ಷ ಸಹದೇವ ಬಾಲಕೃಷ್ಣ  ಮಾಹಿತಿ ನೀಡಿ, ಕಾಫಿಗೆ ಕಳೆದ 4-5 ವಷ೯ಗಳಿಂದ ಸುಸ್ಥಿರವಾದ ಬೆಲೆ ಲಭಿಸುತ್ತಿದೆ, ಆದರೆ, ಕಾಫಿ ಕಣ, ಯಂತ್ರೋಪಕರಣಗಳು, ಕಾಫಿ ಉದ್ಯಮಗಳಿಗೆ ಅಗತ್ಯ ಪರಿಕರಗಳನ್ನು ಖರೀದಿಸಲು ಅಗತ್ಯವಾದ ಅಧಿಕ ಆಥಿ೯ಕ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ, 15 ವಷ೯ಗಳಿಂದಲೂ ಕಾಫಿ ಬೆಳೆಗಾರರು, ಉದ್ಯಮಿಗಳು ಕಷ್ಟದ ದಿನಗಳನ್ನೇ ಎದುರಿಸುತ್ತಾ ಬಂದಿದ್ದಾರೆ ಎಂದು ವಿಷಾಧಿಸಿದರು. ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಕಳ್ಳಿಚಂಡ ರಾಜೀವ್ ಗಣಪತಿ ಮಾತನಾಡಿ, ಕಾಫಿ ಉದ್ಯಮದ ಸಮಸ್ಯೆಗಳ ಪರಿಹಾರಕ್ಕಾಗಿ ಸೂಕ್ತ ರೀತಿಯಲ್ಲಿ ಸಂಶೋಧನೆ ನಡೆಯಬೇಕಾಗಿದೆ, ಅಂತೆಯೇ ಅಗತ್ಯವಾದ ಅಭಿವೖದ್ದಿ ಕಾಯ೯ಯೋಜನೆಗಳೂ ಜಾರಿಯಾಗಬೇಕಾಗಿದೆ, ಹವಾಮನ ವೈಪರಿತ್ಯ, ಕೀಟಗಳ ನಿವಾರಣೆಗೆ ಮಾಗೋ೯ಪಾಯ ಕಂಡುಕೊಳ್ಳುವಿಕೆ, ಕಾಫಿ ಗಿಡಗಳಿಗೆ ತಗುಲುತ್ತಿರುವ ಮಾರಕ ರೋಗ,ಕೀಟಬಾಧೆಗೆ ಪರಿಹಾರ, ಹೊಸ ತಳಿಗಳಿಗೆ ಪ್ರೋತ್ಸಾಹ, ತಾಂತ್ರಿಕತೆಯ ಉನ್ನತೀಕರಣ ಮತ್ತು ಅಭಿವೖದ್ದಿ , ಕಾಫಿ ಉತ್ಪನ್ನಗಳ ಗುಣಮಟ್ಟ ಹೆಚ್ಚಳದ ಬಗ್ಗೆಯೂ ಸಮಗ್ರ ಸಂಶೋಧನೆ ನಡೆಸಲು ಸಕಾ೯ರ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಜಾಗತಿಕ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿ ಮತ್ತು ಟೀಯನ್ನು ಆಂತರಿಕ ಬಳಕೆ ಹೆಚ್ಚಳಕ್ಕೆ ಹೆಚ್ಚು ಪ್ರೋತ್ಸಾಹದ ಪ್ರಚಾರ ನೀಡುವ ಅಗತ್ಯವಿದೆ, ವಿಶ್ವವಿದ್ಯಾನಿಲಯಗಳು ಮತ್ತು ವಿವಿಧ ಸಂಘಸಂಸ್ಥೆಗಳ ಸಹಯೋಗ ಪಡೆದು ಕಾಫಿ ಸೇರಿದಂತೆ ಕೖಷಿ ಬೆಳೆಗಳ ಉತ್ಪಾದನೆ ಹಾಗೂ ಮಾರುಕಟ್ಟೆ ವೖದ್ದಿಗೆ ಸಕಾ೯ರ ಯೋಜನೆ ರೂಪಿಸುವಂತಾಗಬೇಕೆಂದೂ ರಾಜೀವ್ ಸಲಹೆ ನೀಡಿದರು. ಸುದ್ದಿಗೋಷ್ಟಿಯಲ್ಲಿ ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ಉಪಾಧ್ಯಕ್ಷ ಎ.ಅರವಿಂದ್ ರಾವ್, ಉಪಾಸಿಯ ಉಪಾಧ್ಯಕ್ಷ ಅಜಯ್ ತಿಮ್ಮಯ್ಯ, ಕಾಯ೯ದಶಿ೯ ಆರ್.ಸಂಜಿತ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.