Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಿಜೆಪಿಯಿಂದ ದಿನಪೂರ್ತಿ ಧರಣಿ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಿಜೆಪಿಯಿಂದ ದಿನಪೂರ್ತಿ ಧರಣಿ ಸತ್ಯಾಗ್ರಹ*

ನವೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.20 NEWS DESK : ಕೃಷಿ ಟುವಟಿಕೆಗಳ ಮೂಲಕ ಬದುಕು ಕಟ್ಟಿಕೊಂಡಿರುವ ರೈತ ಸಮುದಾಯದ ಬದುಕಿಗೆ ಆತಂಕ ಮೂಡಿಸಿರುವ ಕರಾಳ “ವಕ್ಫ್ ಕಾಯ್ದೆ”ಯನ್ನು ಹಿಂಪಡೆಯಬೇಕು ಮತ್ತು ಹಗರಣಗಳಲ್ಲಿ ಮುಳುಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ನ.22 ರಂದು ಕೊಡಗು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ದಿನಪೂರ್ತಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಶ್ರೀ ಚೌಡೇಶ್ವರಿ ದೇಗುಲದ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು, ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಜ.ತಿಮ್ಮಯ್ಯ ವೃತ್ತವನ್ನು ಹಾದು ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ. ಬಳಿಕ ಸಂಜೆ 5 ಗಂಟೆಯವರೆಗೆ ಧರಣಿ ಮುಷ್ಕರ ನಡೆಸಲಾಗುವುದು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಒಂದಿಲ್ಲ ಒಂದು ಹಗರಣಗಳು ನಡೆಯುತ್ತಲೆ ಇದೆ. ಒಂದು ಸಮುದಾಯದ ಓಲೈಕೆಗಾಗಿ ತುಷ್ಟೀಕರಣ ನೀತಿಯನ್ನು ಅನುಸರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಸಂವಿಧಾನದ ಆಶಯಗಳಿಗೆ ತಕ್ಕಂತೆ ವಕ್ಫ್ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದರು. ವಕ್ಫ್ ಸಂಬಂಧಿ ಸಮಸ್ಯೆಗಳನ್ನು ನ್ಯಾಯಾಲಯಗಳಲ್ಲು ಪ್ರಶ್ನಿಸಲು ಅವಕಾಶವಿಲ್ಲ ಎಂದಾದಲ್ಲಿ ಅಂತಹ ವಕ್ಫ್ ಕಾಯ್ದೆಯನ್ನು ಶಾಶ್ವತವಾಗಿ ಹಿಂದಕ್ಕೆ ಪಡೆಯುವ ಮೂಲಕ ಅದನ್ನು ಸಂವಿಧಾನದ ಪರಿಮಿತಿಗೆ ತರಬೇಕಾಗಿದೆ ಎಂದು ತಿಳಿಸಿದರು.
ಮುಡಾ ಪ್ರಕರಣದ ತನಿಖೆಗೂ ಮುನ್ನವೆ ತಾವು ಪಡೆದ ಮುಡಾ ನಿವೇಶನಗಳನ್ನು ಹಿಂದಕ್ಕೆ ನೀಡುವ ಮೂಲಕ ತಾವು ತಪ್ಪಿತಸ್ಥರೆಂದು ಮುಖ್ಯಮಂತ್ರಿಗಳೆ ಒಪ್ಪಿಕೊಂಡಂತಾಗಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣವಾಗಿಲ್ಲ, 85 ಕೋಟಿಯಷ್ಟೆ ಎನ್ನುವ ಮೂಲಕ ಮತ್ತೆ ಹಗರಣ ನಡೆಸಿರುವುದನ್ನು ಒಪ್ಪಿಕೊಂಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಎಂದು ಟೀಕಿಸಿದ ನಾಪಂಡ ರವಿ ಕಾಳಪ್ಪ, ಸರ್ಕಾರವನ್ನು ವಜಾ ಗೊಳಿಸಬೇಕೆಂದು ಪ್ರತಿಭಟನೆಯ ಮೂಲಕ ರಾಜ್ಯಪಾಲರನ್ನು ಒತ್ತಾಯಿಸಲಾಗುತ್ತದೆ ಎಂದರು. ಪ್ರತಿಭಟನೆ ಸಂದರ್ಭ ಜಿಲ್ಲೆಯ ಸಿ ಮತ್ತು ಡಿ ದರ್ಜೆಯ ಜಾಗವನ್ನು ಅರಣ್ಯ ಎಂದು ಘೋಷಿಸುವ ಸರ್ಕಾರದ ಕ್ರಮವನ್ನು, ಜಿಲ್ಲೆಯ 5 ಏಕರೆಗಿಂತ ಕಡಿಮೆ ಇರುವ ರೈತರ ಜಾಗವನ್ನು 11 ಇ ಸ್ಕೆಚ್ ಮಾಡದಂತೆ ಹೊರಡಿಸಿರುವ ಆದೇಶವನ್ನು, ಹದಗೆಟ್ಟ ಜಿಲ್ಲೆಯ ರಸ್ತೆಗಳ ದುರಸ್ತಿ ಕಾರ್ಯ ನಡೆಸದಿರುವ ಕ್ರಮ, ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಪಡಿಸುತ್ತಿರುವ ಧೋರಣೆಯನ್ನು ಖಂಡಿಸಲಾಗುತ್ತದೆ ಎಂದು ತಿಳಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅತ್ಯಂತ ಕೀಳು ಮಟ್ಟದಿಂದ, ಅವಹೇಳನಕಾರಿಯಾಗಿ ಟೀಕಿಸಿರುವ ಸಚಿವ ಜಮೀರ್ ಅಹಮ್ಮದ್‍ರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರರುಗಳಾದ ಬಿ.ಕೆ.ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್ ಹಾಗೂ ಕಾಂಗೀರ ಸತೀಶ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.