Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
  • *ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*
  • *ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ : ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ : ಪುಸ್ತಕ ಅಧ್ಯಯನದಿಂದ ಜ್ಞಾನ ವೃದ್ಧಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ

ನವೆಂಬರ್ 20, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.20 NEWS DESK : ಪುಸ್ತಕಗಳ ಅಧ್ಯಯನದಿಂದ ಜ್ಞಾನ ವಿಸ್ತಾರ ಹೆಚ್ಚಾಗಲಿದೆ. ಆದ್ದರಿಂದ ಒಳ್ಳೆಯ ಪುಸ್ತಕಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ, ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಪ್ರಯುಕ್ತ ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇತಿಹಾಸ ತಿಳಿಯಬೇಕಿದ್ದಲ್ಲಿ ಪುಸ್ತಕಗಳ ಅಧ್ಯಯನ ಅತ್ಯಗತ್ಯ. ರಾಜ್ಯ, ರಾಷ್ಟ್ರ, ಅಂತರ ರಾಷ್ಟ್ರೀಯ, ವಿಜ್ಞಾನ, ತಂತ್ರಜ್ಞಾನ, ಆಧುನಿಕತೆ ಹೀಗೆ ಪ್ರತಿಯೊಂದು ವಿಚಾರಗಳನ್ನು ತಿಳಿದುಕೊಳ್ಳುವಂತಾಗಲು ಪುಸ್ತಕಗಳ ಅಧ್ಯಯನ ಅತ್ಯಗತ್ಯ ಎಂದು ಹೇಳಿದರು. ಯುವ ಜನರಲ್ಲಿ ಓದಿನ ಬಗ್ಗೆ ಹಂಬಲ ಇರಬೇಕು. ಇಂದಿನ ಆಧುನಿಕ ಯುಗದಲ್ಲಿ ಡಿಜಿಟಲ್ ಲೈಬ್ರರಿ ಸಹ ಇದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪುಸ್ತಕ ಅಧ್ಯಯನ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಆರ್.ಐಶ್ವರ್ಯ ಸಲಹೆ ನೀಡಿದರು. ಗಂಧದ ಮರದ ಮಹತ್ವ ಗೊತ್ತಿದ್ದಲ್ಲಿ ಯಾವುದಕ್ಕೆ ಬಳಸಬೇಕು ಎಂದು ತಿಳಿಯುತ್ತದೆ. ಇಲ್ಲದಿದ್ದರೆ ಕಟ್ಟಿಗೆಗೆ ಬಳಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಂದರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದರು. ಡಾ.ಬಿ.ಆರ್.ಅಂಬೇಡ್ಕರ್ ಅವರು 60 ರಿಂದ 70 ಸಾವಿರ ಪುಸ್ತಕಗಳನ್ನು ಅಧ್ಯಯನ ಮಾಡಿದ್ದಾರೆ. ಅವರ ಜ್ಞಾನ ಭಂಡಾರವೇ ಒಂದು ರೀತಿ ಗ್ರಂಥಾಲಯ, ರಾಷ್ಟ್ರಕವಿ ಕುವೆಂಪು, ಅಮೆರಿಕಾದ ಬೂಕರ್ ವಾಷಿಂಗ್‍ಟನ್, ಡಿ.ವಿ.ಗುಂಡಪ್ಪ, ಮಹಾಭಾರತದ ಪಾತ್ರಗಳು, ಭಗವದ್ಗೀತೆ, ಬೈಬಲ್, ಕುರಾನ್, ಹೀಗೆ ಪ್ರತಿಯೊಂದನ್ನು ಅಧ್ಯಯನ ಮಾಡುವುದರಿಂದ ಪ್ರಬುದ್ಧತೆ ಹೆಚ್ಚಾಗಲಿದೆ ಎಂದು ವಿವರಿಸಿದರು. ಸಾಹಿತಿ ಉ.ರಾ.ನಾಗೇಶ್ ಅವರು ಮಾತನಾಡಿ ಪುಸ್ತಕಗಳು ಜ್ಞಾನವನ್ನು ವೃದ್ಧಿಸಲು ಸಹಕಾರಿ. ಭಾಷೆ, ಬರಹ, ಬಣ್ಣ, ಭಾವನೆ ಇವು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಮಾತಿನ, ನುಡಿಯ ರೂಪದಲ್ಲಿ ಬರಹದಲ್ಲಿಯೂ ಕೂಡ ಕಾಣಬಹುದಾಗಿದೆ ಎಂದರು. ಪುಸ್ತಕಗಳು ಇಲ್ಲದಿದ್ದರೆ ಇತಿಹಾಸ ಹಾಗೂ ವಿಜ್ಞಾನದ ಮಹತ್ವವನ್ನು ತಿಳಿಯುವುದು ಕಷ್ಟಸಾಧ್ಯವಾಗುತ್ತಿತ್ತು. ಆದ್ದರಿಂದ ಪುಸ್ತಕಗಳು ಭವಿಷ್ಯದ ಆಧಾರ ಸ್ತಂಭಗಳು ಎಂದು ಉ.ರಾ.ನಾಗೇಶ್ ಬಣ್ಣಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು ಮಾತನಾಡಿ ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿಗೆ ಸರ್ಕಾರದಿಂದ ಪ್ರೋತ್ಸಾಹಿಸಲಾಗುತ್ತಿದೆ. ಪಿಎಂಶ್ರೀ ಮೂರು ಶಾಲೆಗಳಿಗೆ ಡಿಜಿಟಲ್ ಗ್ರಂಥಾಲಯ ನಿರ್ವಹಿಸಲಾಗುತ್ತಿದೆ. ಸಾರ್ವಜನಿಕ ಗ್ರಂಥಾಲಯ, ಗ್ರಾಮ ಪಂಚಾಯಿತಿ ಗ್ರಂಥಾಲಯ ಇವುಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು ಎಂದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ರೇಣುಶ್ರೀ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ್ ಎಂ.ಎನ್., ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸುರೇಖಾ, ಕೋರಂಗಾಲ ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕಿ ನಾಗವೇಣಿ, ಸಹಾಯಕ ಗ್ರಂಥಪಾಲಕ ವಿಜಯ್ ನಾಗ್ ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 9 NEWS DESK  : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ…

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026

*ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ : ಮಡಿಕೇರಿಯ ಅನ್ವಿತ್.ಎಸ್ ಚಾಂಪಿಯನ್*

ಮೇ 9, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.