
ಸೋಮವಾರಪೇಟೆ NEWS DESK ನ.19 : ಸೋಮವಾರಪೇಟೆಯ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಪುಟ್ಟಪ್ಪ ವೃತ್ತದಲ್ಲಿ ಆಚರಿಸಲಾಯಿತು. ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ಎಚ್.ಬಿ.ರಾಜಪ್ಪ ಹಾಗೂ ಪದಾಧಿಕಾರಿಗಳು ಇದ್ದರು.








