Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ನವೆಂಬರ್ 21, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.21 NEWS DESK : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ 2024-25 ನೇ ಸಾಲಿಗೆ ರೈತರಿಂದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿ.1 ರಿಂದ ಆರಂಭವಾಗಲಿದ್ದು, ಈ ಅವಕಾಶವನ್ನು ರೇತರು ಬಳಸಿಕೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯಲಿದೆ ಎಂದು ಅವರು ತಿಳಿಸಿದರು. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 1 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2300 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 4290 ರೂ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 5 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಹಾಗೂ ವಿರಾಜಪೇಟೆ ಪಟ್ಟಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ. ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‍ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ರೈತರ ನೋಂದಣಿ ತಾಂತ್ರಿಕ ತೊಂದರೆಗಳು ಕಂಡು ಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಖರೀದಿ ಏಜೆನ್ಸಿಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾತನಾಡಿ ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ತಿಳಿಸಿದರು. ಸರಕಾರವು ಪೌಷ್ಟಿಕಾಂಶವುಳ್ಳ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿ?ನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾದ್ಯವಿರುವುದಿಲ್ಲ ಎಂದು ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು. ನೋಂದಣಿ ಕೇಂದ್ರದಲ್ಲಿ ಸಿಬ್ಬಂದಿ ಮತ್ತು ಡೇಟಾ ಎಂಟ್ರಿ ಆಪರೇಟರ್‍ಗಳ ನೇಮಕ, ಕಂಪ್ಯೂಟರ್, ಇಂಟರ್‍ನೆಟ್ ಸೌಲಭ್ಯ, ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಸಲಹೆ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೂಕ ಮತ್ತು ಅಳತೆ ವಿಭಾಗದ ಸಹಾಯಕ ನಿಯಂತ್ರಕರಾದ ಸರಳಾ ನಾಯರ್, ಕರ್ನಾಟಕ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕರಾದ ಸೋಮಯ್ಯ, ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ಸಮಿತಿಯ ಫರ್ನಾಂಡೀಸ್, ಉಗ್ರಾಣ ನಿಗಮದ ವ್ಯವಸ್ಥಾಪಕರಾದ ನಾಗ ನಾಯಕ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಯಶೋಧ, ಆಹಾರ ಇಲಾಖೆ ನಿರೀಕ್ಷಕರಾದ ಸ್ವಾತಿ, ನಿಶಾನ್, ವೀಣಾ, ಯಶಸ್ವಿನಿ, ಕಿರಣ್, ನಾಗೇಂದ್ರ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.18 NEWS DESK : ಮಕ್ಕಳಿಗೆ ಪ್ರಾಯೋಗಿಕವಾಗಿ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವ ಮೂಲಕ, ಅವರಲ್ಲಿ ಕೃಷಿ…

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.